ಸರ್ಕಾರ ರಚನೆ ಹಿನ್ನೆಲೆ: ಜಮ್ಮು-ಕಾಶ್ಮೀರ ಬಿಜೆಪಿ ಶಾಸಕರ ಸಭೆ
ಜಮ್ಮು-ಕಾಶ್ಮೀರದಲ್ಲಿ ಬಿಜೆಪಿ- ಪಿಡಿಪಿ ಸರ್ಕಾರ ರಚನೆಯಾಗಲಿರುವ ಹಿನ್ನೆಲೆಯಲ್ಲಿ ಬಿಜೆಪಿ ಶಾಸಕರು ಸಭೆ ನಡೆಸಿದ್ದಾರೆ.

ಶ್ರೀನಗರ: ಜಮ್ಮು-ಕಾಶ್ಮೀರದಲ್ಲಿ ಬಿಜೆಪಿ- ಪಿಡಿಪಿ ಮೈತ್ರಿ ಸರ್ಕಾರ ರಚನೆಯಾಗಲಿರುವ ಹಿನ್ನೆಲೆಯಲ್ಲಿ ಬಿಜೆಪಿ ಶಾಸಕರು ಸಭೆ ನಡೆಸಿದ್ದಾರೆ.
ಪ್ರಧಾನಿ ಕಚೇರಿಯ ರಾಜ್ಯ ಸಚಿವರಾಗಿರುವ ಜಿತೇಂದ್ರ ಸಿಂಗ್, ಬಿಜೆಪಿ ಪ್ರಧಾನ ಕಾರ್ಯದರ್ಶಿ, ಜಮ್ಮು-ಕಾಶ್ಮೀರ ಉಸ್ತುವಾರಿ ರಾಮ್ ಮಾಧವ್ ಸಹ ಸಭೆಯಲ್ಲಿ ಭಾಗವಹಿಸಿದ್ದರು. ಸರ್ಕಾರ ರಚನೆ ಸಂಬಂಧ ಇತ್ತೀಚಿನ ಬೆಳವಣಿಗೆಗಳ ಬಗ್ಗೆ ಶಾಸಕರ ಸಭೆಯಲ್ಲಿ ಚರ್ಚೆ ನಡೆಸಲಾಗಿದೆ ಎಂದು ತಿಳಿದುಬಂದಿದೆ.
ಮೊದಲ ಬಾರಿ ಸರ್ಕಾರ ರಚನೆ ಮಾಡಿದ ಸಂದರ್ಭದಲ್ಲಿ ಉಭಯ ಪಕ್ಷಗಳಿಗೂ ಒಪ್ಪಿಗೆಯಾಗಿದ್ದ ಷರತ್ತುಗಳನ್ನು ಹೊರತುಪಡಿಸಿ ಹೊಸ ಷರತ್ತುಗಳಿಗೆ ಒಪ್ಪಿಗೆ ನೀಡಲಾಗಿಲ್ಲ ಎಂದು ಬಿಜೆಪಿ ಪುನರುಚ್ಚರಿಸಿದೆ. ಮೆಹಬೂಬಾ ಮುಫ್ತಿ ನೇತೃತ್ವದ ಸರ್ಕಾರ ರಚನೆ ಕುರಿತು ಶೀಘ್ರವೇ ಬಿಜೆಪಿಯ ಜಂಟಿ ಸಮನ್ವಯ ಸಮಿತಿಸಭೆ ನಡೆಯಲಿದೆ ಎಂದು ಜಿತೇಂದ್ರ ಸಿಂಗ್ ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


