ಉತ್ತರಾಖಂಡ್ ನಲ್ಲಿ ರಾಷ್ಟ್ರಪತಿ ಆಡಳಿತ: ಪ್ರಜಾಪ್ರಭುತ್ವದ ಕಗ್ಗೊಲೆ ಎಂದ ಕಾಂಗ್ರೆಸ್
ಉತ್ತರಾಖಂಡ್ ನಲ್ಲಿ ಕೇಂದ್ರ ಸರ್ಕಾರ ರಾಷ್ಟ್ರಪತಿ ಆಡಳಿತ ಹೇರಿರುವುದು 'ಅಸಂವಿಧಾನಿಕ' ಎಂದು ಕಟುವಾಗಿ ಟೀಕಿಸಿರುವ ಕಾಂಗ್ರೆಸ್...

ಡೆಹರಾಡೂನ್/ನವದೆಹಲಿ: ಉತ್ತರಾಖಂಡ್ ನಲ್ಲಿ ಕೇಂದ್ರ ಸರ್ಕಾರ ರಾಷ್ಟ್ರಪತಿ ಆಡಳಿತ ಹೇರಿರುವುದು 'ಅಸಂವಿಧಾನಿಕ' ಎಂದು ಕಟುವಾಗಿ ಟೀಕಿಸಿರುವ ಕಾಂಗ್ರೆಸ್, ಇದು ಪ್ರಜಾಪ್ರಭುತ್ವದ ಕಗ್ಗೊಲೆ ಎಂದು ಹೇಳಿದೆ.
ಉತ್ತರಪ್ರದೇಶದಲ್ಲಿ ಕಾಂಗ್ರೆಸ್ ಸರ್ಕಾರವನ್ನು ವಜಾಗೊಳಿಸಿ ರಾಷ್ಟ್ರಪತಿ ಆಡಳಿತ ಹೇರಿರುವುದಕ್ಕೆ ಪ್ರತಿಕ್ರಿಯಿಸಿರುವ ಕಾಂಗ್ರೆಸ್ ವಕ್ತಾರ ಅಭಿಷೇಕ್ ಮನು ಸಿಂಘ್ವಿ ಇದೊಂದು ಪ್ರಜಾಪ್ರಭುತ್ವದ ಕಗ್ಗೊಲೆ. ರಾಷ್ಟ್ರಪತಿ ಆಡಳಿತ ಹೇರಿರುವ ಕೇಂದ್ರ ಸರ್ಕಾರಕ್ಕೆ ಪ್ರಜಾಪ್ರಭುತ್ವದಲ್ಲಿ ನಂಬಿಕೆ ಇಲ್ಲ ಎಂದು ಹೇಳಿದ್ದಾರೆ.
ಪ್ರಜಾಪ್ರಭುತ್ವವಲ್ಲದ ಮತ್ತು ಅಸಂವಿಧಾನಿಕ ರೀತಿಯಲ್ಲಿ ಸಣ್ಣ ರಾಜ್ಯಗಳಲ್ಲಿನ ಸರ್ಕಾರವನ್ನು ಉರುಳಿಸುವುದು ಕೇಂದ್ರ ಸರ್ಕಾರದ ನಿಜವಾದ ಬಯಕೆಯಾಗಿದೆ ಎಂದು ಸಿಂಘ್ವಿ ಆರೋಪಿಸಿದ್ದಾರೆ.
ಮಾಜಿ ಮುಖ್ಯಮಂತ್ರಿ ಹರೀಶ್ ರಾವತ್ ಅವರ ವಿರುದ್ಧ 9 ಮಂದಿ ಕಾಂಗ್ರೆಸ್ ಶಾಸಕರು ಭಂಡಾಯದ ಬಾವುಟ ಹಾರಿಸಿದ್ದರು. ಈ ಸಂಬಂಧ ನಿನ್ನೆ ಸಂಪುಟ ಸಭೆಯಲ್ಲಿ ರಾಷ್ಟ್ರಪತಿ ಆಡಳಿತ ಹೇರುವಂತೆ ಶಿಫಾರಸ್ಸು ಮಾಡಲಾಗಿತ್ತು. ಈ ಶಿಫಾರಸ್ಸಿಗೆ ರಾಷ್ಟ್ರಪತಿ ಪ್ರಣಬ್ ಮುಖರ್ಜಿಯವರು ಅಧಿಕೃತ ಒಪ್ಪಿಗೆ ನೀಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


