ದೇಶ

ಲಿಬಿಯಾ: ಮೃತಪಟ್ಟ ನರ್ಸ್, ಮಗುವಿನ ಮೃತದೇಹ ಕರೆತರುವ ಪ್ರಯತ್ನ ಮಾಡುತ್ತಿದ್ದೇವೆ: ಚಾಂಡಿ

ಲಿಬಿಯಾದ ಸಬ್ರಾಥ ನಗರದಲ್ಲಿ ನಡೆಸಲಾಗಿರುವ ಶೆಲ್ ದಾಳಿಯಲ್ಲಿ ಮೃತಪಟ್ಟಿರುವ ಭಾರತದ ಕೇರಳ ಮೂಲದ ನರ್ಸ್ ಹಾಗೂ ಆಕೆಯ ಮಗುವಿನ ಮೃತ ದೇಹವನ್ನು ರಾಜ್ಯಕ್ಕೆ...

ಲಿಬಿಯಾ: ಮೃತಪಟ್ಟ ನರ್ಸ್, ಮಗುವಿನ ಮೃತದೇಹ ಕರೆತರುವ ಪ್ರಯತ್ನ ಮಾಡುತ್ತಿದ್ದೇವೆ: ಚಾಂಡಿ
ಕೇರಳ ಮುಖ್ಯಮಂತ್ರಿ ಉಮ್ಮನ್ ಚಾಂಡಿ
Published On :

ಕೇರಳ: ಲಿಬಿಯಾದ ಸಬ್ರಾಥ ನಗರದಲ್ಲಿ ನಡೆಸಲಾಗಿರುವ ಶೆಲ್ ದಾಳಿಯಲ್ಲಿ ಮೃತಪಟ್ಟಿರುವ ಭಾರತದ ಕೇರಳ ಮೂಲದ ನರ್ಸ್ ಹಾಗೂ ಆಕೆಯ ಮಗುವಿನ ಮೃತ ದೇಹವನ್ನು ರಾಜ್ಯಕ್ಕೆ ಕರೆತರುವ ಎಲ್ಲಾ ಪ್ರಯತ್ನಗಳನ್ನು ಮಾಡುತ್ತಿದ್ದೇವೆಂದು ಕೇರಳ ಮುಖ್ಯಮಂತ್ರಿ ಉಮ್ಮನ್ ಚಾಂಡಿ ಅವರು ಶನಿವಾರ ಹೇಳಿದ್ದಾರೆ.

ಈ ಕುರಿತಂತೆ ಮಾತನಾಡಿರುವ ಚಾಂಡಿ ಅವರು, ಲಿಬಿಯಾದಲ್ಲಿ ನಡೆದಿರುವ ಶೆಲ್ ದಾಳಿಯಲ್ಲಿ ಮಲಯಾಳಿ ತಾಯಿ ಹಾಗೂ ಆಕೆಯ ಮಗು ಸಾವನ್ನಪ್ಪಿರುವುದಾಗಿ ತಿಳಿದುಬಂದಿದೆ. ಈಗಾಗಲೇ ಲಿಬಿಯಾದಲ್ಲಿ ನೆಲೆಸಿರುವ ಕೇರಳ ಮೂಲದವರೊಂದಿಗೆ ಮಾತುಕತೆ ನಡೆಸಲಾಗಿದೆ. ಮಾತುಕತೆ ವೇಳೆ ರಾಯಭಾರಿ ಕಚೇರಿಯಿಂದ ಸಹಾಯವನ್ನು ಬಯಸುತ್ತಿದ್ದಾರೆ. ಈಗಾಗಲೇ ಭಾರತದ ರಾಯಭಾರಿ ಕಚೇರಿ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಿದ್ದು, ಮೃತಪಟ್ಟ ತಾಯಿ, ಮಗುವಿನ ಮೃತದೇಹವನ್ನು ರಾಜ್ಯಕ್ಕೆ ಕರೆತರುವ ಪ್ರಯತ್ನಗಳನ್ನು ಮಾಡಲಾಗುತ್ತಿದೆ ಎಂದು ಹೇಳಿದ್ದಾರೆ.

ಇನ್ನು ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಕೂಡ ಲಿಬಿಯಾದಲ್ಲಿರುವ ಕೇರಳಿಗರ ರಕ್ಷಣೆಗಾಗಿ ಏನನ್ನೂ ಬೇಕಾದರೂ ಮಾಡಲು ಸಿದ್ಧನಿದ್ದೇನೆಂದು ಹೇಳಿದ್ದಾರೆಂದು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.