ದೇಶ

ಪ.ಬಂಗಾಳದಲ್ಲಿ ಮತ್ತೆ ದೀದಿ ಕೈಗೆ ಅಧಿಕಾರ, 160 ಸ್ಛಾನಗಳಲ್ಲಿ ಟಿಎಂಸಿ ಗೆಲುವು: ಸಮೀಕ್ಷೆ

ಡಳಿತ ವಿರೋಧಿ ಅಲೆಯ ನಡುವೆಯೂ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಮತ್ತೊಮ್ಮೆ ಅಧಿಕಾರದ...

ಪ.ಬಂಗಾಳದಲ್ಲಿ ಮತ್ತೆ ದೀದಿ ಕೈಗೆ ಅಧಿಕಾರ, 160 ಸ್ಛಾನಗಳಲ್ಲಿ ಟಿಎಂಸಿ ಗೆಲುವು: ಸಮೀಕ್ಷೆ
ಮಮತಾ ಬ್ಯಾನರ್ಜಿ
Published On :
ಕೋಲ್ಕತಾ: ಆಡಳಿತ ವಿರೋಧಿ ಅಲೆಯ ನಡುವೆಯೂ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಮತ್ತೊಮ್ಮೆ ಅಧಿಕಾರದ ಗದ್ದುಗೆ ಏರಲಿದ್ದಾರೆ ಎಂದು ಚುನಾವಣಾ ಪೂರ್ವ ಸಮೀಕ್ಷೆಗಳು ಹೇಳಿವೆ.
ಮಾರ್ಚ್ ನಾಲ್ಕನೆ ವಾರದಲ್ಲಿ ಇಂಡಿಯಾ ಟಿವಿ ಹಾಗೂ ಸಿವೋಟರ್ ನಡೆಸಿದ ಚುನಾವಣಾ ಪೂರ್ವ ಸಮೀಕ್ಷೆ ಹೊರಬಿದ್ದಿದ್ದು, ಒಟ್ಟು 294 ಸದಸ್ಯ ಬಲದ ಪಶ್ಚಿಮ ಬಂಗಾಳ ವಿಧಾಸಭೆಯಲ್ಲಿ ತೃಣಮೂಲ ಕಾಂಗ್ರೆಸ್ 160 ಸ್ಛಾನಗಳಲ್ಲಿ ಗೆಲ್ಲುವ ಮೂಲ ಸ್ಪಷ್ಟ ಬಹುಮತ ಪಡೆಯಲಿದೆ. ಎಡರಂಗ 106 ಸ್ಥಾನ ಪಡೆದರೆ, ಕಾಂಗ್ರೆಸ್ 21 ಹಾಗೂ 3 ಕ್ಷೇತ್ರಗಳಲ್ಲಿ ಪಕ್ಷೇತರರು ಗೆಲುವು ಸಾಧಿಸಲಿದ್ದಾರೆ. ಇನ್ನು ಈ ಬಾರಿ ನಾಲ್ಕು ಕ್ಷೇತ್ರಗಳಲ್ಲಿ ಬಿಜೆಪಿ ಖಾತೆ ತೆರೆಯುವ ಸಾಧ್ಯತೆ ಇದೆ ಎಂದು ಸಮೀಕ್ಷೆ ಹೇಳಿದೆ.
ಅಸ್ಸಾಂನಲ್ಲಿ ಕಾಂಗ್ರೆಸ್, ಬಿಜೆಪಿ ನಡುವೆ ಹಣಾಹಣಿ
ಅಸ್ಸಾಂನಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ನಡುವೆ ತೀವ್ರ ಹಣಾಹಣಿ ನಡೆಯುವ ಸಾಧ್ಯತೆ ಇದ್ದು, ಯಾವುದೇ ಪಕ್ಷ ಸ್ಪಷ್ಟ ಬಹುಮತ ಪಡೆಯದೇ ಅತಂತ್ರ ವಿಧಾನಸಭೆ ನಿರ್ಮಾಣವಾಗುವ ಸಾಧ್ಯತೆ ಇದೆ ಎಂದು ಇಂಡಿಯಾ ಟಿವಿ ಹಾಗೂ ಸಿವೋಟರ್ ಸಮೀಕ್ಷೆ ಹೇಳಿದೆ.
ಒಟ್ಟು 126 ಸ್ಥಾನಗಳ ಪೈಕಿ ಕಾಂಗ್ರೆಸ್ 53 ಸ್ಥಾನ ಪಡೆದರೆ, ಬಿಜೆಪಿ 55, ಎಐಯುಡಿಎಫ್ 12 ಹಾಗೂ 6 ಕ್ಷೇತ್ರಗಳಲ್ಲಿ ಪಕ್ಷೇತರರು ಗೆಲ್ಲುವ ಸಾಧ್ಯತೆ ಇದೆ. ಅಸ್ಸಾಂನಲ್ಲಿ ಬಿಜೆಪಿ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಲಿದೆ ಎಂದು ಸಮೀಕ್ಷೆ ತಿಳಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.