ಆಂಧ್ರದಲ್ಲಿ ಮಳೆಯ ಆರ್ಭಟಕ್ಕೆ ನಾಲ್ವರು ಬಲಿ
ಶುಕ್ರವಾರ ಬೆಳಿಗ್ಗೆಯಿಂದ ಸುರಿಯುತ್ತಿರುವ ಭಾರಿ ಮಳೆಗೆ ರಾಜ್ಯದ ಪ್ರತ್ಯೇಕ ಸ್ಥಳಗಳಲ್ಲಿ ನಾಲ್ವರು ಸಾವನ್ನಪ್ಪಿದ್ದು, ಬೆಳೆಗಳು ನಾಶ...

Published On :
ವಿಜಯವಾಡ: ಆಂಧ್ರ ಪ್ರದೇಶದಲ್ಲಿ ವರುಣನ ಆರ್ಭಟಕ್ಕೆ ನಾಲ್ವರು ಬಲಿಯಾಗಿದ್ದಾರೆ.
ಶುಕ್ರವಾರ ಬೆಳಿಗ್ಗೆಯಿಂದ ಸುರಿಯುತ್ತಿರುವ ಭಾರಿ ಮಳೆಗೆ ರಾಜ್ಯದ ಪ್ರತ್ಯೇಕ ಸ್ಥಳಗಳಲ್ಲಿ ನಾಲ್ವರು ಸಾವನ್ನಪ್ಪಿದ್ದು, ಬೆಳೆಗಳು ನಾಶವಾಗಿದೆ ಎಂದು ಮೂಲಗಳು ತಿಳಿಸಿವೆ.
ಅಷ್ಟೇ ಅಲ್ಲದೇ, ಕೃಷ್ಣ, ಪಶ್ಚಿಮ ಗೋಧಾವರಿ, ಗುಂಟೂರು ಮತ್ತು ಕಡಪ ಜಿಲ್ಲೆಯಲ್ಲಿ ಭಾರಿ ಮಳೆಯಿಂದಾಗಿ ಮಾವು, ಬಾಳೆಹಣ್ಣು ಮತ್ತು ಪರಂಗಿ ಬೆಳೆ ನಾಶವಾಗಿದೆ ಎಂದು ವರದಿಯಾಗಿದೆ.
ಕರ್ನೂಲ್ ಜಿಲ್ಲೆಯ ನಂಡ್ಯಾಳ್ ಎಂಬಲ್ಲಿ ಮೀನು ಹಿಡಿಯುತ್ತಿದ್ದ ಇಬ್ಬರು ಮೀನುಗಾರರು ಸಾವನ್ನಪ್ಪಿದ್ದು, ಇನ್ನುಳಿದ ಐವರು ಗಾಯಗೊಂಡಿದ್ದಾರೆ. ಮೃತಪಟ್ಟವರನ್ನು ಟಿ ಪುಲ್ಲಯ್ಯ(50) ಮತ್ತು ಪಿ ಶೇಖರ್(30) ಎಂದು ಗುರುತಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


