ಕೇರಳ: ಕಾನೂನು ವಿದ್ಯಾರ್ಥಿನಿ ಆಯ್ತು, ಈಗ ನರ್ಸಿಂಗ್ ವಿದ್ಯಾರ್ಥಿನಿ ಮೇಲೆ ಗ್ಯಾಂಗ್‌ರೇಪ್
ಕೇರಳದಲ್ಲಿ ನಿರ್ಭಯಾ ಅತ್ಯಾಚಾರ ಪ್ರಕರಣಕ್ಕಿಂತ ಅಮಾನುಷವಾಗಿ ಕಾನೂನು ವಿದ್ಯಾರ್ಥಿಯನ್ನು ಅತ್ಯಾಚಾರ ಮಾಡಿ ಹತ್ಯೆ ಮಾಡಿದ ಘಟನೆ ಇನ್ನು ಹಸಿ ಇರುವಾಗಲೇ...

ಕೇರಳದಲ್ಲಿ ನಿರ್ಭಯಾ ಅತ್ಯಾಚಾರ ಪ್ರಕರಣಕ್ಕಿಂತ ಅಮಾನುಷವಾಗಿ ಕಾನೂನು ವಿದ್ಯಾರ್ಥಿಯನ್ನು ಅತ್ಯಾಚಾರ ಮಾಡಿ ಹತ್ಯೆ ಮಾಡಿದ ಘಟನೆ ಇನ್ನು ಹಸಿ ಇರುವಾಗಲೇ ನರ್ಸಿಂಗ್ ವಿದ್ಯಾರ್ಥಿನಿಯೊಬ್ಬಳ ಮೇಲೆ ಕಾಮಾಂದರು ಸಾಮೂಹಿಕ ಅತ್ಯಾಚಾರ ನಡೆಸಿರುವ ಘಟನೆ ವರದಿಯಾಗಿದೆ.
ಕೇರಳದ ತಿರುವನಂತಪುರಂ ನಿವಾಸಿ 19 ವರ್ಷದ ನರ್ಸಿಂಗ್ ವಿದ್ಯಾರ್ಥಿನಿಯನ್ನು ಕಾಮಾಂದರು ವರ್ಕಲಾ ಎಂಬಲ್ಲಿ ಆಟೋ ರಿಕ್ಷಾದಲ್ಲಿ ಆಕೆಯಲ್ಲಿ ಅಪಹರಿಸಿ ಕೊಲ್ಲಂಗೆ ಕರೆದ್ಯೊಯ್ದು ಅತ್ಯಾಚಾರ ನಡೆಸಿದ್ದಾರೆ.
ಸಂತ್ರಸ್ತ ಯುವತಿ ಆಕೆ ಮೇಲೆ ಅತ್ಯಾಚಾರ ನಡೆಸಿದವರು 24 ವರ್ಷದ ಶ್ಯಾಜು ಮತ್ತು ಆತನ ಸ್ನೇಹಿತ 25 ವರ್ಷದ ಸುಜೀತ್ ಎಂದು ಪೊಲೀಸರಿಗೆ ತಿಳಿಸಿದ್ದಾಳೆ.
ಆಟೋ ರಿಕ್ಷಾ ಚಾಲಕ ಶ್ಯಾಜು ಸಂತ್ರಸ್ತ ಯುವತಿಯ ಸ್ನೇಹಿತ ಎಂದು ಪೊಲೀಸರು ತಿಳಿಸಿದ್ದಾರೆ. ಘಟನೆ ಬಳಿಕ ಯುವತಿಯನ್ನು ವರ್ಕಲಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಿ ಬಳಿಕ ಆಕೆಯನ್ನು ಎಸ್ಯುಟಿ ಆಸ್ಪತ್ರೆಗೆ ಸೇರಿಸಲಾಗಿದೆ. ಯುವತಿ ಆರೋಪಿಗಳ ಸುಳಿವು ನೀಡಿದ್ದರಿಂದ ಶೀಘ್ರದಲ್ಲೇ ಅವರನ್ನು ಬಂಧಿಸಲಾಗುವುದು ಎಂದರು.
ಇನ್ನು ಆಟೋ ರಿಕ್ಷಾ ಚಾಲಕ ಸೇರಿ ನಾಲ್ವರ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಇನ್ನು ಏಪ್ರಿಲ್ 28ರಂದು ಎರ್ನಾಕುಳಂ ಕಾನೂನು ಕಾಲೇಜು ವಿದ್ಯಾರ್ಥಿನಿ ಜಿಶಾಳ ಮೇಲೆ ಅತ್ಯಾಚಾರ ನಡೆಸಿ ಭರ್ಜರಿವಾಗಿ ಹತ್ಯೆ ಮಾಡಲಾಗಿತ್ತು. ಜಿಶಾಳ ದೇಹವನ್ನು ಮರಣೋತ್ತರ ಪರೀಕ್ಷೆಗೆ ಒಳಪಡಿಸಿದಾಗ ಆಕೆಯ ದೇಹದೊಳಗೆ ಹರಿತವಾದ ಕಬ್ಬಿಣದ ರಾಡ್ ಒಂದನ್ನು ತೂರಲಾಗಿದ್ದು, ಇದರಿಂದ ಆಕೆಯ ಕರುಳು ಛಿದ್ರವಾಗಿದೆ. ತಲೆಯನ್ನು ಭಾರವಾದ ವಸ್ತುವಿನಿಂದ ಜಜ್ಜಲಾಗಿದೆ. ಆಕೆಯ ದೇಹದಲ್ಲಿ 30 ಗಾಯಗಳಾಗಿದ್ದುಸ ಎದೆ ಭಾಗದಲ್ಲಿ ಇರಿದ ಆಳವಾದ ಗಾಯಗಳಾಗಿವೆ ಎಂದು ವೈದ್ಯರು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


