ದೇಶ

ಸಿಯಾಚಿನ್ ನಲ್ಲಿ ಹಿಮಪಾತ: ನಾಪತ್ತೆಯಾಗಿದ್ದ ಮತ್ತೊಬ್ಬ ಯೋಧನ ಪಾರ್ಥಿವ ಶರೀರ ಪತ್ತೆ

ಜಮ್ಮು ಮತ್ತು ಕಾಶ್ಮೀರದ ಲಡಾಕ್ ಪ್ರದೇಶದ ಸೀಯಾಚಿನ್ ನಲ್ಲಿ ಶುಕ್ರವಾರ ಸಂಭವಿಸಿದ ಹಿಮಾಪಾತದಲ್ಲಿ..

ಸಿಯಾಚಿನ್ ನಲ್ಲಿ ಹಿಮಪಾತ: ನಾಪತ್ತೆಯಾಗಿದ್ದ ಮತ್ತೊಬ್ಬ ಯೋಧನ ಪಾರ್ಥಿವ ಶರೀರ ಪತ್ತೆ
ಸುನಿಲ್ ರೈ
Published On :
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಲಡಾಕ್ ಪ್ರದೇಶದ ಸೀಯಾಚಿನ್ ನಲ್ಲಿ ಶುಕ್ರವಾರ ಸಂಭವಿಸಿದ ಹಿಮಾಪಾತದಲ್ಲಿ ನಾಪತ್ತೆಯಾಗಿದ್ದ ಮತ್ತೊಬ್ಬ ಯೋಧನ ಮೃತದೇಹ ಶನಿವಾರ ಪತ್ತೆಯಾಗಿದೆ.
ನಿನ್ನೆ ಸಂಭವಿಸಿದ ಹಿಮಪಾತದಲ್ಲಿ ಇಬ್ಬರು ಯೋಧರು ನಾಪತ್ತೆಯಾಗಿದ್ದರು. ಆ ಪೈಕಿ ಓರ್ವ ಯೋಧನನ್ನು ನಿನ್ನೆಯೇ ರಕ್ಷಿಸಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಲಾನ್ಸ್ ಹವಿಲ್ದಾರ್ ಭವನ್ ತಮಂಗ್ ಮೃತಪಟ್ಟಿದ್ದರು. 
ನಾಪತ್ತೆಯಾಗಿದ್ದ ಮತ್ತೊಬ್ಬ ಯೋಧ ರೈಫಲ್ ಮ್ಯಾನ್ ಸುನಿಲ್ ರೈ ಅವರ ಪಾರ್ಥಿವ ಶರೀರವನ್ನು ಹಿಮದ ರಾಶಿ ಅಡಿಯಿಂದ ಇಂದು ಬೆಳಗ್ಗೆ ಹೊರತೆಗೆಯಲಾಗಿದೆ ಎಂದು ರಕ್ಷಣಾ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ತಮಗ್ ಅವರು ಪತ್ನಿ, ಆರು ವರ್ಷದ ಮಗ ಹಾಗೂ ತಂದೆ, ತಾಯಿಯನ್ನು ಅಗಲಿದ್ದಾರೆ. ರೈ ಅವರು ತಂದೆ, ತಾಯಿ ಹಾಗೂ ಇಬ್ಬರು ಕಿರಿಯ ಸಹೋದರರನ್ನು ಅಗಲಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.