ದೆಹಲಿಯಲ್ಲಿ ರೂಪದರ್ಶಿ ಆತ್ಮಹತ್ಯೆ, ಪತಿ ಬಂಧನ
ದಕ್ಷಿಣ ದೆಹಲಿಯ ಡಿಫೇನ್ಸ್ ಕಾಲೋನಿಯಲ್ಲಿನ ಅಪಾರ್ಟ್ ಮೆಂಟಿನಲ್ಲಿ ವಿವಾಹಿತ ರೂಪದರ್ಶಿ ಮೃತದೇಹ ಪತ್ತೆಯಾಗಿದ್ದು, ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದೆ...

ನವದೆಹಲಿ: ದಕ್ಷಿಣ ದೆಹಲಿಯ ಡಿಫೇನ್ಸ್ ಕಾಲೋನಿಯಲ್ಲಿನ ಅಪಾರ್ಟ್ ಮೆಂಟಿನಲ್ಲಿ ವಿವಾಹಿತ ರೂಪದರ್ಶಿ ಮೃತದೇಹ ಪತ್ತೆಯಾಗಿದ್ದು, ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದೆ.
ರೂಪದರ್ಶಿ 25 ವರ್ಷದ ಪ್ರಿಯಾಂಕ ಎಂದು ಗುರುತಿಸಲಾಗಿದ್ದು, ಆಕೆಯ ಕೋಣೆಯಲ್ಲಿ ಎರಡು ಪುಟಗಳ ಡೆತ್ ನೋಟ್ ಪತ್ತೆಯಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ. ತಿಂಗಳಿನ ಹಿಂದೆಯಷ್ಟೇ ಪ್ರಿಯಾಂಕ ದೆಹಲಿಯ ಪಬ್ ಮಾಲಕ ನಿತಿನ್ ಚೌಹಾಲ ಎಂಬುವರೊಂದಿಗೆ ವಿವಾಹವಾಗಿತ್ತು. ಬಳಿಕ ನಿತಿನ್ ವರದಕ್ಷಿಣೆಗಾಗಿ ಪೀಡಿಸುತ್ತಿದ್ದ ಎನ್ನಲಾಗಿದೆ.
ತನ್ನ ಗಂಡ ವರದಕ್ಷಿಣೆಗಾಗಿ ಕಿರುಕುಳ ನೀಡುತ್ತಿದ್ದನು. ಈ ಹಿನ್ನಲೆಯಲ್ಲಿ ಮನನೊಂದು ಆತ್ಮಹತ್ಯೆಗೆ ಶರಣಾಗಿರುವುದಾಗಿ ಡೆತ್ ನೋಟ್ ನಲ್ಲಿ ತಿಳಿಸಿದ್ದಾರೆ. ಪ್ರಿಯಾಂಕ ಶುಕ್ರವಾರ-ಶನಿವಾರದ ಮಧ್ಯ ರಾತ್ರಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರಬಹುದೆಂದು ಪೊಲೀಸರು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


