ದೇಶ

ಉತ್ತರಾಖಂಡ್ ರಾಷ್ಟ್ರಪತಿ ಆಡಳಿತಕ್ಕೆ ತಡೆ, ಹೈಕೋರ್ಟ್ ಆದೇಶ ಪ್ರಶ್ನಿಸಲು ಕೇಂದ್ರ ನಿರ್ಧಾರ

ಉತ್ತರಾಖಂಡ್ ರಾಷ್ಟ್ರಪತಿ ಆಡಳಿತಕ್ಕೆ ತಡೆ ನೀಡಿ, ಬಹುಮತ ಸಾಬೀತಿಗೆ ಅವಕಾಶ ನೀಡಿರುವ ಉತ್ತರಾಖಂಡ್ ಹೈಕೋರ್ಟ್ ನ ಏಕ ಸದಸ್ಯ...

ಉತ್ತರಾಖಂಡ್ ರಾಷ್ಟ್ರಪತಿ ಆಡಳಿತಕ್ಕೆ ತಡೆ, ಹೈಕೋರ್ಟ್ ಆದೇಶ ಪ್ರಶ್ನಿಸಲು ಕೇಂದ್ರ ನಿರ್ಧಾರ
ಉತ್ತರಾಖಂಡ್ ಹೈಕೋರ್ಟ್ - ಹರೀಶ್ ರಾವತ್
Published On :
ನವದೆಹಲಿ: ಉತ್ತರಾಖಂಡ್ ರಾಷ್ಟ್ರಪತಿ ಆಡಳಿತಕ್ಕೆ ತಡೆ ನೀಡಿ, ಬಹುಮತ ಸಾಬೀತಿಗೆ ಅವಕಾಶ ನೀಡಿರುವ ಉತ್ತರಾಖಂಡ್ ಹೈಕೋರ್ಟ್ ನ ಏಕ ಸದಸ್ಯ ಪೀಠದ ಆದೇಶ ಪ್ರಶ್ನಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ.
ಉತ್ತರಾಖಂಡ್ ಹೈಕೋರ್ಟ್ ಆದೇಶದ ಬಗ್ಗೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿರುವ ಕೇಂದ್ರ ಸರ್ಕಾರ, ರಾಷ್ಟ್ರಪತಿ ಆಡಳಿತಕ್ಕೆ ಯಾವುದೇ ಕೋರ್ಟ್ ತಡೆ ನೀಡಲು ಅವಕಾಶ ಇಲ್ಲ. ಅದು ರಾಷ್ಟ್ರಪತಿ ಆಡಳಿತ ಜಾರಿಯಲ್ಲಿರುವ ರಾಜ್ಯದಲ್ಲಿ ಯಾವುದೇ ಕೋರ್ಟ್ ಬಹುಮತ ಸಾಬೀತಿಗೆ ಆದೇಶಿಸಲು ಬರುವುದಿಲ್ಲ ಎಂದಿದೆ. ಅಲ್ಲದೆ ಏಕ ಸದಸ್ಯ ಪೀಠದ ಆದೇಶವನ್ನು ವಿಭಾಗೀಯ ಪೀಠದಲ್ಲಿ ಪ್ರಶ್ನಿಸುವುದಾಗಿ ಹೇಳಿದೆ.
ಉತ್ತರಾಖಂಡ್ ದಲ್ಲಿನ ರಾಷ್ಟ್ರಪತಿ ಆಡಳಿತಕ್ಕೆ ಇಂದು ತಡೆ ನೀಡಿರುವ ನೈನಿತಾಲ್ ಹೈಕೋರ್ಟ್, ಮಾರ್ಚ್ 31ಕ್ಕೆ ಬಹುಮತ ಸಾಬೀತುಪಡಿಸುವಂತೆ ಮುಖ್ಯಮಂತ್ರಿ ಹರೀಶ್ ರಾವತ್ ಅವರಿಗೆ ಸೂಚಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.