ಉತ್ತರಾಖಂಡ್ ರಾಷ್ಟ್ರಪತಿ ಆಡಳಿತಕ್ಕೆ ಹೈಕೋರ್ಟ್ ತಡೆ, ಬಹುಮತ ಸಾಬೀತಿಗೆ ಅನುಮತಿ
ಉತ್ತರಾಖಂಡ್ ದಲ್ಲಿನ ರಾಷ್ಟ್ರಪತಿ ಆಡಳಿತಕ್ಕೆ ತಡೆ ನೀಡಿರುವ ನೈನಿತಾಲ್ ಹೈಕೋರ್ಟ್, ಮಾರ್ಚ್ 31ಕ್ಕೆ ವಿಧಾನಸಭೆಯಲ್ಲಿ ಬಹುಮತ....

Published On :
ಡೆಹ್ರಾಡೂನ್: ಉತ್ತರಾಖಂಡ್ ದಲ್ಲಿನ ರಾಷ್ಟ್ರಪತಿ ಆಡಳಿತಕ್ಕೆ ತಡೆ ನೀಡಿರುವ ನೈನಿತಾಲ್ ಹೈಕೋರ್ಟ್, ಮಾರ್ಚ್ 31ಕ್ಕೆ ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸುವಂತೆ ಮುಖ್ಯಮಂತ್ರಿ ಹರೀಶ್ ರಾವತ್ ಅವರಿಗೆ ಸೂಚಿಸಿದೆ.
ಸರ್ಕಾರ ಉಳಿಸಿಕೊಳ್ಳಲು ರಾವತ್ ಅವರಿಗೆ ಒಂದು ಅವಕಾಶ ನೀಡಿರುವ ಕೋರ್ಟ್, ಮಾರ್ಚ್ 31ರಂದು ಬೆಳಗ್ಗೆ 11 ಗಂಟೆಗೆ ಬಹುಮತ ಸಾಬೀತು ಪಡಿಸುವಂತೆ ಸೂಚಿಸಿದೆ. ಅಲ್ಲದೆ ಅಮಾನತುಗೊಂಡಿರುವ 9 ಬಂಡಾಯ ಕಾಂಗ್ರೆಸ್ ಶಾಸಕರು ಸೇರಿದಂತೆ ಅಧಿವೇಶನದಲ್ಲಿ ಎಲ್ಲಾ ಪಕ್ಷದ ಶಾಸಕರು ಕಡ್ಡಾಯವಾಗಿ ಭಾಗವಹಿಸಬೇಕು ಎಂದು ಹೇಳಿದೆ.
ಬಹುಮತದ ಸಾಬೀತುಪಡಿಸಿದ ಫಲಿತಾಂಶವನ್ನು ಏಪ್ರಿಲ್ 1ರಂದು ಮುಚ್ಚಿದ ಲಕೋಟೆಯಲ್ಲಿ ಕೋರ್ಟ್ ಗೆ ಸಲ್ಲಿಸುವಂತೆ ಹೈಕೋರ್ಟ್ ಸೂಚಿಸಿದೆ.
70 ಸದಸ್ಯ ಬಲವನ್ನು ಹೊಂದಿರುವ ಉತ್ತರಾಖಂಡ್ ನಲ್ಲಿ ಬಹುಮತ ಸಾಬೀತಿಗೆ 36 ಶಾಸಕರ ಬೆಂಬಲಬೇಕು. ಆದರೆ ಬಂಡಾಯ ಕಾಂಗ್ರೆಸ್ ಶಾಸಕರು ಬಿಜೆಪಿ ಬೆಂಬಲಿಸುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


