ಸಹರಾ ಸಂಸ್ಥೆ ಮುಖ್ಯಸ್ಥ ಸುಬ್ರತೋ ರಾಯ್ ಗೆ ಮಾತೃ ವಿಯೋಗ
ಷೇರುದಾರರಿಗೆ ನೀಡಬೇಕಿದ್ದ ಹಣವನ್ನು ನೀಡಲಾಗದೇ ಜೈಲು ಪಾಲಾಗಿರುವ ಸಹರಾ ಸಂಸ್ಥೆ ಮುಖ್ಯಸ್ಥ ಸುಬ್ರತೋರಾಯ್ ಅವರ ತಾಯಿ ಛಬಿ ರಾಯ್ ಅವರು ಶುಕ್ರವಾರ ನಿಧನರಾಗಿದ್ದಾರೆ ಎಂದು ತಿಳಿದುಬಂದಿದೆ...

ಲಖನೌ: ಷೇರುದಾರರಿಗೆ ನೀಡಬೇಕಿದ್ದ ಹಣವನ್ನು ನೀಡಲಾಗದೇ ಜೈಲು ಪಾಲಾಗಿರುವ ಸಹರಾ ಸಂಸ್ಥೆ ಮುಖ್ಯಸ್ಥ ಸುಬ್ರತೋರಾಯ್ ಅವರ ತಾಯಿ ಛಬಿ ರಾಯ್ ಅವರು ಶುಕ್ರವಾರ ನಿಧನರಾಗಿದ್ದಾರೆ ಎಂದು ತಿಳಿದುಬಂದಿದೆ.
95 ವರ್ಷದ ಛಬಿರಾಯ್ ಅವರು ಇಂದು ಮುಂಜಾನೆ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ಕಳೆದ ಎರಡು ವರ್ಷದಳಿಂದ ಅನಾರೋಗ್ಯ ಪೀಡಿತರಾಗಿದ್ದ ಛಬಿರಾಯ್ ಅವರು ಈಗ್ಗೆ ಕೆಲ ದಿನಗಳಿಂದ ಗಂಭೀರ ಸ್ಥಿತಿಯಲ್ಲಿದ್ದರು. ಹೀಗಾಗಿ ಅವರನ್ನು ಲಖನೌನ ಸಹರಾ ಶಹರ್ ನಲ್ಲಿರುವ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಇಂದು ಮುಂಜಾನೆ ಅವರು ಚಿಕಿತ್ಸೆ ಫಲಕಾರಿಯಾಗದೇ ಇಹಲೋಕ ತ್ಯಜಿಸಿದ್ದಾರೆ.
ಈ ಬಗ್ಗೆ ಮಾಧ್ಯಮಗಳಿಗೆ ಮಾಹಿತಿ ನೀಡಿರುವ ಸಹರಾ ಸಂಸ್ಥೆಯ ವಕ್ತಾರರು, ದಶಕಗಳಿಂದ ಸಹರಾ ಸಂಸ್ಥೆಯ ಬೆಳವಣಿಗೆಯಲ್ಲಿ ಮಹತ್ತರ ಪಾತ್ರವಹಿಸಿದ್ದ ಛಬಿರಾಯ್ ಅವರು ಶುಕ್ರವಾರ ಮುಂಜಾನೆ ಸುಮಾರು 1.30ರ ವೇಳೆಯಲ್ಲಿ ನಿಧನರಾಗಿದ್ದಾರೆ. ಕಳೆದ 2 ವರ್ಷಗಳಿಂದ ಅವರು ಅನಾರೋಗ್ಯ ಪೀಡಿತರಾಗಿದ್ದು, ಇತ್ತೀಚೆಗಷ್ಟೇ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು ಎಂದು ಹೇಳಿದ್ದಾರೆ.
ಇನ್ನು ತಾಯಿ ನಿಧನರಾದ ಹಿನ್ನಲೆಯಲ್ಲಿ ಪ್ರಸ್ತುತ ಜೈಲಿನಲ್ಲಿರುವ ಸಹರಾ ಸಂಸ್ಥೆ ಮುಖ್ಯಸ್ಥ ಸುಬ್ರತೋ ರಾಯ್ ಅವರು ತಾಯಿಯ ಅಂತಿಮ ಸಂಸ್ಕಾರಕ್ಕೆ ಆಗಮಿಸುವ ನಿರೀಕ್ಷೆ ಇದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


