ಅಂಬೇಡ್ಕರ್ ಗೆ ನೋಬೆಲ್ ಪ್ರಶಸ್ತಿ ನೀಡಬೇಕು: ರಾಮ್ ವಿಲಾಸ್ ಪಾಸ್ವಾನ್
ಬಿ.ಆರ್ ಅಂಬೇಡ್ಕರ್ ಅವರಿಗೆ ನೋಬೆಲ್ ಪ್ರಶಸ್ತಿ ನೀಡಬೇಕೆಂದು ಕೇಂದ್ರ ಸಚಿವ ರಾಮ್ ವಿಲಾಸ್ ಪಾಸ್ವಾನ್ ಒತ್ತಾಯಿಸಿದ್ದಾರೆ.

ಮುಂಬೈ: ಬಿ.ಆರ್ ಅಂಬೇಡ್ಕರ್ ಅವರಿಗೆ ನೋಬೆಲ್ ಶಾಂತಿ ಪ್ರಶಸ್ತಿ ನೀಡಬೇಕೆಂದು ಕೇಂದ್ರ ಸಚಿವ ರಾಮ್ ವಿಲಾಸ್ ಪಾಸ್ವಾನ್ ಒತ್ತಾಯಿಸಿದ್ದಾರೆ.
ನೋಬೆಲ್ ಪ್ರಶಸ್ತಿಗೆ ಅರ್ಹರಾಗಿರುವ ಅಂಬೇಡ್ಕರ್ ಅವರಿಗೆ ಡಾ.ಮಾರ್ಟಿನ್ ಲೂಥರ್ ಕಿಂಗ್ ಹಾಗೂ ನೆಲ್ಸನ್ ಮಂಡೇಲಾ ಅವರಂತೆಯೇ ಪ್ರಶಸ್ತಿ ನೀಡಿ ಗೌರವಿಸಬೇಕು ಬಡವರು ಹಾಗೂ ನಿರ್ಲಕ್ಷ್ಯಕ್ಕೊಳಗಾದವರ ಅಭಿವೃದ್ಧಿಗೆ ಶ್ರಮಿಸಿದ್ದ ಅಂಬೇಡ್ಕರ್ ಅವರಿಗೆ ನೋಬೆಲ್ ಪ್ರಶಸ್ತಿ ಘೋಷಣೆಯಾಗುವವರೆಗೂ ಅವಿರತ ಪ್ರಯತ್ನ ನಡೆಸುವುದಾಗಿ ಪಾಸ್ವಾನ್ ಭರವಸೆ ನೀಡಿದ್ದಾರೆ.
ಎಲ್ ಜೆ ಪಿ ಪಕ್ಷದ ಕಾರ್ಯಕರ್ತರು ಅಂಬೇಡ್ಕರ್ ಅವರಿಗೆ ನೋಬೆಲ್ ಪ್ರಶಸ್ತಿ ನೀಡುವ ಅಗತ್ಯತೆ ಬಗ್ಗೆ ಜನಜಾಗೃತಿ ಮೂಡಿಸಲಿದ್ದಾರೆ, ಜನಾಂಗೀಯ ತಾರತಮ್ಯ ಹೋಗಲಾಡಿಸಲು ಶ್ರಮಿಸಿದ್ದ ಮಾರ್ಟಿನ್ ಲೂಥರ್ ಕಿಂಗ್ ಗೆ 1964 ರಲ್ಲಿ ನೆಲ್ಸನ್ ಮಂಡೇಲಾ ಅವರಿಗೆ 1993 ರಲ್ಲಿ ನೋಬೆಲ್ ಪ್ರಶಸ್ತಿ ನೀಡಲಾಗಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


