ಪಶ್ಚಿಮ ಬಂಗಾಳದಲ್ಲಿ ಕಚ್ಚಾ ಬಾಂಬ್ ಬಳಸಿ ತೃಣಮೂಲ ಕಾಂಗ್ರೆಸ್ ನಾಯಕನ ಕೊಲೆ
ಪಶ್ಚಿಮ ಬಂಗಾಳದ 24 ದಕ್ಷಿಣ ಪರಗಣ ಜಿಲ್ಲೆಯ ಕಾಕದ್ವೀಪ್‌ನಲ್ಲಿ ಕಳೆದ ತಡರಾತ್ರಿ ಅಪರಿಚಿತ ದುಷ್ಕರ್ಮಿಗಳು ತೃಣಮೂಲ ಕಾಂಗ್ರೆಸ್‌ನ...

ಕಾಕದ್ವೀಪ್ : ಪಶ್ಚಿಮ ಬಂಗಾಳದ 24 ದಕ್ಷಿಣ ಪರಗಣ ಜಿಲ್ಲೆಯ ಕಾಕದ್ವೀಪ್‌ನಲ್ಲಿ ಕಳೆದ ತಡರಾತ್ರಿ ಅಪರಿಚಿತ ದುಷ್ಕರ್ಮಿಗಳು ತೃಣಮೂಲ ಕಾಂಗ್ರೆಸ್‌ನ ನಾಯಕರೊಬ್ಬರ ಮೇಲೆ ಕಚ್ಚಾ ಬಾಂಬ್ ದಾಳಿ ನಡೆಸಿ ಕೊಲೆ ಮಾಡಿದ್ದಾರೆ.
ವಿಧಾನಸಭಾ ಚುನಾವಣೆಗೆ ಮುನ್ನವೇ ನಡೆದಿರುವ ಈ ಕಗ್ಗೊಲೆ ಈ ಪ್ರದೇಶದಲ್ಲಿ ತೀವ್ರ ಉದ್ವಿಗ್ನ ವಾತಾವರಣವನ್ನು ಸೃಷ್ಟಿಸಿದೆ.
ಟಿಎಂಸಿ ನಾಯಕ ಹಾಜಿ ಅಬ್ದುಲ್ ಜಹೇಲ್ ಮುಲ್ಲಾ (75), ಸ್ಥಳೀಯ ಟಿಎಂಸಿ ಅಭ್ಯರ್ಥಿ ಮಂತುರಾಮ್ ಪಕೀರಾ ಅವರ ಪರ ಚುನಾವಣಾ ಪ್ರಚಾರಾಭಿಯಾನದ ಸಭೆ ಮುಗಿಸಿ ರಾತ್ರಿ 11.30ರ ಹೊತ್ತಿಗೆ ಮನೆಗೆ ವಾಪಾಸಾಗುತ್ತಿದ್ದರು. ಈ ವೇಳೆ ಅಬ್ದುಲ್ ಜಹೇಲ್ ಅವರನ್ನು ಅಪರಿಚಿತ ಹಂತಕರು ಕಚ್ಚಾ ಬಾಂಬ್ ಸಿಡಿಸಿ ಕೊಂದಿದ್ದಾರೆ. ದಾಳಿಯ ತೀವ್ರತೆಯಿಂದ ಅವರು ಸ್ಥಳದಲ್ಲೇ ಅಸುನೀಗಿದ್ದಾರೆ.
ಈ ಕೃತ್ಯ ನಡೆಯುತ್ತಿದ್ದಂತೆಯೇ ಜನರು ಸ್ಥಳದಲ್ಲಿ ಜಮಾಯಿಸಿತೊಡಗಿದಾಗ ಹಂತಕರು ಗಾಳಿಯಲ್ಲಿ ಗುಂಡು ಹಾರಿಸಿ ಜನರನ್ನು ಬೆದರಿಸುತ್ತಾ ತಮ್ಮ ವಾಹನದಲ್ಲಿ ಪರಾರಿಯಾಗಿದ್ದಾರೆ.
ಈ ಕೊಲೆ ಕೃತ್ಯದ ಹಿಂದೆ ಸಿಪಿಎಂ ಕಾರ್ಯಕರ್ತರ ಕೈವಾಡವಿರಬಹುದೆಂದು ಟಿಎಂಸಿ ಆರೋಪಿಸಿದೆ. ಆದರೆ ಪಕ್ಷದೊಳಗಿನ ಬಣಗಳ ಜಗಳದಿಂದಾಗಿ ಅಬ್ದುಲ್ ಅವರನ್ನು ಕೊಲೆ ಮಾಡಲಾಗಿದೆ ಎಂದು ಸಿಪಿಎಂ ಹೇಳಿದೆ.ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


