ಸುಳ್ಳು ಲೆಕ್ಕ ತೋರಿಸಿ ಹಣ ಗುಳುಂ ಮಾಡಿದ ಅಧಿಕಾರಿಗೆ "ಲೇಡಿ ಸಿಂಗಂ" ತರಾಟೆ
ಸುಳ್ಳು ದಾಖಲೆ ನೀಡಿ ಸರ್ಕಾರದ ಹಣ ಗುಳುಂ ಮಾಡಿದ್ದ ಪಂಚಾಯಿತಿ ಕಾರ್ಯದರ್ಶಿಯೊಬ್ಬನನ್ನು ಇಡೀ ಗ್ರಾಮಸ್ಥರ ಮುಂದೆ ಖಡಕ್ ಮಹಿಳಾ ಐಎಎಸ್ ಅಧಿಕಾರಿಯೊಬ್ಬರು...

ಭೋಪಾಲ್: ಸುಳ್ಳು ದಾಖಲೆ ನೀಡಿ ಸರ್ಕಾರದ ಹಣ ಗುಳುಂ ಮಾಡಿದ್ದ ಪಂಚಾಯಿತಿ ಕಾರ್ಯದರ್ಶಿಯೊಬ್ಬನನ್ನು ಇಡೀ ಗ್ರಾಮಸ್ಥರ ಮುಂದೆ ಖಡಕ್ ಮಹಿಳಾ ಐಎಎಸ್ ಅಧಿಕಾರಿಯೊಬ್ಬರು ತರಾಟೆಗೆ ತೆಗೆದುಕೊಂಡ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಮಧ್ಯಪ್ರದೇಶದ ಸಿಂಗ್ರೌಲಿ ಗ್ರಾಮದ ಪಂಚಾಯಿತಿ ಕಾರ್ಯದರ್ಶಿ ರಾಮ್ ಸುಭಾಷ್ ಎಂಬಾತ ತಮ್ಮ ಗ್ರಾಮದಲ್ಲಿ ಶೌಚಾಲಯ ನಿರ್ಮಾಣಕ್ಕೆ ಸರ್ಕಾರದಿಂದ ಬಿಡುಗಡೆಯಾಗಿದ್ದ ಹಣವನ್ನು ನಕಲಿ ದಾಖಲೆ ಸೃಷ್ಟಿ ಮಾಡಿ ಈತನೇ ಗುಳುಂ ಮಾಡಿದ್ದ ವಿಚಾರವನ್ನು ಅರಿತ ಮಹಿಳಾ ಐಎಎಸ್ ಅಧಿಕಾರಿ ನಿಧಿ ನಿವೇದಿತಾ ಅವರು ದಾಖಲೆಗಳ ಸಮೇತ ಗ್ರಾಮಕ್ಕೆ ಆಗಮಿಸಿ ಗ್ರಾಮಸ್ಥರ ಮುಂದೆಯೇ ಪಂಚಾಯಿತಿ ಕಾರ್ಯದರ್ಶಿ ರಾಮ್ ಸುಭಾಷ್ ರನ್ನು ತರಾಟೆಗೆ ತೆಗೆದುಕೊಂಡರು. ಅಲ್ಲದೇ ಅವರು ಮಾಡಿದ ತಪ್ಪಿಗೆ ಗ್ರಾಮಸ್ಥರ ಮುಂದೆಯೇ ಅವರನ್ನು ಬಸ್ಕಿ ಹೊಡಿಸುವ ಮೂಲಕ ಅವರ ತಪ್ಪಿಗೆ ಸ್ಥಳದಲ್ಲೇ ಶಿಕ್ಷೆ ಕೂಡ ನೀಡಿದರು.
ಪಂಚಾಯಿತಿ ಕಾರ್ಯದರ್ಶಿ ರಾಮ್ ಸುಭಾಷ್ ಗ್ರಾಮದಲ್ಲಿ ಶೌಚಾಲಯ ನಿರ್ಮಾಣಕ್ಕೆ ಸರ್ಕಾರ ಬಿಡುಗಡೆ ಮಾಡಿದ್ದ ಹಣವನ್ನೇ ತಾನೇ ನುಂಗಿ ಹಾಕಿ ದಾಖಲೆಗಳಲ್ಲಿ ಶೌಚಾಲಯ ನಿರ್ಮಾಣ ಮಾಡಿದ ಕುರಿತು ಮಾಹಿತಿ ಒದಗಿಸಿದ್ದ. ಇದಕ್ಕೆ ಪೂರಕ ಎಂಬಂತೆ ಶೌಚಾಲ ನಿರ್ಮಾಣ ಮಾಡಿದ ಚಿತ್ರಗಳನ್ನು ಫೋಟೋಶಾಪ್ ನಲ್ಲಿ ಹೊಂದಾಣಿಕೆ ಮಾಡಿ ಆ ಚಿತ್ರಗಳನ್ನು ಸರ್ಕಾರದ ದಾಖಲೆಗಳಿಗೆ ನೀಡಿದ್ದ. ಈ ದಾಖಲೆಗಳನ್ನು ಪರಿಶೀಲಿಸಿದ ಐಎಎಸ್ ಅಧಿಕಾರಿ ನಿಧಿ ನಿವೇದಿತಾ ಅವರು ದಾಖಲೆಗಳಲ್ಲಿರುವ ಮಾಹಿತಿ ಸುಳ್ಳು ಎಂಬುದನ್ನು ಪತ್ತೆ ಮಾಡಿ ಸ್ವತಃ ಗ್ರಾಮಕ್ಕೇ ಭೇಟಿ ನೀಡಿ ಪರಿಶೀಲನೆ ಮಾಡಿ ಭ್ರಷ್ಟ ಅಧಿಕಾರಿಯನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಮಹಿಳಾ ಐಎಎಸ್ ಅಧಿಕಾರಿಯ ಕಾರ್ಯಕ್ಕೆ ಎಲ್ಲೆಡೆಯಿಂದ ಮೆಚ್ಚುಗೆ ವ್ಯಕ್ತವಾಗುತ್ತಿದೆ.
ಪಂಚಾಯಿತಿ ಕಾರ್ಯದರ್ಶಿಯನ್ನು ತರಾಟೆಗೆ ತೆಗೆದುಕೊಂಡ ಲೇಡಿ ಸಿಂಗಂ ವಿಡಿಯೋ ಇಲ್ಲಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


