ಅನಾರೋಗ್ಯ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾದ ಅಣ್ಣಾ ಹಜಾರೆ
ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಸಾಮಾಜಿಕ ಹೋರಾಟಗಾರ ಅಣ್ಣಾ ಹಜಾರೆಯವರು ಶುಕ್ರವಾರ ಆಸ್ಪತ್ರೆಗೆ ದಾಖಲಾಗಿರುವುದಾಗಿ ತಿಳಿದುಬಂದಿದೆ....

ರಾಲೇಗಾಂವ್ ಸಿದ್ಧಿ: ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಸಾಮಾಜಿಕ ಹೋರಾಟಗಾರ ಅಣ್ಣಾ ಹಜಾರೆಯವರು ಶುಕ್ರವಾರ ಆಸ್ಪತ್ರೆಗೆ ದಾಖಲಾಗಿರುವುದಾಗಿ ತಿಳಿದುಬಂದಿದೆ.
ಇಂದು ಬೆಳಿಗ್ಗೆ ತಮ್ಮ ಸ್ವಗ್ರಾಮ ರಾಲೇಗಾಂವ್ ಸಿದ್ಧಿಯಲ್ಲಿರುವ ನಿವಾಸದಲ್ಲಿ ಸ್ನಾನಕ್ಕೆಂದು ಹೋಗಿದ್ದ ವೇಳೆ ಅತಿಯಾದ ಆಯಾಸವಾಗುತ್ತಿದೆ ಎಂದು ಹೇಳಿದ್ದಾರೆ. ಇದರಿಂದಾಗಿ ಅಹ್ಮದ್ ನಗರದ ಖಾಸಗಿ ಆಸ್ಪತ್ರೆಗೆ ಅಣ್ಣಾ ಹಜಾರೆಯವರನ್ನು ದಾಖಲಿಸಲಾಗಿದೆ.
ವೈದ್ಯರು ತಪಾಸಣೆ ನಡೆಸಿದಾಗ ಅಣ್ಣಾ ಹಜಾರೆಯವರು ಜ್ವರದಿಂದ ನರಳುತ್ತಿದ್ದು, ಡಿಹೈಡ್ರೇಷನ್(ನಿರ್ಜಲೀಕರಣ) ಸಮಸ್ಯೆಯಿರುವುದಾಗಿ ತಿಳಿದುಬಂದಿದೆ. ಪ್ರಸ್ತುತ ವೈದ್ಯರು ಅಣ್ಣಾ ಹಜಾರೆಯವರಿಗೆ ಚಿಕಿತ್ಸೆ ನೀಡುತ್ತಿದ್ದು, ಗುಣಮುಖರಾಗುತ್ತಿದ್ದಾರೆಂದು ತಿಳಿದುಬಂದಿದೆ.
ನನಗೆ ಯಾವುದೇ ತೊಂದರೆಯಾಗಿಲ್ಲ. ಸ್ವಲ್ಪ ಆಯಾಸವಾಗಿದೆಯಷ್ಟೇ ನಾನು ಚೆನ್ನಾಗಿದ್ದೇನೆಂದು ಅಣ್ಣಾ ಹಜಾರೆ ಹೇಳಿಕೊಂಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


