ದೆಹಲಿಯಲ್ಲಿ ರಾಷ್ಟ್ರಪತಿ ಆಡಳಿತಕ್ಕೆ ಅವಕಾಶ ನೀಡುವುದಿಲ್ಲ: ಕೇಜ್ರಿವಾಲ್
ದೆಹಲಿಯಲ್ಲಿ ರಾಷ್ಟ್ರಪತಿ ಆಡಳಿತ ಜಾರಿಗೆ ತರಲು ಬಿಡುವುದಿಲ್ಲ ಎಂದು ಕೇಜ್ರಿವಾಲ್ ಹೇಳಿದ್ದಾರೆ.

ನವದೆಹಲಿ: ಅರುಣಾಚಲ ಪ್ರದೇಶ ಉತ್ತರಾಖಂಡ್ ನಲ್ಲಿ ರಾಷ್ಟ್ರಪತಿ ಆಡಳಿತ ಜಾರಿ ಮಾಡಿರುವುದರ ಬಗ್ಗೆ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಮಾತನಾಡಿದ್ದು, ಎರಡು ರಾಜ್ಯಗಳಲ್ಲಾದಂತೆ ದೆಹಲಿಯಲ್ಲಿ ರಾಷ್ಟ್ರಪತಿ ಆಡಳಿತ ಜಾರಿಗೆ ತರಲು ಬಿಡುವುದಿಲ್ಲ ಎಂದು ಹೇಳಿದ್ದಾರೆ.
ಆಡಳಿತ ಪಕ್ಷದ ಶಾಸಕರ ಮಾತನ್ನು ಆಲಿಸಲು ಪ್ರತಿಪಕ್ಷಗಳಿಗೆ ಮನವಿ ಮಾಡಿರುವ ಕೇಜ್ರಿವಾಲ್, ವಿಪಕ್ಷ ಸದಸ್ಯರು ಜನಾದೇಶಕ್ಕೆ ಗೌರವ ನೀಡಬೇಕೆಂದು ಹೇಳಿದ್ದಾರೆ. ಅರುಣಾಚಲ ಪ್ರದೇಶ ಹಾಗೂ ಉತ್ತರಾಖಂಡ್ ನಲ್ಲಿ ರಾಷ್ಟ್ರಪತಿ ಆಡಳಿತda ಬಗ್ಗೆ ಮಾತನಾಡಿದ ಕೇಜ್ರಿವಾಲ್, " ಪ್ರತಿಪಕ್ಷಗಳು ದೆಹಲಿ ಜನತೆ ನೀಡಿರುವ ಆದೇಶವನ್ನು ಗೌರವಿಸಬೇಕು, ಅರುಣಾಚಲ ಪ್ರದೇಶ ಉತ್ತರಾಖಂಡ್ ನಲ್ಲಾದಂತೆ ದೆಹಲಿಯಲ್ಲಿ ರಾಷ್ಟ್ರಪತಿ ಆಡಳಿತ ಜಾರಿಗೆ ತರಲು ಬಿಡುವುದಿಲ್ಲ ಎಂದಿದ್ದಾರೆ.
ರಾಷ್ಟ್ರಪತಿ ಆಡಳಿತ ಜಾರಿಗೆ ತಂದಿರುವುದನ್ನು ಖಂಡಿಸಿದ್ದ ಕೇಜ್ರಿವಾಲ್, ಕೇಂದ್ರ ಸರ್ಕಾರ ದೆಹಲಿಯಲ್ಲೂ ರಾಷ್ಟ್ರಪತಿ ಆಡಳಿತ ಜಾರಿಗೆ ತರಲು ಯತ್ನಿಸುತ್ತದೆ ಎಂದು ಆರೋಪಿಸಿದ್ದರು. ಮುಂದಿನ ಎರಡು ವರ್ಷಗಳಲ್ಲಿ ಒಂದೇ ಒಂದು ಚುನಾವಣೆಯನ್ನು ಗೆಲ್ಲಲು ಸಾಧ್ಯವಿಲ್ಲ ಎಂಬುದು ಬಿಜೆಪಿಗೆ ಅರ್ಥವಾಗಿದೆ, ಆದ್ದರಿಂದ ಗೂಂಡಾಗಿರಿ ನಡೆಸುತ್ತಿದ್ದು, ಹಿಮಾಚಲ ಪ್ರದೇಶ, ದೆಹಲಿ ಸರ್ಕಾರಗಳನ್ನು ಅಸ್ಥಿರಗೊಳಿಸಲು ಯತ್ನಿಸುತ್ತದೆ ಎಂದು ಕೇಜ್ರಿವಾಲ್ ಆರೋಪಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


