ದೇಶ

ಹಣ, ತೋಳ್ಬಲದ ಮೂಲಕ ಬಿಜೆಪಿ, ಸರ್ಕಾರವನ್ನು ಅಸ್ಥಿರಗೊಳಿಸಲು ಯತ್ನಿಸುತ್ತಿದೆ: ಹರೀಶ್ ರಾವತ್

ಬಿಜೆಪಿ ಪ್ರಜಾಪ್ರಭುತ್ವವನ್ನು ಕೊಲೆ ಮಾಡಲು ಪ್ರಯತ್ನಿಸುತ್ತಿದೆ ಎಂದು ಟೀಕಿಸಿದ ಉತ್ತರಾಖಂಡ ಮುಖ್ಯಮಂತ್ರಿ ಹರೀಶ್ ರಾವತ್...

ಹಣ, ತೋಳ್ಬಲದ ಮೂಲಕ ಬಿಜೆಪಿ, ಸರ್ಕಾರವನ್ನು ಅಸ್ಥಿರಗೊಳಿಸಲು ಯತ್ನಿಸುತ್ತಿದೆ: ಹರೀಶ್ ರಾವತ್
ಉತ್ತರಾಖಂಡ ಮುಖ್ಯಮಂತ್ರಿ ಹರೀಶ್ ರಾವತ್
Published On :

ಡೆಹ್ರಾಡೂನ್, ನವದೆಹಲಿ: ಬಿಜೆಪಿ ಪ್ರಜಾಪ್ರಭುತ್ವವನ್ನು ಕೊಲೆ ಮಾಡಲು ಪ್ರಯತ್ನಿಸುತ್ತಿದೆ ಎಂದು ಟೀಕಿಸಿದ ಉತ್ತರಾಖಂಡ ಮುಖ್ಯಮಂತ್ರಿ ಹರೀಶ್ ರಾವತ್, ರಾಷ್ಟ್ರಪತಿ ಆಡಳಿತ ಹೇರಿಕೆಗೆ ಒಂದು ವಿಧಾನ, ನಿಯಮವೆಂಬುದಿದೆ. ಬಿಜೆಪಿಗೆ ತಕ್ಕ ಉತ್ತರ ನೀಡಲು ನಾವು ಜನರ ಬಳಿಗೆ ಹೋಗಲು ಸಿದ್ಧವಿದ್ದೇವೆ ಎಂದು ಅವರು ಹೇಳಿದರು.

ಅವರು ಇಂದು ಸುದ್ದಿಗಾರರೊಂದಿಗೆ ಮಾತನಾಡಿ, ಬಿಜೆಪಿಯವರು ಹಣಬಲ, ತೋಳ್ಬಲಗಳಿಂದ ಪ್ರಜಾಪ್ರಭುತ್ವದ ಮೇಲೆ ದಾಳಿ ಮಾಡಿದ್ದಾರೆ. ರಾಜ್ಯಪಾಲರನ್ನು ವಜಾಗೊಳಿಸಿ ಎಂದು ಮಾಜಿ ಮುಖ್ಯಮಂತ್ರಿಗಳೊಬ್ಬರು ನಿನ್ನೆ ಕೇಳಿದ ರೀತಿ ಖಂಡನೀಯವಾದದ್ದು. ಬಲಪಂಥೀಯ ಜನರು ಪ್ರಜಾಪ್ರಭುತ್ವವನ್ನು ಕೊಲ್ಲುವ ಬಿಜೆಪಿಯ ಪ್ರಯತ್ನವನ್ನು ಖಂಡಿಸಬೇಕು ಎಂದು ಹೇಳಿದರು.

ಕಳೆದ ರಾತ್ರಿ ಬಂದ ವರದಿ ಪ್ರಕಾರ ವಿಧಾನಸಭಾಧ್ಯಕ್ಷರು ಮುಖ್ಯಮಂತ್ರಿಯವರೊಂದಿಗೆ ಮಾತುಕತೆ ನಡೆಸಿದ ನಂತರ 9 ಬಂಡಾಯ ಶಾಸಕರನ್ನು ಅನರ್ಹಗೊಳಿಸಿದ್ದಾರೆ.  ಈ ಶಾಸಕರನ್ನು ಅನರ್ಹಗೊಳಿಸಿದರೆ ವಿಧಾನಸಭೆಯ ಸದಸ್ಯ ಬಲ 70ರಿಂದ 61ಕ್ಕೆ ಇಳಿಯುತ್ತದೆ. ಆಡಳಿತಾರೂಢ ಕಾಂಗ್ರೆಸ್ 27 ಶಾಸಕರನ್ನು ಹೊಂದಿರುತ್ತದೆ. ಅಲ್ಲದೆ ಪಿಡಿಪಿಯಿಂದ 6 ಶಾಸಕರಿರುತ್ತಾರೆ. ಒಟ್ಟು 33 ಶಾಸಕರಾಗುತ್ತಾರೆ. ನಾಳೆ ವಿಧಾನಸಭೆಯಲ್ಲಿ ಕಾಂಗ್ರೆಸ್ ವಿಶ್ವಾಸಮತ ಸಾಬೀತುಪಡಿಸಬೇಕು. ಬಿಜೆಪಿಯಲ್ಲಿ 28 ಶಾಸಕರಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.