ಭಾರತದ ತೇಜೋವಧೆ ಮಾಡಲು ಪಾಕಿಸ್ತಾನ ಬೇಹುಗಾರಿಕೆ ಕತೆ ಹೇಳುತ್ತಿದೆ: ಕಿರಣ್ ರಿಜಿಜು
ಭಾರತದ ತೇಜೋವಧೆ ಮಾಡಲು ಪಾಕಿಸ್ತಾನ ರಾ ಅಧಿಕಾರಿ ಎಂದು ಹೇಳಲಾಗಿರುವ ಭಾರತೀಯ ನೌಕಾ ಪಡೆಯ ಮಾಜಿ ಅಧಿಕಾರಿ ಬಂಧನದ ಬಗ್ಗೆ ಕತೆ ಹೇಳಲು ಪ್ರಾರಂಭಿಸಿದೆ:ಸಚಿವ ಕಿರಣ್ ರಿಜಿಜು..

ನವದೆಹಲಿ: ಭಾರತದ ತೇಜೋವಧೆ ಮಾಡಲು ಪಾಕಿಸ್ತಾನ ರಾ ಅಧಿಕಾರಿ ಎಂದು ಹೇಳಲಾಗಿರುವ ಭಾರತೀಯ ನೌಕಾ ಪಡೆಯ ಮಾಜಿ ಅಧಿಕಾರಿ ಬಂಧನದ ಬಗ್ಗೆ ಕತೆ ಹೇಳಲು ಪ್ರಾರಂಭಿಸಿದೆ ಎಂದು ಗೃಹ ಖಾತೆ ರಾಜ್ಯ ಸಚಿವ ಕಿರಣ್ ರಿಜಿಜು ಹೇಳಿದ್ದಾರೆ.
ಬಲೂಚಿಸ್ತಾನದಲ್ಲಿ ನಡೆದ ಭಯೋತ್ಪಾದಕ ದಾಳಿಗೂ ಭಾರತಕ್ಕೂ ಸಂಬಂಧವಿದೆ ಎಂದು ಬಂಧಿತ ಮಾಜಿ ಅಧಿಕಾರಿ ಹೇಳಿಕೆ ನೀಡಿರುವ ವಿಡಿಯೋ ತಿರುಚಲಾಗಿರುವ ವಿಡಿಯೋ ಆಗಿದೆ ಎಂದು ಕಿರಣ್ ರಿಜಿಜು ಮಾಧ್ಯಮಗಳಿಗೆ ತಿಳಿಸಿದ್ದಾರೆ. ನಕಲಿ ವಿಡಿಯೋ ಬಗ್ಗೆ ಈಗಾಗಲೇ ವಿದೇಶಾಂಗ ಇಲಾಖೆ ಹೇಳಿಕೆ ನೀಡಿದೆ. ಬಂಧಿತ ಅಧಿಕಾರಿ ನೀಡಿದ್ದಾರೆನ್ನಲಾದ ಹೇಳಿಕೆಯ ವಿಡಿಯೋ ನಕಲಿ, ಅದಕ್ಕೆ ಹೆಚ್ಚು ಮಹತ್ವ ನೀಡಬೇಕಿಲ್ಲ ಎಂದು ಕಿರಣ್ ರಿಜಿಜು ಸ್ಪಷ್ಟಪಡಿಸಿದ್ದಾರೆ.
ಭಾರತದ ತೇಜೋವಧೆ ಮಾಡಲು ಪಾಕಿಸ್ತಾನ ರೂಪಿಸಿರುವ ತಂತ್ರ ಇದು, ಇದರಿಂದ ಅಂತಾರಾಷ್ಟ್ರೀಯ ಮಟ್ಟದಲ್ಲಿ ಯಾವುದೇ ಪರಿಣಾಮ ಉಂಟಾಗುವುದಿಲ್ಲ ಎಂದು ಕಿರಣ್ ರಿಜಿಜು ಅಭಿಪ್ರಾಯಪಟ್ಟಿದ್ದಾರೆ. ಭಾರತೀಯ ನೌಕಾಪಡೆಯ ಮಾಜಿ ಅಧಿಕಾರಿಯಾಗಿರುವ ಕುಲಭೂಷಣ್ ಜಾದವ್ ಅವರು ನಿವೃತ್ತಿ ನಂತರ ಇರಾನ್ ನಲ್ಲಿ ಕಾರ್ಗೋ ಉದ್ಯಮ ನಡೆಸುತ್ತಿದ್ದಾರೆ. ಅವರನ್ನು ಬಂಧಿಸಿದ್ದ ಪಾಕಿಸ್ತಾನ ಕುಲಭೂಷಣ್ ಜಾದವ್ ಭಾರತದ ಪರ ಪಾಕಿಸ್ತಾನದಲ್ಲಿ ಬೇಹುಗಾರಿಕೆ ನಡೆಸುತ್ತಿದ್ದರು, ಹಾಗೂ ಬಲೂಚಿಸ್ತಾನವನ್ನು ಪಾಕಿಸ್ತಾನದಿಂದ ಬೇರ್ಪಡಿಸಲು ಸಂಚು ರೂಪಿಸುತ್ತಿದ್ದರು ಎಂದು ಆರೋಪಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


