ಎನ್ ಜಿಟಿ ಆದೇಶ ಉಲ್ಲಂಘನೆ: ರವಿಶಂಕರ್ ಗುರೂಜಿ ವಿರುದ್ಧ ನ್ಯಾಯಾಂಗ ನಿಂದನೆ?
ಹಸಿರು ನ್ಯಾಯಾಧಿಕರಣ ಪೀಠದ ಆದೇಶ ಉಲ್ಲಂಘಿಸಿದ ಆರೋಪದ ಮೇರೆಗೆ ಆರ್ಟ್ ಆಫ್ ಲಿವಿಂಗ್ ಸಂಸ್ಥೆಯ ಸಂಸ್ಥಾಪಕ ರವಿ ಶಂಕರ್ ಗುರೂಜಿ ವಿರುದ್ಧ ನ್ಯಾಯಾಂಗ ನಿಂದನೆ ಪ್ರಕರಣ ದಾಖಲಾಗಿದೆ ಎಂದು ತಿಳಿದುಬಂದಿದೆ...

ನವದೆಹಲಿ: ಹಸಿರು ನ್ಯಾಯಾಧಿಕರಣ ಪೀಠದ ಆದೇಶ ಉಲ್ಲಂಘಿಸಿದ ಆರೋಪದ ಮೇರೆಗೆ ಆರ್ಟ್ ಆಫ್ ಲಿವಿಂಗ್ ಸಂಸ್ಥೆಯ ಸಂಸ್ಥಾಪಕ ರವಿ ಶಂಕರ್ ಗುರೂಜಿ ವಿರುದ್ಧ ನ್ಯಾಯಾಂಗ ನಿಂದನೆ ಪ್ರಕರಣ ದಾಖಲಾಗಿದೆ ಎಂದು ತಿಳಿದುಬಂದಿದೆ.
ರವಿಶಂಕರ್ ಗುರೂಜಿ ಅವರು ಸ್ಥಾಪಿಸಿದ ಆರ್ಟ್ ಆಫ್ ಲಿವಿಂಗ್ ಸಂಸ್ಥೆಗೆ 35 ವರ್ಷ ತುಂಬಿದ ಹಿನ್ನಲೆಯಲ್ಲಿ ರಾಜಧಾನಿ ದೆಹಲಿಯಲ್ಲಿ ಕಳೆದ ಮಾರ್ಚ್ 11ರಿಂದ 13ರವೆರೆಗೆ ಮೂರು ದಿನಗಳ ಕಾಲ ಬೃಹತ್ ಸಾಂಸ್ಕೃತಿಕ ಉತ್ಸವ ನಡೆಸಿತ್ತು. ಈ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ್ದ ಹಸಿರು ನ್ಯಾಯಾಧಿಕರಣ, ಬೃಹತ್ ವೇದಿಕೆ ನಿರ್ಮಾಣದಿಂದ ಅಲ್ಲಿನ ಜೈವಿಕ ಪರಿಸರಕ್ಕೆ ಹಾನಿಯಾಗುತ್ತದೆ. ಹೀಗಾಗಿ ಸಂಸ್ಥೆ 5 ಕೋಟಿ ಪರಿಹಾರ ನೀಡಬೇಕು ಎಂದು ಆದೇಶಿಸಿತ್ತು.
ಈ ಆದೇಶಕ್ಕೆ ಮೊದಲು ಆಕ್ಷೇಪ ವ್ಯಕ್ತಪಡಿಸಿದ್ದ ಆರ್ಟ್ ಆಪ್ ಲಿವಿಂಗ್ ಬಳಿಕ ದಂಡ ಪಾವತಿಗೆ ಒಪ್ಪಿಗೆ ನೀಡಿತ್ತು. ಆದರೆ ಆರಂಭದಲ್ಲಿ 25 ಲಕ್ಷ ಪಾವತಿ ಮಾಡಿದ್ದ ಆರ್ಟ್ ಆಫ್ ಲಿವಿಂಗ್ ಉಳಿದ 4.75 ಕೋಟಿ ಹಣವನ್ನು ಪಾವತಿ ಮಾಡಿರಲಿಲ್ಲ. ಬಳಿಕ ನಡೆದ ವಿಚಾರಣೆಯಲ್ಲಿ ಸಂಸ್ಥೆಯ ಕೋರಿಕೆ ಮೇರೆಗೆ ಎನ್ ಜಿಟಿ ಗಡುವನ್ನು ಮತ್ತೆ ಮೂರು ವಾರಗಳ ಕಾಲ ಮುಂದೂಡಿತ್ತು. ಅದರಂತೆ ಇದೇ ಏಪ್ರಿಲ್ 1ರಂದು ಈ ಗಡುವು ಕೂಡ ಮುಕ್ತಾಯವಾಗಿದ್ದು, ಆರ್ಟ್ ಆಫ್ ಲಿವಿಂಗ್ ಸಂಸ್ಥೆ ದಂಡ ಪಾವತಿ ಮಾಡಿಲ್ಲ.
ಈ ಬಗ್ಗೆ ವಕೀಲ ಸಂಜಯ್ ಪರಿಖ್ ಎಂಬುವವರು ಹಸಿರು ನ್ಯಾಯಾಧಿಕರಣಕ್ಕೆ ದೂರು ನೀಡಿದ್ದರು. ಹಸಿರು ನ್ಯಾಯಾಧಿಕರಣ ನ್ಯಾಯಮೂರ್ತಿ ಸಾವಂತ್ ಕುಮಾರ್ ಅವರು ಸಂಜಯ್ ಪರಿಖ್ ಅವರ ಅರ್ಜಿಯನ್ನು ವಿಚಾರಣೆಗೆ ಸ್ವೀಕರಿಸಿದ್ದು, ಮೇ 10 ರಂದು ಪ್ರಕರಣದ ಅಂತಿಮ ತೀರ್ಪು ನೀಡಲಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


