ಹಣದಿಂದ ಸರ್ಕಾರ ಉರುಳಿಸಲು ಬಿಜೆಪಿ ಪ್ರಯತ್ನ: ತರುಣ್ ಗಗೊಯ್
ಸರ್ಕಾರ ಉರುಳಿಸಲು ಬಿಜೆಪಿ 100 ಕೋಟಿ ರು. ಹಣ ವ್ಯಮಾಡುತ್ತಿದೆ ಎಂದು ಅಸ್ಸಾಂ ಮುಖ್ಯಮಂತ್ರಿ ತರುಣ್ ಗಗೋಯ್ ಆರೋಪಿಸಿದ್ದಾರೆ...

ಗುವಾಹಟಿ: ಸರ್ಕಾರ ಉರುಳಿಸಲು ಬಿಜೆಪಿ 100 ಕೋಟಿ ರು. ಹಣ ವ್ಯಮಾಡುತ್ತಿದೆ ಎಂದು ಅಸ್ಸಾಂ ಮುಖ್ಯಮಂತ್ರಿ ತರುಣ್ ಗಗೋಯ್ ಆರೋಪಿಸಿದ್ದಾರೆ.
ರಾಜ್ಯಪಾಲರ ನೆರವು ಪಡೆದು ಕೊಂಡು ಬಿಜೆಪಿ ಹಿಮಾಚಲ ಪ್ರದೇಶ ಸರ್ಕಾರವನ್ನು ಕೆಡವುತ್ತಿದೆ. ಎಂದು ಹೇಳಿರುವ ಗಗೋಯ್ ದೇಶದಲ್ಲಿ ಕಾಂಗ್ರೆಸ್ ಆಡಳಿತವಿರುವ ರಾಜ್ಯಗಳ ಸರ್ಕಾರವನ್ನು ಅಸ್ಥಿರಗೊಳಿಸಲು ಬಿಜೆಪಿ ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದ್ದಾರೆ.
ಬಿಜೆಪಿ ಹೆಚ್ಚೆಚ್ಚು ಹಣ ವ್ಯಯಿಸಿ ಅಸ್ಸಾಂ ಸರ್ಕಾರವನ್ನು ಕೆಡವಲು ಪ್ರಯತ್ನ ನಡೆಸುತ್ತಿದೆ. ಕಾಂಗ್ರೆಸ್ ನ ಕೆಲ ಶಾಸಕರನ್ನು ಖರೀದಿಸಲು ಬಿಜೆಪಿ ಪ್ರಯತ್ನ ನಡೆಸಿತು. ಆದರೆ ಅದು ಸಫಲವಾಗಲಿಲ್ಲ ಎಂದು ಆರೋಪಿಸಿದ್ದಾರೆ.
ಅಸ್ಸಾಂ ನಲ್ಲಿ ಪ್ರಧಾನಿ ನರೇಂದ್ರ ಮೋದಿ ನಡೆಸಿದ ರ್ಯಾಲಿ ಸಂಬಂಧ ವಾಗ್ದಾಳಿ ನಡೆಸಿದ ಗಗೋಯ್ , ಅಸ್ಸಾಂ ರಾಜ್ಯಪಾಲ ಪದ್ಮನಾಭ ಬಾಲಕೃಷ್ಣ ಆಚಾರ್ಯ ಬಿಜೆಪಿ ಜೊತೆ ಕೈ ಜೋಡಿಸಿದ್ದಾರೆ.ಕೇಂದ್ರ ಸರ್ಕಾರ ಅಸ್ಸಾಂಗೆ ಖಾಯಂ ರಾಜ್ಯಪಾಲರನ್ನು ನೇಮಿಸದೇ ಆರ್ ಎಸ್ ಎಸ್ ನ ವ್ಯಕ್ತಿಗಳನ್ನು ಕಂದು ಕೂರಿಸಿದೆ ಎಂದು ಆರೋಪಿಸಿದ್ದಾರೆ,
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


