ಪಠಾಣ್ ಕೋಟ್ ವಾಯುನೆಲೆ ಅತ್ಯಂತ ಅಸುರಕ್ಷಿತ: ಸಂಸದೀಯ ಸಮಿತಿ
ಭಾರತೀಯ ವಾಯುನೆಲೆ ಅತ್ಯಂತ ಸುರಕ್ಷಿತವಲ್ಲದ ತಾಣವಾಗಿದ್ದು, ಅಲ್ಲಿನ ಭದ್ರತೆಯನ್ನು ಹೆಚ್ಚಿಸಲು ಅಗತ್ಯ ಕ್ರಮ ಕೈಗೊಳ್ಳಬೇಕಾದ...

ನವದೆಹಲಿ: ಭಾರತೀಯ ವಾಯುನೆಲೆ ಅತ್ಯಂತ ಸುರಕ್ಷಿತವಲ್ಲದ ತಾಣವಾಗಿದ್ದು, ಅಲ್ಲಿನ ಭದ್ರತೆಯನ್ನು ಹೆಚ್ಚಿಸಲು ಅಗತ್ಯ ಕ್ರಮ ಕೈಗೊಳ್ಳಬೇಕಾದ ಅಗತ್ಯವಿದೆ ಎಂದು ಪಠಾಣ್ ಕೋಟ್ ವಾಯುನೆಲೆ ಮೇಲಿನ ಉಗ್ರಗಾಮಿಗಳ ದಾಳಿ ಕುರಿತು ತನಿಖೆ ನಡೆಸುತ್ತಿರುವ ಸಂಸದೀಯ ಸಮಿತಿ ಹೇಳಿದೆ.
ಕಾಂಗ್ರೆಸ್ ರಾಜ್ಯಸಭಾ ಸದಸ್ಯ ಪಿ. ಭಟ್ಟಾಚಾರ್ಯ ಅವರ ನೇತೃತ್ವದ ಗೃಹ ಇಲಾಖೆಯ ಸಂಸದೀಯ ಸ್ಥಾಯಿ ಸಮಿತಿ, ಇಂದಿಗೂ ಕೂಡ ಪಠಾಣ್ ಕೋಟ್ ವಾಯುನೆಲೆಯ ಪರಿಸ್ಥಿತಿ ಸುರಕ್ಷಿತವಾಗಿಲ್ಲ. ಅಲ್ಲಿನ ಕುಂದುಕೊರತೆಗಳನ್ನು ನಿವಾರಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಹೇಳಿದೆ.
ಪಠಾಣ್ ಕೋಟ್ ನಲ್ಲಿರುವ ಭಾರತೀಯ ವಾಯುಪಡೆಯ ಅಧಿಕಾರಿಗಳೊಂದಿಗೆ ಸ್ಥಾಯಿ ಸಮಿತಿಯ ಸದಸ್ಯರು ಮಾತುಕತೆ ನಡೆಸಿದೆ. ಆದರೆ ಪಾಕಿಸ್ತಾನ ಮೂಲದ ಭಯೋತ್ಪಾದಕರು ಪಠಾಣ್ ಕೋಟ್ ವಾಯುನೆಲೆಗೆ ಹೇಗೆ ನುಸುಳಿ ಬಂದರು ಎಂದು ತಿಳಿದುಕೊಳ್ಳುವಲ್ಲಿ ವಿಫಲವಾಗಿದ್ದಾರೆ. ಘಟನೆ ಹೇಗೆ ನಡೆಯಿತು? ಯೋಧರಿಗೆ ಮೊದಲೇ ಉಗ್ರಗಾಮಿಗಳ ಸಂಭಾವ್ಯ ದಾಳಿಯ ಎಚ್ಚರಿಕೆ ನೀಡಿದ್ದರೂ ಕೂಡ ಭದ್ರತೆಯನ್ನು ಮುರಿದು ಹೇಗೆ ಒಳನುಗ್ಗಿದರು ಎಂದು ತಿಳಿದುಕೊಳ್ಳುವುದು ಮುಖ್ಯವಾಗಿದೆ ಎಂದು ಭಟ್ಟಾಚಾರ್ಯ ಹೇಳಿದ್ದಾರೆ.
ಸಮಿತಿ ನೀಡುವ ವರದಿಯನ್ನು ಗಂಭೀರವಾಗಿ ಪರಿಗಣಿಸಿ ವಾಯುನೆಲೆ ಮತ್ತು ದೇಶದ ಭದ್ರತೆ ಕಾಪಾಡುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಪ್ರಾಮಾಣಿಕ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದೆ.
ಪಠಾಣ್ ಕೋಟ್ ವಾಯುನೆಲೆ ಮೇಲಿನ ದಾಳಿ ಬಗ್ಗೆ ತನಿಖೆ ನಡೆಸಲು ನೇಮಿಸಿದ ಸಮಿತಿಯಲ್ಲಿ ಒಟ್ಟು 31 ಸದಸ್ಯರಿದ್ದು, ಅವರಲ್ಲಿ ಬಿಜೆಪಿಯ 13, ಕಾಂಗ್ರೆಸ್ ನ 4, ಬಿಜೆಡಿ 2, ತೃಣಮೂಲ ಕಾಂಗ್ರೆಸ್ ನ ಇಬ್ಬರು, ಎಡಿಎಂಕೆಯ ಮೂವರು, ಸಿಪಿಎಂ, ಸಿಪಿಐ, ಎಸ್ ಪಿ, ಟಿಆರ್ ಎಸ್, ಟಿಡಿಪಿ, ಶಿರೋಮಣಿ ಅಕಾಲಿದಳ ಮತ್ತು ಶಿವಸೇನೆಯ ಸದಸ್ಯರನ್ನು ಒಳಗೊಂಡಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


