ದೇಶ

ಡೀಸೆಲ್ ಟ್ಯಾಕ್ಸಿ ನಿಷೇಧಕ್ಕೆ ಸುಪ್ರೀಂ ನಿಂದ ವಿನಾಯಿತಿ ಕೇಳಿದ ಕೇಂದ್ರ ಸರ್ಕಾರ

ದೆಹಲಿಯಲ್ಲಿ ಡಿಸೇಲ್ ಮತ್ತು ಪೆಟ್ರೋಲ್ ಟ್ಯಾಕ್ಸಿಗಳಿಗೆ ವಿಧಿಸಲಾಗಿರುವ ನಿಷೇಧಕ್ಕೆ ವಿನಾಯಿತಿ ನೀಡಬೇಕೆಂದು ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್ ಗೆ ಮನವಿ ಮಾಡಿದೆ.

ಡೀಸೆಲ್ ಟ್ಯಾಕ್ಸಿ ನಿಷೇಧಕ್ಕೆ ಸುಪ್ರೀಂ ನಿಂದ ವಿನಾಯಿತಿ ಕೇಳಿದ ಕೇಂದ್ರ ಸರ್ಕಾರ
ಸುಪ್ರೀಂ ಕೋರ್ಟ್
Published On :

ನವದೆಹಲಿ: ದೆಹಲಿಯಲ್ಲಿ ಡಿಸೇಲ್ ಮತ್ತು ಪೆಟ್ರೋಲ್ ಟ್ಯಾಕ್ಸಿಗಳಿಗೆ ವಿಧಿಸಲಾಗಿರುವ ನಿಷೇಧಕ್ಕೆ ವಿನಾಯಿತಿ ನೀಡಬೇಕೆಂದು ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್ ಗೆ ಮನವಿ ಮಾಡಿದೆ.
ಡಿಸೇಲ್, ಪೆಟ್ರೋಲ್ ಟ್ಯಾಕ್ಸಿಗಳಿಗೆ ನಿಷೇಧ ವಿಧಿಸಿರುವುದರಿಂದ ಬಿಪಿಒ ನೌಕರರಿಗೆ ತೊಂದರೆ ಉಂಟಾಗಲಿದ್ದು ಬಿಪಿಒ ಕಂಪನಿಗಳು ದೇಶ ತೊರೆಯುವ ಸಾಧ್ಯತೆ ಇರುವುದರಿಂದ ನಿಷೇಧಕ್ಕೆ ವಿನಾಯಿತಿ ನೀಡಬೇಕೆಂದು ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್ ಗೆ ತಿಳಿಸಿದೆ.
ಬಿಪಿಒ ಕಂಪನಿಗಳು ತನ್ನ ನೌಕರರಿಗೆ ವಾಹನ ಸೌಲಭ್ಯ ಒದಗಿಸಲು ಡಿಸೇಲ್, ಪೆಟ್ರೋಲ್ ಟ್ಯಾಕ್ಸಿಗಳನ್ನೇ ಅವಲಂಬಿಸಿವೆ. ನಿಷೇಧ ವಿಧಿಸಿರುವುದರಿಂದ ನೌಕರರಿಗೆ ಅನಾನುಕೂಲವಾಗಲಿದ್ದು ಈ ವರೆಗೂ ದೇಶದ ಆರ್ಥಿಕತೆಯ ಮೇಲೆ ಹೊಡೆತ ಬೀಳಲಿದೆ ಎಂದು ಸಾಲಿಸಿಟೋರ್ ಜನರಲ್ ರಂಜಿತ್ ಕುಮಾರ್ ಮುಖ್ಯ ನ್ಯಾಯಮೂರ್ತಿ ಟಿ. ಎಸ್. ಠಾಕೂರ್ ನೇತೃತ್ವದ ನ್ಯಾಯಪೀಠಕ್ಕೆ ತಿಳಿಸಿದ್ದಾರೆ.   
ಇದಕ್ಕೆ ಪ್ರತಿಕ್ರಿಯಿಸಿರುವ ಸುಪ್ರೀಂಕೊರ್ಟ್, ಈ ವಿಚಾರಕ್ಕೆ ಸಂಬಂಧಿಸಿದಂತೆ ಮುಂದಿನ ವಿಚಾರಣೆಯಲ್ಲಿ ಪರ್ಯಾಯ ಮಾರ್ಗವನ್ನು ತಿಳಿಸುವಂತೆ ಹೇಳಿದ್ದು ವಿಚಾರಣೆಯನ್ನು ಮೇ 9 ಕ್ಕೆ ಮುಂದೂಡಿದೆ. ಮೇ 1 ರಿಂದ ನವದೆಹಲಿಯಲ್ಲಿ ಡಿಸೇಲ್ ಮತ್ತು ಪೆಟ್ರೋಲ್ ಟ್ಯಾಕ್ಸಿಗಳನ್ನು ನಿಷೇಧಿಸಿ ಸುಪ್ರೀಂ ಕೋರ್ಟ್ ಆದೇಶ ನೀಡಿತ್ತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.