ದೇಶ

ಸೈನಾ ನೆಹ್ವಾಲ್ ,ರವಿಶಂಕರ್ ಗುರೂಜಿ ಸೇರಿ 56 ಗಣ್ಯರಿಗೆ ಪದ್ಮ ಪುರಸ್ಕಾರ ಪ್ರದಾನ

ಆಧ್ಯಾತ್ಮ ಗುರು ಶ್ರೀ ರವಿಶಂಕರ್ ಗುರೂಜಿ ಸೇರಿದಂತೆ ದೇಶದ 56 ಗಣ್ಯರಿಗೆ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ರಾಷ್ಟ್ರಪತಿ ಭವನದಲ್ಲಿ ಪದ್ಮ ಪುರಸ್ಕಾರ ಪ್ರದಾನ ಮಾಡಿದರು.

ಸೈನಾ ನೆಹ್ವಾಲ್ ,ರವಿಶಂಕರ್ ಗುರೂಜಿ ಸೇರಿ 56 ಗಣ್ಯರಿಗೆ ಪದ್ಮ ಪುರಸ್ಕಾರ ಪ್ರದಾನ
ರಾಷ್ಟ್ರಪತಿಗಳಿಂದ ಪ್ರಶಸ್ತಿ ಸ್ವೀಕರಿಸುತ್ತಿರುವ ಸಂಜಯ್ ಲೀಲಾ ಬನ್ಸಾಲಿ
Published On :

ನವದೆಹಲಿ: ಆಧ್ಯಾತ್ಮ ಗುರು ಶ್ರೀ ರವಿಶಂಕರ್ ಗುರೂಜಿ ಸೇರಿದಂತೆ ದೇಶದ 56 ಗಣ್ಯರಿಗೆ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ರಾಷ್ಟ್ರಪತಿ ಭವನದಲ್ಲಿ ಪದ್ಮ ಪುರಸ್ಕಾರ ಪ್ರದಾನ ಮಾಡಿದರು.

ಪ್ರಶಸ್ತಿ ಸ್ವೀಕರಿಸಿರುವ ಗಣ್ಯರಲ್ಲಿ ಪದ್ಮ ವಿಭೂಷಣ ಗೌರವಕ್ಕೆ ಪಾತ್ರರಾದ ಧೀರೂಬಾಯಿ ಅಂಬಾನಿ (ಮರಣೋತ್ತರ), ಜಮ್ಮು ಕಾಶ್ಮೀರ ಮಾಜಿ ರಾಜ್ಯಪಾಲ ಜಗಮೋಹನ್, ಆಧ್ಯಾತ್ಮ ಗುರು ಶ್ರೀ ರವಿಶಂಕರ್‌ ಗುರೂಜಿ, ಪದ್ಮಭೂಷಣ ಗೌರವಕ್ಕೆ ಪಾತ್ರರಾಗಿರುವ ಬಾಲಿವುಟ್‌ ನಟ ಅನುಪಮ್‌ ಖೇರ್‌, ನಿರ್ದೇಶಕ ರಾಜಮೌಳಿ, ಅಜಯ್‌ ದೇವಗನ್‌, ಬ್ಯಾಡ್ಮಿಂಟನ್‌ ಆಟಗಾರ್ತಿ ಸೈನಾ ನೆಹ್ವಾಲ್‌, ವಿನೋದ್‌ ರಾಯ್‌, ಪದ್ಮಶ್ರೀ ಗೌರವಕ್ಕೆ ಪಾತ್ರರಾದ ಇಸ್ರೋದ ಎಂ. ಅಣ್ಣಾದೊರೈ ಅವರನ್ನು ಪುರಸ್ಕರಿಸಲಾಗಿದೆ.

ಈ ಬಾರಿ ಒಟ್ಟು 112 ಗಣ್ಯರಿಗೆ ಪದ್ಮ ಪುರಸ್ಕಾರಗಳನ್ನು ಪ್ರಕಟಿಸಲಾಗಿತ್ತು. ಈ ಪೈಕಿ 56 ಗಣ್ಯರಿಗೆ  ಪದ್ಮ ಪುರಸ್ಕಾರ ಮಾಡಲಾಗಿದ್ದು, ಇನ್ನುಳಿದ 56 ಗಣ್ಯರಿಗೆ ಮುಂದಿನ ತಿಂಗಳು ಪದ್ಮ ಪ್ರಶಸ್ತಿ ಪ್ರದಾನ ನಡೆಯಲಿದೆ. ಪದ್ಮ ಪುರಸ್ಕಾರ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ಹಿರಿಯ ನಾಯಕ ಎಲ್‌.ಕೆ ಅಡ್ವಾಣಿ ಉಪಸ್ಥಿತರಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.