ದೇಶ

ಬೆಂಗಳೂರಿನ ಫಾದರ್ ಟಾಮ್ ಪತ್ತೆಗೆ ಎಲ್ಲಾ ರೀತಿಯ ಪ್ರಯತ್ನ: ಸುಷ್ಮಾ

ಬೆಂಗಳೂರಿನ ಫಾದರ್ ಟಾಮ್ ಉಳುನ್ನಲಿಲ್ ಅವರನ್ನು ಸುರಕ್ಷಿತವಾಗಿ ಕರೆತರಲು ಸರ್ಕಾರ ಪ್ರಾಮಾಣಿಕ ಪ್ರಯತ್ನ ಮಾಡುತ್ತಿರುವುದಾಗಿ ವಿದೇಶಾಂಗ ಸಚಿವೆ

ಬೆಂಗಳೂರಿನ ಫಾದರ್ ಟಾಮ್ ಪತ್ತೆಗೆ ಎಲ್ಲಾ ರೀತಿಯ ಪ್ರಯತ್ನ: ಸುಷ್ಮಾ
ಸುಷ್ಮಾ ಸ್ವರಾಜ್
Published On :

ನವದೆಹಲಿ: ಬೆಂಗಳೂರಿನ ಫಾದರ್ ಟಾಮ್ ಉಳುನ್ನಲಿಲ್ ಅವರನ್ನು ಸುರಕ್ಷಿತವಾಗಿ ಕರೆತರಲು ಸರ್ಕಾರ ಪ್ರಾಮಾಣಿಕ ಪ್ರಯತ್ನ ಮಾಡುತ್ತಿರುವುದಾಗಿ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಭರವಸೆ ನೀಡಿದ್ದಾರೆ.

ಟಾಮ್ ಅವರನ್ನು ಅಪಹರಿಸಿದವರು ಎಲ್ಲಿ ಇರಿಸಿಕೊಂಡಿದ್ದಾರೆ ಎನ್ನುವ ಬಗ್ಗೆ ಮಾಹಿತಿ ಸಂಗ್ರಹಿಸಲಾಗುತ್ತಿದೆ. ಅಪಹೃತರಿಂದ ಅವರನ್ನು ಸುರಕ್ಷಿತವಾಗಿ ಕರೆತರುವ ಬಗ್ಗೆ ಸರ್ಕಾರ ಎಲ್ಲಾ ರೀತಿಯಿಂದಲೂ ಪ್ರಯತ್ನಿಸುತ್ತಿದೆ. ಈಗಾಗಲೇ ಘಟನೆಯ ವಿವರಗಳನ್ನೆಲ್ಲ ಪಡೆಯಲಾಗಿದೆ. ತಜ್ಞರ ಜತೆ ಮಾತುಕತೆ ನಡೆಸಿ ಅವರನ್ನು ಹುಡುಕುವ ಪ್ರಯತ್ನ ನಡೆಯುತ್ತಿದೆ ಎಂದು ಹೇಳಿದ್ದಾರೆ.

ಬೆಂಗಳೂರಿನಲ್ಲಿ ದಶಕಗಳ ಕಾಲ ಪಾದ್ರಿಯಾಗಿ ಕಾರ್ಯನಿರ್ವಹಿಸಿದ್ದ ಟಾಮ್ ಅವರು ಮಾರ್ಚ್ 4ರಂದು ಯೆಮನ್​ನಿಂದ ಅಪಹರಣಕ್ಕೆ ಒಳಗಾಗಿದ್ದಾರೆ ಎನ್ನಲಾಗಿದೆ. ನಾಲ್ವರು ಬಂದೂಕುಧಾರಿಗಳು ಅಪಹರಿಸಿದ್ದು, ಇವರು ಆಸಿಸ್ ಉಗ್ರರು ಎನ್ನುವ ಅನುಮಾನ ಬಲವಾಗಿದೆ. ಈ ಹಿನ್ನೆಲೆಯಲ್ಲಿ ಸಾಕಷ್ಟು ಕಟ್ಟೆಚ್ಚರದಲ್ಲಿ ಹುಡುಕಾಟ ನಡೆದಿದೆ.

ಟಾಮ್ ಅವರು ಯೆಮನ್​ನ ಮದರ್ ತೆರೆಸಾ ಮಿಷನರಿಯಲ್ಲಿ ಸೇವೆ ಸಲ್ಲಿಸುತ್ತಿದ್ದರು. ಮಾರ್ಚ್ 4ರಂದು ಈ ವ್ರದ್ಧಾಶ್ರಮದ ಮೇಲೆ ದಾಳಿ ನಡೆದ ಸಂದರ್ಭದಲ್ಲಿ 16 ಮಂದಿಯನ್ನು ಹತ್ಯೆಗೈಯ್ಯಲಾಗಿತ್ತು. ಅದೇ ವೇಳೆ ಟಾಮ್ ಅವರನ್ನು ಅಪಹರಿಸಲಾಗಿತ್ತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.