ನಿಜವಾಯ್ತೇ ಸಂಶಯ, ಕಾಡ್ಗಿಚ್ಚಿನ ಹಿಂದೆ ಕಾಣದ ಕೈಗಳ ಕೈವಾಡ?
ಉತ್ತರಾಖಂಡದಲ್ಲಿ ಸಂಭವಿಸಿರುವ ಭೀಕರ ಕಾಡ್ಗಿಚ್ಚಿನ ಹಿಂದೆ ಕಾಣದ ಕೈಗಳ ಕೈವಾಡವಿರುವ ಕುರಿತು ಮಾಹಿತಿ ಲಭ್ಯವಾಗಿದ್ದು ಪ್ರಕರಣ ಸಂಬಂಧ ಇದೀಗ ಇದೇ ಮೊದಲ ಬಾರಿಗೆ ನಾಲ್ಕು ಮಂದಿಯನ್ನು...

ಡೆಹ್ರಾಡೂನ್: ಉತ್ತರಾಖಂಡದಲ್ಲಿ ಸಂಭವಿಸಿರುವ ಭೀಕರ ಕಾಡ್ಗಿಚ್ಚಿನ ಹಿಂದೆ ಕಾಣದ ಕೈಗಳ ಕೈವಾಡವಿರುವ ಕುರಿತು ಮಾಹಿತಿ ಲಭ್ಯವಾಗಿದ್ದು ಪ್ರಕರಣ ಸಂಬಂಧ ಇದೀಗ ಇದೇ ಮೊದಲ ಬಾರಿಗೆ ನಾಲ್ಕು ಮಂದಿಯನ್ನು ಪೊಲೀಸ್ ವಶಕ್ಕೆ ಪಡೆಯಲಾಗಿದೆ.
ಉತ್ತರಾಖಂಡ ಕಾಡ್ಗಿಚ್ಚು ಪ್ರಕರಣ ಸಂಬಂಧ ಮಾಹಿತಿ ನೀಡಿರುವ ಕೇಂದ್ರ ಸಚಿವ ಪ್ರಕಾಶ್ ಜವಡೇಕರ್ ಅವರು ಕಾಡ್ಗಿಚ್ಚು ಸಹಜವಾದುದಲ್ಲ, ಅದು ಮಾನವ ಕೃತ್ಯ ಎಂದು ಹೇಳಿದ್ದಾರೆ. ಅಲ್ಲದೆ . ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಥಳೀಯ ಪೊಲೀಸರು ನಾಲ್ವರನ್ನು ಬಂಧಿಸಿದ್ದಾರೆ ಎಂದು ಕೇಂದ್ರ ಅರಣ್ಯ ಮತ್ತು ಪರಿಸರ ಸಚಿವ ಪ್ರಕಾಶ್ ಜಾವಡೇಕರ್ ಹೇಳಿದ್ದಾರೆ.
ಈ ಬಗ್ಗೆ ಸೋಮವಾರ ಮಾಧ್ಯಮಗಳೊಂದಿಗೆ ಮಾತನಾಡಿರುವ ಕೇಂದ್ರ ಸಚಿವರು, ಉತ್ತರಾಖಂಡದಲ್ಲಿ ಹಬ್ಬಿರುವ ಭೀಕರ ಕಾಡ್ಗಿಚ್ಚನ್ನು ಆರಿಸಲು ಸುಮಾರು 10 ಸಾವಿರ ಮಂದಿ ಶ್ರಮಪಡುತ್ತಿದ್ದು, ಸತತ 18 ದಿನಗಳ ಕಠಿಣ ಶ್ರಮದಿಂದ ಕಾಡ್ಗಿಚ್ಚು ಇದೀಗ ಒಂದು ಹಂತದಲ್ಲಿ ನಿಯಂತ್ರಣಕ್ಕೆ ತರಲಾಗಿದೆ. ಸದ್ಯ 6,000ಕ್ಕೂ ಹೆಚ್ಚು ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದಾರೆ. ಅರಣ್ಯ ಇಲಾಖೆ ಡಿಜಿ ಅವರ ಮುಂದಾಳತ್ವದಲ್ಲಿ ಕಳೆದ ಎರಡು ದಿನಗಳಿಂದ ಕಾರ್ಯಾಚರಣೆ ನಡೆಯುತ್ತಿದೆ. ಇದಕ್ಕೆ ಬೇಕಾದ ಎಲ್ಲಾ ಸೌಲಭ್ಯಗಳನ್ನು ಕೇಂದ್ರ ಸರ್ಕಾರ ಒದಗಿಸಿದೆ ಎಂದು ಅವರು ಹೇಳಿದರು.
ಇದೇ ವೇಳೆ ಬಂಧಿತರ ಕುರಿತು ಮಾಹಿತಿ ನೀಡಲು ನಿರಾಕರಿಸಿದ ಅವರು ಪೊಲೀಸ್ ವಿಚಾರಣೆ ಬಳಿಕ ಸತ್ಯಾಸತ್ಯಕೆ ಹೊರಬೀಳುತ್ತದೆ ಎಂದು ಹೇಳಿದರು.
ಶೇ.70ರಷ್ಚು ನಿಯಂತ್ರಣವಾದ ಕಾಡ್ಗಿಚ್ಚು
ಇನ್ನು ರಭಸವಾಗಿ ವ್ಯಾಪಿಸುತ್ತಿದ್ದ ಕಾಡ್ಗಿಚ್ಚನ್ನು ಎನ್ ಡಿಆರ್ಎಫ್ ತಂಡದ ನೇತೃತ್ವದಲ್ಲಿ ಅರಣ್ಯ, ಅಗ್ನಿಶಾಮಕ ಸಿಬ್ಬಂದಿ ತಹಬದಿಗೆ ತರುವಲ್ಲಿ ಯಶಸ್ವಿಯಾಗಿದ್ದು, ನಿನ್ನೆ ಒಂದೇ ದಿನದಲ್ಲಿ 110ರಿಂದ 115 ಸಕ್ರಿಯ ಕಾಡ್ಗಿಚ್ಚನ್ನು ಆರಿಸುವಲ್ಲಿ ಯಶಸ್ವಿಯಾಗಿದ್ದಾರೆ. ಇನ್ನೂ 50-60 ಪ್ರದೇಶಗಳಲ್ಲಿ ಕಾಡ್ಗಿಚ್ಚು ಸಕ್ರಿಯವಾಗಿದ್ದು, ಇದು ಬೇರೆ ಪ್ರದೇಶಕ್ಕೆ ವ್ಯಾಪಿಸದಂತೆ ಕ್ರಮ ಕೈಗೊಳ್ಳಲಾಗುವುದು ಎಂದು ಎನ್ ಡಿಆರ್ ಎಫ್ ನಿರ್ದೇಶಕ ಒಪಿ ಸಿಂಗ್ ಅವರು ಹೇಳಿದ್ದಾರೆ.
ಇದೇ ವೇಳೆ ಎಂಐಜಿ 17 ಹೆಲಿಕಾಪ್ಟರ್ ಬೆಂಕಿ ನಂದಿಸುವ ತನ್ನ ಕಾರ್ಯವನ್ನು ಮುಂದುವರೆಸಿದ್ದು, ಬೆಂಕಿ ವ್ಯಾಪಕವಾಗಿರು ಸ್ಥಳಗಳಲ್ಲಿ ನೀರು ಹಾಯಿಸುವ ಮೂಲಕ ಕಾಡ್ಗಿಚ್ಚನ್ನು ತಹಬದಿಗೆ ತಂದಿದೆ ಎಂದು ತಿಳಿದುಬಂದಿದೆ. ಸುಮಾರು 130 ಸಿಬ್ಬಂದಿಗಳ ಒಂದೊಂದು ತಂಡ 8-10 ಕಿ.ಮೀ ವ್ಯಾಪ್ತಿಯಲ್ಲಿ ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


