ಕೊಲ್ಕತಾ ಫ್ಲೈ ಓವರ್ ಕುಸಿತ: 24ಕ್ಕೇರಿದ ಸಾವಿನ ಸಂಖ್ಯೆ, 90 ಮಂದಿ ರಕ್ಷಣೆ
ಕೊಲ್ಕತ್ತಾದ ಬಾಬಾ ಬಜಾರ್ ನ ಗಣೇಶ್ ಟಾಕೀಸ್ ಪಕ್ಕದಲ್ಲಿ ನಿರ್ಮಾಣ ಹಂತದಲ್ಲಿದ್ದ ವಿವೇಕಾನಂದ ಫ್ಲೈಓವರ್ ಕುಸಿತದಲ್ಲಿ ಮೃತಪಟ್ಟವರ ಸಂಖ್ಯೆ 24ಕ್ಕೇರಿದೆ...

ಕೊಲ್ಕತಾ: ಕೊಲ್ಕತ್ತಾದ ಬಾಬಾ ಬಜಾರ್ ನ ಗಣೇಶ್ ಟಾಕೀಸ್ ಪಕ್ಕದಲ್ಲಿ ನಿರ್ಮಾಣ ಹಂತದಲ್ಲಿದ್ದ ವಿವೇಕಾನಂದ ಫ್ಲೈಓವರ್ ಕುಸಿತದಲ್ಲಿ ಮೃತಪಟ್ಟವರ ಸಂಖ್ಯೆ 24ಕ್ಕೇರಿದ್ದು, ರಾತ್ರಿಯಿಡಿ ನಡೆದ ಕಾರ್ಯಾಚರಣೆಯಲ್ಲಿ 90 ಮಂದಿಯನ್ನು ರಕ್ಷಿಸಲಾಗಿದೆ.
ಉತ್ತರ ಕೊಲ್ಕತಾದಲ್ಲಿ ನಿನ್ನೆ ಮಧ್ಯಾಹ್ನ ಈ ದುರಂತ ಸಂಭವಿಸಿದ್ದು, ಇಲ್ಲಿಯವರೆಗೂ 24 ಮಂದಿ ಸಾವನ್ನಪ್ಪಿದ್ದು, ಇಬ್ಬರ ಸ್ಥಿತಿ ಗಂಭೀರವಾಗಿದೆ. 100ಕ್ಕೂ ಹೆಚ್ಚು ಮಂದಿಗೆ ಗಾಯವಾಗಿದೆ.
ಪ್ರಸ್ತುತ ಅವಶೇಷಗಳಡಿ 150ಕ್ಕೂ ಹೆಚ್ಚು ಮಂದಿ ಸಿಲುಕಿರುವ ಶಂಕೆ ವ್ಯಕ್ತವಾಗಿದ್ದು, ಸೇನೆ, ರಾಷ್ಟ್ರೀಯ ವಿಪತ್ತು ನಿರ್ವಹಣಾ ತಂಡ(ಎನ್ಡಿಆರ್ಎಫ್) ಪೊಲೀಸರು ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


