ಆಗಸ್ಟಾ ಹಗರಣ ಕುರಿತು ಸೋನಿಯಾ ಪ್ರಶ್ನಿಸಲು ಪ್ರಧಾನಿ ಧೈರ್ಯ ಮಾಡಲ್ಲ: ಕೇಜ್ರಿವಾಲ್
ಆಗಸ್ಟಾ ವೆಸ್ಟ್ ಲ್ಯಾಂಡ್ ಖರೀದಿ ಹಗರಣ ಕುರಿತಂತೆ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಪ್ರಶ್ನಿಸಲು ಪ್ರಧಾನಿ...

Published On :
ನವದೆಹಲಿ: ಆಗಸ್ಟಾ ವೆಸ್ಟ್ ಲ್ಯಾಂಡ್ ಖರೀದಿ ಹಗರಣ ಕುರಿತಂತೆ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಪ್ರಶ್ನಿಸಲು ಪ್ರಧಾನಿ ನರೇಂದ್ರ ಮೋದಿ ಧೈರ್ಯ ಮಾಡುವುದಿಲ್ಲ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ.
ಆಗಸ್ಟಾ ವೆಸ್ಟ್ ಲ್ಯಾಂಡ್ ಹಗರಣದ ಶೀಘ್ರ ತನಿಖೆಗೆ ಆಗ್ರಹಿಸಿ ಆಮ್ ಆದ್ಮಿ ಪಕ್ಷ ದೆಹಲಿಯ ಜಂತರ್ ಮಂತರ್ ನಲ್ಲಿ ನಡೆಸುತ್ತಿರುವ ಪ್ರತಿಭಟನೆಯಲ್ಲಿ ಮಾತನಾಡಿದ ಅವರು, ನರೇಂದ್ರ ಮೋದಿ ಸರ್ಕಾರದಡಿಯಲ್ಲಿ ನಡೆಯುತ್ತಿರುವ ಆಗಸ್ಟಾ ವೆಸ್ಟ್ ಲ್ಯಾಂಡ್ ಹಗರಣದ ತನಿಖೆ ಒಂದು ಇಂಚು ಮುಂದುವರೆದಿಲ್ಲ ಎಂದು ಆರೋಪಿಸಿದ್ದಾರೆ.
2014ಕ ಚುನಾವಣೆ ಸಂದರ್ಭದಲ್ಲಿ ಮೋದಿ ದೇಶದ ಜನತೆಗೆ ಭ್ರಷ್ಟರನ್ನು ಶಿಕ್ಷಿಸುವುದಾಗಿ ಭರವಸೆ ನೀಡಿದ್ದರು. ಆದರೆ, ಅವರು ಅಧಿಕಾರಕ್ಕೆ ಬಂದು ಎರಡು ವರ್ಷಗಳು ಕಳೆದರೂ ಯಾರೊಬ್ಬನನ್ನು ಜೈಲಿಗೆ ಕಳುಹಿಸಿಲ್ಲ... ತನಿಖೆಗಳು ಒಂದಿಂಚು ಮುಂದೆ ಸರಿದಿಲ್ಲ ಎಂದು ಹೇಳಿದ್ದಾರೆ.
ಆಗಸ್ಟಾ ಹಗರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಯಾಕೆ ವಿಚಾರಣೆಗೊಳಪಡಿಸುತ್ತಿಲ್ಲ. ಮೋದಿಜಿಯವರು ಹಗರಣ ಸಂಬಂಧ ಸೋನಿಯಾ ಅವರನ್ನು ಪ್ರಶ್ನಿಸುವ ಧೈರ್ಯ ಮಾಡುವುದಿಲ್ಲ ಎಂದ ಅವರು, ಪ್ರಧಾನಿ ತಪ್ಪಿತಸ್ಥರನ್ನು ಶಿಕ್ಷಿಸಬೇಕೆ ಹೊರತು, ರಕ್ಷಣೆ ನೀಡಬಾರದು. ಸೋನಿಯಾ ಅವರನ್ನು ಈ ಸಂಬಂಧ ವಿಚಾರಣೆಗೊಳಪಡಿಸಬೇಕು ಎಂದು ಆಗ್ರಹಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ನರೇಂದ್ರ ಮೋದಿSonia Gandhiಸೋನಿಯಾ ಗಾಂಧಿಅರವಿಂದ್ ಕೇಜ್ರಿವಾಲ್Arvind KejriwalNarendra ModAgusta scamಆಗಸ್ಟಾ ಹಗರಣ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


