ತೆಲಂಗಾಣದಲ್ಲಿ ಮದುವೆಗೆ ಹೊರಟಿದ್ದ ಕ್ಯಾಂಟರ್ ಪಲ್ಪಿ: 5 ಸಾವು
ಮದುವೆಗೆ ಹೊರಟಿದ್ದ ಕ್ಯಾಂಟರ್ ಪಲ್ಪಿಯಾದ ಪರಿಣಾಮ ಸ್ಥಳದಲ್ಲೇ ಐವರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ರಂಗಾರೆಡ್ಡಿ ಜಿಲ್ಲೆಯಲ್ಲಿ ನಡೆದಿದೆ...

ರಂಗಾರೆಡ್ಡಿ(ತೆಲಂಗಾಣ): ಮದುವೆಗೆ ಹೊರಟಿದ್ದ ಕ್ಯಾಂಟರ್ ಪಲ್ಪಿಯಾದ ಪರಿಣಾಮ ಸ್ಥಳದಲ್ಲೇ ಐವರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ರಂಗಾರೆಡ್ಡಿ ಜಿಲ್ಲೆಯಲ್ಲಿ ನಡೆದಿದೆ.
ತೆಲಂಗಾಣದ ರಂಗಾರೆಡ್ಡಿ ಜಿಲ್ಲೆ ಪರಗಿ ಸಮೀಪ ಘಟನೆ ದುರಂತ ಸಂಭವಿಸಿದೆ. ಮದುವೆಗಾಗಿ ದ್ಯಾಚಾರಂನಿಂದ ಉತ್ತರಾಸ್ ಪಲ್ಲಿಗೆ ಕ್ಯಾಂಟರ್ ನಲ್ಲಿ 60 ಮಂದಿ ತೆರಳುತ್ತಿದ್ದು ಈ ವೇಳೆ ಕ್ಯಾಂಟರ್ ಪಲ್ಪಿಯಾಗಿ ಸ್ಥಳದಲ್ಲೇ ಐವರು ಮೃತಪಟ್ಟಿದ್ದು, 20 ಮಂದಿಗೆ ಗಂಭೀರ ಗಾಯಗಳಾಗಿವೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ಪರಗಿ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಸ್ಥಳಕ್ಕೆ ಬಂದ ಪೊಲೀಸರು ಮೃತದೇಹಗಳನ್ನು ಆಸ್ಪತ್ರೆಗೆ ರವಾನಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


