ಬೆಲ್ಜಿಯಂ ಸೇನೆಯಿಂದ ಪ್ರಧಾನಿ ಮೋದಿಗೆ 3 ಹಂತದ ಭದ್ರತೆ
ಬೆಲ್ಜಿಯಂನ ಬ್ರಸೆಲ್ಸ್ ನಲ್ಲಿ ಮಾರ್ಚ್ 30ರಂದು ನಡೆಯಲಿರುವ ಯುರೋಪಿಯನ್ ಒಕ್ಕೂಟದ ಶೃಂಗಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಗವಹಿಸಲಿದ್ದು, ...

ನವದೆಹಲಿ: ಬೆಲ್ಜಿಯಂನ ಬ್ರಸೆಲ್ಸ್ ನಲ್ಲಿ ಮಾರ್ಚ್ 30ರಂದು ನಡೆಯಲಿರುವ ಯುರೋಪಿಯನ್ ಒಕ್ಕೂಟದ ಶೃಂಗಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಗವಹಿಸಲಿದ್ದು, ಬೆಲ್ಜಿಯಂ ಸೇನೆಯು ಮೂರು ಹಂತದಲ್ಲಿ ಭದ್ರತೆ ಒದಗಿಸಲಿದೆ.
ಬ್ರಸೆಲ್ಸ್ ವಿಮಾನ ನಿಲ್ದಾಣದ ಮೇಲೆ ನಡೆದ ದಾಳಿ ಹಿನ್ನೆಲೆಯಲ್ಲಿ ಮೋದಿ ಪ್ರವಾಸ ರದ್ದುಗೊಳಿಸಲಿದ್ದಾರೆ ಎಂದು ಹೇಳಲಾಗಿತ್ತು. ಆದರೆ, ಬ್ರಿಟನ್ ಸೇರಿದಂತೆ ಎಲ್ಲ ರಾಷ್ಟ್ರಗಳು ಭಾಗವಹಿಸುವುದಾಗಿ ತಿಳಿಸಿದ ಹಿನ್ನೆಲೆಯಲ್ಲಿ ಮೋದಿ ಕೂಡ ಭಾಗವಹಿಸುವುದು ಖಚಿತವಾಗಿದೆ. ಪ್ರವಾಸದ ವೇಳೆ ಬೆಲ್ಜಿಯಂ ಪ್ರಧಾನಿ ಚಾರ್ಲ್ಸ್ ಮೈಕೆಲ್ ಜತೆಗೆ ದ್ವಿಪಕ್ಷೀಯ ಮಾತುಕತೆಯನ್ನು ನಡೆಸಲಿದ್ದಾರೆ.
ಅಮೆರಿಕ ಅಧ್ಯಕ್ಷ ಬರಾಕ್ ಒಬಾಮ ಅವರು ಮಾ.31 ಹಾಗೂ ಏ.1ರಂದು ವಾಷಿಂಗ್ಟನ್ನಲ್ಲಿ ನಾಲ್ಕನೇ ಪರಮಾಣು ಸುರಕ್ಷತಾ ಸಮಾವೇಶವನ್ನು ಆಯೋಜಿಸಿದ್ದಾರೆ. ಇದರಲ್ಲಿ ಪಾಲ್ಗೊಳ್ಳುವ ಸಲುವಾಗಿ ತೆರಳಲಿರುವ ಮೋದಿ ಮಾರ್ಗಮಧ್ಯೆ ಬ್ರಸೆಲ್ಸ್ನಲ್ಲಿ ನಡೆಯುವ ಯುರೋಪಿಯನ್ ಶೃಂಗದಲ್ಲಿ ಭಾಗವಹಿಸಲಿದ್ದಾರೆ. ಸ್ವದೇಶಕ್ಕೆ ಹಿಂತಿರುಗಿ ಬರುವ ಮಾರ್ಗದಲ್ಲಿ ಮೋದಿ ರಿಯಾದ್ನಲ್ಲಿ ತಂಗಲಿದ್ದು, ಸೌದಿ ಅರೇಬಿಯಾ ಸರ್ಕಾರದ ಜತೆಗೂ ಮಾತುಕತೆ ನಡೆಸಲಿದ್ದಾರೆ.
ಪ್ರಧಾನಿಯಾದ ಬಳಿಕ ಇದೇ ಮೊದಲ ಬಾರಿಗೆ ಬೆಲ್ಜಿಯಂಗೆ ಭೇಟಿ ನೀಡುತ್ತಿರುವ ಪ್ರಧಾನಿ ನರೇಂದ್ರ ಮೋದಿ 12 ಸಾವಿರಕ್ಕೂ ಅಧಿಕ ಅನಿವಾಸಿ ಭಾರತೀಯರನ್ನು ಉದ್ದೇಶಿಸಿ ಮಾತ ನಾಡಲಿದ್ದಾರೆ. ಮಾ.30ರಂದು ಕಾರ್ಯಕ್ರಮ ಆಯೋಜಿಸಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


