ಕೇರಳದಲ್ಲಿ ನರ್ಸಿಂಗ್ ವಿದ್ಯಾರ್ಥಿನಿ ಮೇಲೆ ಗ್ಯಾಂಗ್ ರೇಪ್: ಮೂವರ ಬಂಧನ
ಕೇರಳದ ವರ್ಕಾಲದಲ್ಲಿ ನರ್ಸಿಂಗ್ ವಿದ್ಯಾರ್ಥಿನಿ ಮೇಲೆ ನಡೆದಿದ್ದ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು...

Published On :
ತಿರುವನಂತಪುರಂ: ಕೇರಳದ ವರ್ಕಾಲದಲ್ಲಿ ನರ್ಸಿಂಗ್ ವಿದ್ಯಾರ್ಥಿನಿ ಮೇಲೆ ನಡೆದಿದ್ದ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
19 ವರ್ಷದ ನರ್ಸಿಂಗ್ ವಿದ್ಯಾರ್ಥಿನಿ ಕಳೆದ ಮಂಗಳವಾರ ಆಟೋರಿಕ್ಷಾದಲ್ಲಿ ತೆರಳುತ್ತಿದ್ದಾಗ, ರಿಕ್ಷಾ ಚಾಲಕ ಮತ್ತು ಆತನ ಇಬ್ಬರು ಸ್ನೇಹಿತರು ವರ್ಕಾಲಾದಲ್ಲಿ ಸಾಮೂಹಿಕ ಅತ್ಯಾಚಾರವೆಸಗಿದ್ದರು. ತೀವ್ರವಾಗಿ ಅಸ್ವಸ್ಥಗೊಂಡಿದ್ದ ಆಕೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಯುವತಿ ನೀಡಿದ ಮಾಹಿತಿ ಮೇರೆಗೆ ಆರೋಪಿಗಳ ಮೊಬೈಲ್ ಕರೆ ಮಾಹಿತಿಯ ಜಾಡು ಹಿಡಿದು ಅವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿಗಳ ವಿರುದ್ಧ ಐಪಿಸಿ 376(2)(ಜಿ)(ಸಾಮಾಹಿಕ ಅತ್ಯಾಚಾರ)ರಡಿ ಪ್ರಕರಣ ದಾಖಲಿಸಲಾಗಿದೆ.
ದಲಿತ ಕಾನೂನು ವಿದ್ಯಾರ್ಥಿನಿ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಘಟನೆ ನಡೆದ ಬೆನ್ನಲ್ಲೇ, ನರ್ಸಿಂಗ್ ವಿದ್ಯಾರ್ಥಿನಿ ಮೇಲೆ ಗ್ಯಾಂಗ್ ರೇಪ್ ನಡೆದಿರುವ ಪ್ರಕರಣ ವರದಿಯಾಗಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


