ತೃತೀಯ ಲಿಂಗಿಗಳಿಗೆ ಉದ್ಯೋಗ, ಶಿಕ್ಷಣದಲ್ಲಿ ಮೀಸಲಾತಿಗೆ ಬಿಹಾರ ಸರ್ಕಾರ ನಿರ್ಧಾರ
ತೃತೀಯ ಲಿಂಗಿಗಳಿಗೆ ಸರ್ಕಾರಿ ಉದ್ಯೋಗ ಹಾಗೂ ಸರ್ಕಾರಿ ಸೀಟುಗಳಲ್ಲಿ ಮೀಸಲಾತಿ ನೀಡಲು ಬಿಹಾರ ಸರ್ಕಾರ ತೀರ್ಮಾನಿಸಿದೆ..

ಪಾಟ್ನಾ: ತೃತೀಯ ಲಿಂಗಿಗಳಿಗೆ ಸರ್ಕಾರಿ ಉದ್ಯೋಗ ಹಾಗೂ ಸರ್ಕಾರಿ ಸೀಟುಗಳಲ್ಲಿ ಮೀಸಲಾತಿ ನೀಡಲು ಬಿಹಾರ ಸರ್ಕಾರ ತೀರ್ಮಾನಿಸಿದೆ.
ತೃತೀಯ ಲಿಂಗಿಗಳನ್ನು ಸಮಾಜದ ಪ್ರಮುಖ ವಾಹಿನಿಗೆ ಕರೆ ತರಲು ಅವರಿಗೆ ಮೀಸಲಾತಿಯ ಅವಶ್ಯಕತೆ ಇದೆ. ಅವರು ಸ್ವಾವಲಂಬಿಗಳಾಗಿ ಜೀವನ ನಡೆಸಲು ಎಲ್ಲಾ ರೀತಿಯ ಅನುಕೂಲ ಕಲ್ಪಿಸಲಾಗುತ್ತಿದೆ. ಹೀಗಾಗಿ ಸುಪ್ರೀಂಕೋರ್ಟ್ ನಿರ್ದೇಶನದ ಮೇರೆಗೆ ಲಿಂಗ ಪರಿವರ್ತನೆಗೊಂಡವರಿಗೆ ಮೀಸಲಾತಿ ನೀಡಲಾಗುತ್ತಿದೆ ಎಂದು ಬಿಹಾರ ಸಮಾಜಕಲ್ಯಾಣ ಸಚಿವ ಮಂಜು ವರ್ಮಾ ತಿಳಿಸಿದ್ದಾರೆ.
ಹಿಂದುಳಿದ ವರ್ಗಗಳಿಗೆ ತೃತೀಯ ಲಿಂಗಿಗಳನ್ನು ಸೇರಿಸಿ, ಅನುಬಂಧ-2 ರಲ್ಲಿ ವಿವರಿಸಲಾಗಿದೆ. ಹೀಗಾಗಿ ಸರ್ಕಾರಿ ಕೆಲಸದಲ್ಲಿ ಅರ್ಹತೆ ಇರುವ ತೃತೀಯ ಲಿಂಗಿಗಳಿಗೆ ಮೀಸಲಾತಿ ನೀಡಲಾಗುವುದು. ಹಾಗೆಯೇ ವಿದ್ಯಾ ಸಂಸ್ಥೆಗಳಲ್ಲೂ ದಾಖಲಾತಿ ವೇಳೆೇ ಅವರಿಗೆ ಮೀಸಲಾತಿ ಕಲ್ಪಿಸಲಾಗಿದೆ ಎಂದು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


