ದೇಶ

ಕಾಂಗ್ರೆಸ್ ಸರ್ಕಾರಗಳನ್ನು ಹೊರದಬ್ಬಲು ಮೋದಿ ಸರ್ಕಾರ ಪ್ರಯತ್ನಿಸುತ್ತಿದೆ: ಮನಮೋಹನ್ ಸಿಂಗ್

ರಾಜ್ಯಗಳಲ್ಲಿ ಕಾಂಗ್ರೆಸ್ ಸರ್ಕಾರಗಳನ್ನು ಹೊರದೂಡಲು ನರೇಂದ್ರ ಮೋದಿ ಸರ್ಕಾರ ಪ್ರಯತ್ನಿಸುತ್ತಿದೆ ಎಂದು ಮಾಜಿ ಪ್ರಧಾನ ಮಂತ್ರಿ ...

ಕಾಂಗ್ರೆಸ್ ಸರ್ಕಾರಗಳನ್ನು ಹೊರದಬ್ಬಲು ಮೋದಿ ಸರ್ಕಾರ ಪ್ರಯತ್ನಿಸುತ್ತಿದೆ: ಮನಮೋಹನ್ ಸಿಂಗ್
ದೆಹಲಿಯ ಜಂತರ್ ಮಂತರ್ ನಲ್ಲಿ ಕಾಂಗ್ರೆಸ್ ಹಮ್ಮಿಕೊಂಡಿದ್ದ ಪ್ರಜಾಪ್ರಭುತ್ವ ರಕ್ಷಿಸಿ ರ್ಯಾಲಿ ವೇಳೆ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಮತ್ತು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವ
Published On :

ನವದೆಹಲಿ: ರಾಜ್ಯಗಳಲ್ಲಿ ಕಾಂಗ್ರೆಸ್ ಸರ್ಕಾರಗಳನ್ನು ಹೊರದೂಡಲು ನರೇಂದ್ರ ಮೋದಿ ಸರ್ಕಾರ ಪ್ರಯತ್ನಿಸುತ್ತಿದೆ ಎಂದು ಮಾಜಿ ಪ್ರಧಾನ ಮಂತ್ರಿ ಮನಮೋಹನ್ ಸಿಂಗ್ ಆರೋಪಿಸಿದ್ದಾರೆ.

ದೆಹಲಿಯ ಜಂತರ್ ಮಂತರ್ ನಲ್ಲಿ ಕಾಂಗ್ರೆಸ್ ನೇತೃತ್ವದಲ್ಲಿ ನಡೆದ ಪ್ರಜಾಪ್ರಭುತ್ವ ರಕ್ಷಿಸಿ ರ್ಯಾಲಿಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ದಿನದಿಂದ ಕಾಂಗ್ರೆಸ್ ಮುಕ್ತ ಭಾರತ ಅದರ ಗುರಿಯಾಗಿದೆ. ಬಿಜೆಪಿ ನಾಯಕರು ಎಲ್ಲೇ ಹೋಗಲಿ ಅದನ್ನೇ ಹೇಳುತ್ತಾರೆ. ಆದರೆ ಕಾಂಗ್ರೆಸ್ ಭಾರತದ ಆತ್ಮ ಎಂದು ಮೋದಿ ಸರ್ಕಾರಕ್ಕೆ ಹೇಳಲು ಇಚ್ಛಿಸುತ್ತೇನೆ ಎಂದು ಸಿಂಗ್ ಹೇಳಿದರು.

ಕಾಂಗ್ರೆಸ್ ಪಕ್ಷ ಹರಿಯುವ ಗಂಗಾ ನದಿ ಇದ್ದ ಹಾಗೆ. ನೀವು ಅದನ್ನು ಕೆಡಿಸಿ ಅಥವಾ ಏನೇ ಮಾಡಿ, ಅದು ತನ್ನ ಚಲನೆಯನ್ನು ಬದಲಿಸುವುದಿಲ್ಲ. 1885ರಲ್ಲಿ ಕಾಂಗ್ರೆಸ್ ಪಕ್ಷ ಸ್ಥಾಪನೆಗೊಂಡಲ್ಲಿಂದ ಅದರ ಮೇಲೆ ದಾಳಿಗಳು ನಡೆಯುತ್ತಲೇ ಬಂದಿದೆ. ಜನರು ಪಕ್ಷವನ್ನು ದುರ್ಬಲಗೊಳಿಸಲು ಪ್ರಯತ್ನಿಸುತ್ತಲೇ ಇದ್ದರು. ಆದರೆ ಅವರು ಸಫಲರಾಗಲಿಲ್ಲ ಎಂದರು ಮನಮೋಹನ್ ಸಿಂಗ್.

ಅರುಣಾಚಲ ಪ್ರದೇಶ ಮತ್ತು ಉತ್ತರಾಖಂಡ ರಾಜ್ಯಗಳ ರಾಜಕೀಯ ಬಿಕ್ಕಟ್ಟನ್ನು ಪ್ರಸ್ತಾಪಿಸಿದ ಅವರು, ಅನೇಕ ರಾಜ್ಯಗಳಲ್ಲಿ ಕಾಂಗ್ರೆಸ್ ಅಧಿಕಾರದಲ್ಲಿಲ್ಲ. ಆದರೆ ಅಧಿಕಾರದಲ್ಲಿರುವ ರಾಜ್ಯಗಳಿಂದ ಕಾಂಗ್ರೆಸ್ ನ್ನು ಹೊರದೂಡಲು ಪ್ರಯತ್ನಗಳು ನಡೆಯುತ್ತಿವೆ. ಅರುಣಾಚಲ ಪ್ರದೇಶ ಮತ್ತು ಉತ್ತರಾಖಂಡಗಳಿಂದ ಕಾಂಗ್ರೆಸ್ ನ್ನು ಹೊರನೂಕಲಾಗಿದೆ ಎಂದರು.

ಮೋದಿ ಸರ್ಕಾರ ಪ್ರಜಾಪ್ರಭುತ್ವದ ಮೇಲೆ ದಾಳಿ ನಡೆಸಿದೆ. ಈಗ ಅದು ಕಾಂಗ್ರೆಸ್ ಆಡಳಿತವಿರುವ ರಾಜ್ಯಗಳಾದ ಮಣಿಪುರ, ನಾಗಲ್ಯಾಂಡ್, ಮಿಜೋರಾಮ್ ಮತ್ತು ಹಿಮಾಚಲ ಪ್ರದೇಶದ ಮೇಲೆ ಕಣ್ಣಿಟ್ಟಿದೆ. ಕಾಂಗ್ರೆಸ್ ಈ ಪರಿಸ್ಥಿತಿಯನ್ನು ಎದುರಿಸಬೇಕು. ದೇಶದ ಮೂಲೆ ಮೂಲೆಗಳಲ್ಲಿರುವ ಜನರನ್ನು ತಲುಪಿ ಮೋದಿ ಸರ್ಕಾರ ಪ್ರಜಾಪ್ರಭುತ್ವವನ್ನು ಕಿತ್ತೊಗೆಯಲು ಪ್ರಯತ್ನಿಸುತ್ತಿದೆ ಎಂದು ಜನತೆಗೆ ಮನದಟ್ಟು ಮಾಡಬೇಕು. ನಾವು ಬಿಜೆಪಿ ಗೆಲ್ಲಲು ಬಿಡುವುದಿಲ್ಲ ಎಂದು ಹೇಳಿದರು.

ಇಂದು ವಿಶ್ವವಿದ್ಯಾಲಯಗಳು, ಕೋರ್ಟ್ ಗಳು ಸುರಕ್ಷಿತವಾಗಿ ಉಳಿದಿಲ್ಲ. ಇಂತಹ ಪರಿಸ್ಥಿತಿಯನ್ನು ಅರ್ಥ ಮಾಡಿಕೊಂಡು ಮೋದಿ ಸರ್ಕಾರದ ಕುತಂತ್ರಗಳನ್ನು ಸೋಲಿಸಬೇಕು ಎಂದು ದೇಶದ ಜನತೆಗೆ ಕರೆ ನೀಡಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.