ದೇಶ

ಉತ್ತರಾಖಂಡ ಅರಣ್ಯ ಪ್ರದೇಶದಲ್ಲಿನ ಕಾಡ್ಗಿಚ್ಚು ನಿಯಂತ್ರಣಕ್ಕೆ: ರಾಜನಾಥ್ ಸಿಂಗ್

ಉತ್ತರಾಖಂಡ ರಾಜ್ಯದ ನೈನಿಟಾಲ್ ನ ಸುತ್ತಮುತ್ತಲಿನ ಅರಣ್ಯ ಪ್ರದೇಶದಲ್ಲಿ ಆವರಿಸಿರುವ ಕಾಡ್ಗಿಚ್ಚು ನಿಯಂತ್ರಣಕ್ಕೆ ಬಂದಿದೆ ಎಂದು..

ಉತ್ತರಾಖಂಡ ಅರಣ್ಯ ಪ್ರದೇಶದಲ್ಲಿನ ಕಾಡ್ಗಿಚ್ಚು ನಿಯಂತ್ರಣಕ್ಕೆ: ರಾಜನಾಥ್ ಸಿಂಗ್
ರಾಜನಾಥ್ ಸಿಂಗ್
Published On :
ನವದೆಹಲಿ: ಉತ್ತರಾಖಂಡ ರಾಜ್ಯದ ನೈನಿಟಾಲ್ ನ ಸುತ್ತಮುತ್ತಲಿನ ಅರಣ್ಯ ಪ್ರದೇಶದಲ್ಲಿ ಆವರಿಸಿರುವ ಕಾಡ್ಗಿಚ್ಚು ನಿಯಂತ್ರಣಕ್ಕೆ ಬಂದಿದೆ ಎಂದು ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ. 
ಲೋಕಸಭೆಯಲ್ಲಿ ಉತ್ತರಾಖಂಡದ ಅರಣ್ಯದಲ್ಲಿ ಸಂಭವಿಸಿರುವ ಕಾಡ್ಗಿಚ್ಚಿನ ಬಗ್ಗೆ ಪ್ರತಿಕ್ರಯಿಸಿದ ಅವರು, ಉತ್ತರಾ ಖಂಡದ ಪೌರಿ, ಟೆಹ್ರಿ ಮತ್ತು ನೈನಿಟಾಲ್ ಸೇರಿದಂತೆ ಸುಮಾರು 7 ಜಿಲ್ಲೆಗಳ ವ್ಯಾಪ್ತಿಯ ಅರಣ್ಯ ಪ್ರದೇಶದಲ್ಲಿ ಉಂಟಾಗಿರುವ ಕಾಡ್ಗಿಚ್ಚು ನಂದಿಸಲು ಎನ್ ಡಿಆರ್ ಎಫ್ ಸಿಬ್ಬಂದಿ ಸೇರಿದಂತೆ ಸುಮಾರು 6 ಸಾವಿರಕ್ಕೂ ಹೆಚ್ಚು ಸಿಬ್ಬಂದಿಗಳು ಹಗಲಿರುಳು ಶ್ರಮಿಸುತ್ತಿದ್ದಾರೆ. 
ಬೆಂಕಿ ನಂದಿಸಲು ಭಾರತೀಯ ವಾಯು ಸೇನೆಯ ಮಿಗ್ 147 ಹೆಲಿಕಾಪ್ಟರ್ ಮೂಲಕ ಕಾಡ್ಗಿಚ್ಚು ಹೊತ್ತಿರುವ ಅರಣ್ಯ ಪ್ರದೇಶಕ್ಕೆ ಭಾರಿ ಪ್ರಮಾಣದಲ್ಲಿ ನೀರು ಹಾಕಲಾಗುತ್ತಿದೆ. ಹಾಗಾಗಿ, ಕಾಡ್ಗಿಚ್ಚು ನಿಯಂತ್ರಣಕ್ಕೆ ಬಂದಿದೆ. ಆದರೆ ಹಾನಿ ಬಗ್ಗೆ ಇನ್ನು ಅಧಿಕಾರಿಗಳಿಂದ ಯಾವುದೇ ಮಾಹಿತಿ ಲಭ್ಯವಾಗಿಲ್ಲ ಎಂದು ಅವರು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.