ದೇಶ

ಪಠಾಣ್ ಕೋಟ್ ದಾಳಿ ಸತ್ಯ ಒಪ್ಪಿಕೊಂಡ ಪಾಕಿಸ್ತಾನ: ರಾಜನಾಥ ಸಿಂಗ್

ಪಠಾಣ್ ಕೋಟ್ ವಾಯುನೆಲೆ ಮೇಲಿನ ದಾಳಿ ಹಿಂದೆ ತಮ್ಮ ದೇಶದ ಕೈವಾಡವಿರುವುದಾಗಿ ಇದೇ ಮೊದಲ ಬಾರಿಗೆ ಪಾಕಿಸ್ತಾನ ಸತ್ಯವನ್ನು ಒಪ್ಪಿಕೊಂಡಿದೆ...

ಪಠಾಣ್ ಕೋಟ್ ದಾಳಿ ಸತ್ಯ ಒಪ್ಪಿಕೊಂಡ ಪಾಕಿಸ್ತಾನ: ರಾಜನಾಥ ಸಿಂಗ್
ಕೇಂದ್ರ ಗೃಹ ಸಚಿವ ರಾಜನಾಥ ಸಿಂಗ್ (ಸಂಗ್ರಹ ಚಿತ್ರ)
Published On :

ಮೋರನ್: ಪಠಾಣ್ ಕೋಟ್ ವಾಯುನೆಲೆ ಮೇಲಿನ ದಾಳಿ ಹಿಂದೆ ತಮ್ಮ ದೇಶದ ಕೈವಾಡವಿರುವುದಾಗಿ ಇದೇ ಮೊದಲ ಬಾರಿಗೆ ಪಾಕಿಸ್ತಾನ ಸತ್ಯವನ್ನು ಒಪ್ಪಿಕೊಂಡಿದೆ ಎಂದು ಕೇಂದ್ರ ಗೃಹ ಸಚಿವ ರಾಜನಾಥ ಸಿಂಗ್ ಅವರು ಬುಧವಾರ ಹೇಳಿದ್ದಾರೆ.

ಈ ಕುರಿತಂತೆ ಅಸ್ಸಾಂ ರ್ಯಾಲಿಯೊಂದರಲ್ಲಿ ಮಾತನಾಡಿರುವ ಅವರು, ದಾಳಿಯಾದಾಗಿನಿಂದಲೂ ಪಾಕಿಸ್ತಾನ ತಮ್ಮ ಪಾತ್ರವಿಲ್ಲ ಎಂದು ವಿತಂಡವಾದವನ್ನು ಮಂಡಿಸುತ್ತಾ ಬಂದಿತ್ತು. ಆದರೆ, ಇದೇ ಮೊದಲ ಬಾರಿಗೆ ಸತ್ಯವನ್ನು ಒಪ್ಪಿಕೊಂಡಿದ್ದು, ದಾಳಿ ಹಿಂದೆ ತಮ್ಮ ದೇಶದ ಕೈವಾಡವಿರುವುದಾಗಿ ಎಫ್ಐಆರ್ ನಲ್ಲಿ ದಾಖಲಿಸಿಕೊಂಡಿದೆ ಎಂದು ಹೇಳಿದ್ದಾರೆ.

ಪಾಕಿಸ್ತಾನ ತನಿಖಾ ತಂಡ ತನಿಖೆ ನಡೆಸಲು ಭಾರತಕ್ಕೆ ಬಂದಿದೆ. ಮುಂದಿನ ದಿನಗಳಲ್ಲಿ ತಮ್ಮ ತನಿಖಾ ತಂಡ ಕೂಡ ಪಾಕಿಸ್ತಾನಕ್ಕೆ ತೆರಳಲಿದೆ.

ಈ ಎಲ್ಲಾ ಬೆಳವಣಿಗೆಗಳು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಚುರುಕು ಹಾಗೂ ಧನಾತ್ಮಕ ರಾಜಕೀಯ ಸಾಮರ್ಥ್ಯದಿಂದಾಗಿದೆ. ಇಂದು ವಿಶ್ವದಲ್ಲಿರುವ ಎಲ್ಲಾ ದೇಶಗಳು ಭಾರತದ ಪ್ರಾಮುಖ್ಯತೆಯ ಬಗ್ಗೆ ಅರಿತುಕೊಂಡಿದೆ. ಜಾಗತಿಕ ಸನ್ನಿವೇಶದಲ್ಲಿ ಭಾರತ ಪ್ರಾಮುಖ್ಯತೆಯನ್ನು ಮೋದಿಯವರು ಸ್ಥಾಪನೆ ಮಾಡಿದ್ದಾರೆಂದು ಹೇಳಿದ್ದಾರೆ.

ಇದೇ ವೇಳೆ ಕಾಂಗ್ರೆಸ್ ವಿರುದ್ಧ ಕಿಡಿಕಾರಿರುವ ಅವರು, ಕಾಂಗ್ರೆಸ್ ಪಕ್ಷ ದೇಶದ ಜನತೆಯನ್ನು ತಪ್ಪು ದಾರಿಗೆ ಎಳೆಯುತ್ತಿದೆ. ಜೀವನ ಪರ್ಯಂತ ನಾನು ರಾಜಕೀಯದಲ್ಲಿರುತ್ತೇನೆ. ಆದರೆ, ದೇಶದ ಜನತೆಯನ್ನು ತಪ್ಪುದಾರಿಗೆಳೆಯುವ ಇಂತರ ರಾಜಕೀಯದಲ್ಲಿ ಎಂದಿಗೂ ಪಾಲ್ಗೊಳ್ಳುವುದಿಲ್ಲ. ಕಾಂಗ್ರೆಸ್ ನಂತೆ ಎಂದಿಗೂ ರಾಜಕೀಯ ಮಾಡಲ್ಲ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.