ಕಾಂಗ್ರೆಸ್ ಇಟಲಿಯಿಂದ ಆಡಳಿತ ನಡೆಸುತ್ತಿತ್ತು: ಅಮಿತ್ ಶಾ
ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರ ಅಸ್ತಿತ್ವದಲ್ಲಿದ್ದಾಗ ಭಾರತದ ಆಡಳಿತವನ್ನು ಇಟಲಿಯಿಂದ ನಡೆಸಲಾಗುತ್ತಿತ್ತು ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಹೇಳಿದ್ದಾರೆ.

ಅಸ್ಸಾಂ: ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರ ಅಸ್ತಿತ್ವದಲ್ಲಿದ್ದಾಗ ಭಾರತದ ಆಡಳಿತವನ್ನು ಇಟಲಿಯಿಂದ ನಡೆಸಲಾಗುತ್ತಿತ್ತು ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಹೇಳಿದ್ದಾರೆ.
ಅಸ್ಸಾಂ ನಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ರಾಜ್ಯದ ಆಡಳಿತವನ್ನು ನಾಗ್ಪುರದಿಂದ( ಆರ್ ಎಸ್ ಎಸ್ ಪ್ರಧಾನ ಕಚೇರಿ) ನಡೆಸಲಾಗುತ್ತದೆ ಎಂದು ರಾಹುಲ್ ಗಾಂಧಿ ಬಿಜೆಪಿಯನ್ನು ಟೀಕಿಸಿದ್ದರು. ಅಸ್ಸಾಂ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ ಅಮಿತ್ ಶಾ ರಾಹುಲ್ ಗಾಂಧಿ ಟೀಕೆಗೆ ತಿಕ್ಷ್ಣವಾಗಿ ಪ್ರತಿಕ್ರಿಯೆ ನೀಡಿದ್ದು, ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರ ಅಧಿಕಾರದಲ್ಲಿದ್ದಾಗ ಭಾರತವನ್ನು ಇಟಲಿಯಿಂದ ನಡೆಸಲಾಗುತ್ತಿತ್ತು ಎಂದು ಆರೋಪಿಸಿದ್ದಾರೆ.
ಕಾಂಗ್ರೆಸ್ ಗೆ ನಿರಾಶ್ರಿತರು ಹಾಗೂ ಅಕ್ರಮವಾಗಿ ನುಸುಳುವವರ ನಡುವಿನ ವ್ಯತ್ಯಾಸ ಗೊತ್ತಿಲ್ಲ. ಬಿಜೆಪಿ ಬಾಂಗ್ಲಾ ದೇಶದಿಂದ ಅಕ್ರಮವಾಗಿ ನುಸುಳುವವರಿಗೆ ಕಡಿವಾಣ ಹಾಕುವುದರೊಂದಿಗೆ ಆ ದೇಶದಲ್ಲಿ ಧಾರ್ಮಿಕ ಹಿಂಸೆಗೊಳಗಾದವರಿಗೆ ಆಶ್ರಯ, ಪೌರತ್ವವನ್ನು ನೀಡುತ್ತದೆ ಎಂದು ಶಾ ಹೇಳಿದ್ದಾರೆ.
ಅಸ್ಸಾಂ ಚಳುವಳಿ ಪ್ರಾರಂಭವಾದಾಗಿನಿಂದಲೂ, ಬಾಂಗ್ಲಾದವರ ಒಳನುಸುಳುವಿಕೆಗೆ ಬಿಜೆಪಿ ವಿರೋಧ ವ್ಯಕ್ತಪಡಿಸುತ್ತಿದೆ. ಬಿಜೆಪಿ ಅಸ್ಸಾಂ ನಲ್ಲಿ ಅಧಿಕಾರಕ್ಕೆ ಬಂದರೆ ನೆರೆ ರಾಷ್ಟ್ರದವರು ನುಸುಳುವುದನ್ನು ಬಿಡಿ ಒಂದು ಹಕ್ಕಿಯು ಗಡಿದಾಟಿ ಬರದಂತೆ ಎಚ್ಚರಿಕೆ ವಹಿಸುತ್ತೇವೆ ಎಂದು ಅಮಿತ್ ಶಾ ಭರವಸೆ ನೀಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


