ರಾವತ್ ರಿಂದ ಕುದುರೆ ವ್ಯಾಪಾರ:ಬಂಡಾಯ ಶಾಸಕರು; ಆರೋಪ ನಿರಾಕರಿಸಿದ ಉತ್ತರಾಖಂಡ್ ಸಿಎಂ
ಉತ್ತರಾಖಂಡ್ ಮುಖ್ಯಮಂತ್ರಿ ಹರಿಶ್ ರಾವತ್ ಅವರು ಕುದುರೆ ವ್ಯಾಪಾರ ನಡೆಸುತ್ತಿದ್ದಾರೆ ಎಂದು ಬಂಡಾಯ ಕಾಂಗ್ರೆಸ್ ಶಾಸಕರು...

Published On :
ಡೆಹ್ರಾಡೂನ್: ಉತ್ತರಾಖಂಡ್ ಮುಖ್ಯಮಂತ್ರಿ ಹರಿಶ್ ರಾವತ್ ಅವರು ಕುದುರೆ ವ್ಯಾಪಾರ ನಡೆಸುತ್ತಿದ್ದಾರೆ ಎಂದು ಬಂಡಾಯ ಕಾಂಗ್ರೆಸ್ ಶಾಸಕರು ಆರೋಪಿಸಿದ್ದಾರೆ. ಆದರೆ ಈ ಆರೋಪವನ್ನು ತಳ್ಳಿಹಾಕಿರುವ ರಾವತ್, ನನ್ನ ವಿರುದ್ಧ ಸುಳ್ಳು ಆರೋಪ ಮಾಡಲಾಗುತ್ತಿದೆ ಮತ್ತು ಈ ಸಂಬಂಧ ಬಿಡುಗಡೆಯಾಗಿರುವ ಸಿಡಿ ನಕಲಿ ಎಂದು ಶನಿವಾರ ಹೇಳಿದ್ದಾರೆ.
ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಹರಿಶ್ ರಾವತ್, ತಮ್ಮ ವಿರುದ್ಧದ ಕುಟುಕು ಕಾರ್ಯಾಚರಣೆ ರಾಜಕೀಯ ಪಿತೂರಿಯಾಗಿದ್ದು, ನನ್ನ ಗೌರವಕ್ಕೆ ಧಕ್ಕೆ ತರಲು ಈ ಸಿಡಿ ಬಿಡುಗಡೆ ಮಾಡಿದ್ದಾರೆ ಎಂಬುದು ಎಲ್ಲರಿಗೂ ಸ್ಪಷ್ಟವಾಗುತ್ತದೆ ಎಂದರು.
ಸ್ಥಳೀಯ ವಾಹಿನಿಯೊಂದರ ಮಾಲೀಕರು ನಡೆಸಿದ ಕುಟುಕು ಕಾರ್ಯಾಚರಣೆಯ ಸಿಡಿಯನ್ನು ಬಂಡಾಯ ಕಾಂಗ್ರೆಸ್ ಶಾಸಕರು ಬಿಡುಗಡೆ ಮಾಡಿದ್ದರು. ಅಲ್ಲದೆ ರಾವತ್ ಅವರು ತಮ್ಮ ಸರ್ಕಾರ ಉಳಿಸಿಕೊಳ್ಳಲು ಕುದುರೆ ವ್ಯಾಪಾರ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದರು.
ಮಾರ್ಚ್ 23ರಂದು ಈ ಕುಟುಕು ಕಾರ್ಯಾಚರಣೆ ನಡೆಸಲಾಗಿದ್ದು, ಅದರಲ್ಲಿ ಸಿಎಂ ಹರಿಶ್ ರಾವತ್ ಅವರು ಬಂಡಾಯ ಶಾಸಕರನ್ನು ಖರೀದಿಸುವ ಬಗ್ಗೆ ಮಾತನಾಡಿದ್ದಾರೆ ಎಂದು ಆರೋಪಿಸಿಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


