ಕಾಪ್ಟರ್ ಹಗರಣ: ಸಿಬಿಐನಿಂದ ಮಾಜಿ ವಾಯು ಸೇನಾ ಮುಖಸ್ಥ ಎಸ್ಪಿ ತ್ಯಾಗಿ ವಿಚಾರಣೆ
3,600 ಕೋಟಿ ರು. ಮೌಲ್ಯದ ಬಹುಕೋಟಿ ವಿವಿಐಪಿ ಹೆಲಿಕಾಪ್ಟರ್ ಖರೀದಿ ಹಗರಣ ಸಂಬಂಧ ಅವ್ಯವಹಾರದಲ್ಲಿ ಭಾಗಿಯಾದ ಆರೋಪ ಹೊತ್ತಿರುವ ಭಾರತೀಯ ವಾಯುಪಡೆಯ ಮಾಜಿ ಮುಖ್ಯಸ್ಥ ಎಸ್ಪಿ ತ್ಯಾಗಿ ಅವರನ್ನು ಸಿಬಿಐ ಸೋಮವಾರ ವಿಚಾರಣೆಗೆ ಒಳಪಡಿಸಿತು.

ನವದೆಹಲಿ: 3,600 ಕೋಟಿ ರು. ಮೌಲ್ಯದ ಬಹುಕೋಟಿ ವಿವಿಐಪಿ ಹೆಲಿಕಾಪ್ಟರ್ ಖರೀದಿ ಹಗರಣ ಸಂಬಂಧ ಅವ್ಯವಹಾರದಲ್ಲಿ ಭಾಗಿಯಾದ ಆರೋಪ ಹೊತ್ತಿರುವ ಭಾರತೀಯ ವಾಯುಪಡೆಯ ಮಾಜಿ ಮುಖ್ಯಸ್ಥ ಎಸ್ಪಿ ತ್ಯಾಗಿ ಅವರನ್ನು ಸಿಬಿಐ ಸೋಮವಾರ ವಿಚಾರಣೆಗೆ ಒಳಪಡಿಸಿತು.
ದೆಹಲಿಯಲ್ಲಿರುವ ಸಿಬಿಐ ಕೇಂದ್ರ ಕಚೇರಿಯಲ್ಲಿ ತ್ಯಾಗಿ ಅವರ ವಿಚಾರಣೆ ನಡೆದಿದ್ದು, ಬೆಳಗ್ಗೆ 10 ಗಂಟೆಯಿಂದಲೇ ತ್ಯಾಗಿ ಅವರನ್ನು ಹೆಲಿಕಾಪ್ಟರ್ ಖರೀದಿ ಪ್ರಕರಣ ಸಂಬಂಧ ಪ್ರಶ್ನೆಗಳನ್ನು ಕೇಳಿದ್ದಾರೆ ಎಂದು ತಿಳಿದುಬಂದಿದೆ. ವಿಚಾರಣೆ ವೇಳೆ ಇಟಲಿಯ ಮಿಲಾನ್ ಕೋರ್ಟ್ ಆಫ್ ಅಪೀಲ್ಸ್ ನ ತೀರ್ಪಿನ ವಿವರ ನೀಡಿರುವ ಅಧಿಕಾರಿಗಳು ಆ ಬಗ್ಗೆಯೂ ತ್ಯಾಗಿ ಅವರನ್ನು ಪ್ರಶ್ನಿಸಿದ್ದಾರೆ. ಹೆಲಿಕಾಪ್ಟರ್ ನಿರ್ಮಾಪಕ ಫಿನ್ವೆುಕಾನಿಕಾ ಮತ್ತು ಅಗಸ್ಟಾ ವೆಸ್ಟ್ಲ್ಯಾಂಡ್ ಕಂಪೆನಿಗಳು ಲಂಚವನ್ನು ಭಾರತೀಯ ಅಧಿಕಾರಿಗಳಿಗೆ ಐರೋಪ್ಯ ದಲ್ಲಾಳಿಗಳ ಮೂಲಕ ಹೇಗೆ ರವಾನೆ ಮಾಡಿತ್ತು ಮತ್ತು ಈ ಮೂಲಕ ವ್ಯವಹಾರ ಕುದುರಿಸಿಕೊಳ್ಳಲು ಹೇಗೆ ಸಾಧ್ಯವಾಯಿತು ಎಂಬಿತ್ಯಾದಿ ಪ್ರಶ್ನೆಗಳನ್ನು ಕೇಳಿದ್ದಾರೆ ಎಂದು ಹೇಳಲಾಗುತ್ತಿದೆ. ಇನ್ನು ಇಟಲಿ ಕೋರ್ಟ್ ತನ್ನ ಆದೇಶದಲ್ಲಿ ಹಲವಾರು ಸಂದರ್ಭಗಳಲ್ಲಿ ತ್ಯಾಗಿ ಅವರ ಹೆಸರನ್ನು ಪ್ರಸ್ತಾಪಿಸಿದ್ದು, ಈ ಬಗ್ಗೆಯೂ ಪ್ರಶ್ನೆ ಮಾಡಿದೆ.
ಎಸ್ ಪಿ ತ್ಯಾಗಿ ಮತ್ತು ಅವರ ಸಹೋದರ ಸಂಬಂಧಿಗಳು ಸೇರಿ ಒಟ್ಟು 13 ಮಂದಿ ವಿರುದ್ಧ ಸಿಬಿಐ ಪ್ರಕರಣ ದಾಖಲಿಸಿದ್ದು, ತ್ಯಾಗಿ ಅವರು ಅಗಸ್ಟಾ ವೆಸ್ಟ್ಲ್ಯಾಂಡನ್ನು ಹರಾಜುದಾರರ ಪಟ್ಟಿಗೆ ಸೇರ್ಪಡೆ ಮಾಡಲು ಅನುಕೂಲವಾಗುವಂತೆ, ಹೆಲಿಕಾಪ್ಟರ್ನ ಹಾರಾಟದ ಮಿತಿಯನ್ನು 6,000 ಮೀ.ನಿಂದ 4500 ಮೀ.ಗಳಿಗೆ (15,000 ಅಡಿಗಳು) ಇಳಿಸಿದರು. ಇದಕ್ಕೆ ಪ್ರತಿಯಾಗಿ ತ್ಯಾಗಿ ಭಾರಿ ಪ್ರಮಾಣದ ಕಿಕ್ ಬ್ಯಾಕ್ ಪಡೆದಿದ್ದರು ಎಂಬ ಆರೋಪವನ್ನು ಅವರ ವಿರುದ್ಧ ಮಾಡಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


