ಉಗ್ರ ಸಂಘಟನೆಯೊಂದಿಗೆ ನಂಟು: ಬಂಧಿತ ಎಲ್ಲಾ 10 ಆರೋಪಿಗಳ ಬಿಡುಗಡೆ
ಸೂಕ್ತ ಸಾಕ್ಷ್ಯಾಧಾರಗಳ ಕೊರತೆ ಹಿನ್ನೆಲೆಯಲ್ಲಿ ದೆಹಲಿ ಪೊಲೀಸರು ಬಂಧಿಸಿದ್ದ ಎಲ್ಲಾ 10 ಶಂಕಿತ ಉಗ್ರರನ್ನು ಸೋಮವಾರ ಬಿಡುಗಡೆ ಮಾಡಲಾಗಿದೆ...

Published On :
ದೆಹಲಿ: ಸೂಕ್ತ ಸಾಕ್ಷ್ಯಾಧಾರಗಳ ಕೊರತೆ ಹಿನ್ನೆಲೆಯಲ್ಲಿ ದೆಹಲಿ ಪೊಲೀಸರು ಬಂಧಿಸಿದ್ದ ಎಲ್ಲಾ 10 ಶಂಕಿತ ಉಗ್ರರನ್ನು ಸೋಮವಾರ ಬಿಡುಗಡೆ ಮಾಡಲಾಗಿದೆ.
ಜೈಶ್ ಇ ಮೊಹಮ್ಮದ್ ಉಗ್ರ ಸಂಘಟನೆಯೊಂದಿಗೆ ನಂಟು ಹೊಂದಿದ ಆರೋಪ ಮೇಲೆ ಕಳೆದ ಮಂಗಳವಾರ 10 ಶಂಕಿತ ಉಗ್ರರನ್ನು ದೆಹಲಿ ಪೊಲೀಸರು ಬಂಧಿಸಿದ್ದರು. ಆ ಪೈಕಿ ನಾಲ್ವರನ್ನು ಶನಿವಾರ ಬಿಡುಗಡೆಗೊಳಿಸಿದ್ದರು. ಇಂದು ಇತರೆ 6 ಆರೋಪಿಗಳನ್ನು ಬಿಡುಗಡೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಮೂರು ದಿನಗಳ ವಿಚಾರಣೆಯ ಬಳಿಕ ನಾಲ್ವರು ಶಂಕಿತರ ವಿರುದ್ಧ ಸೂಕ್ತ ಸಾಕ್ಷ್ಯಾಧಾರಗಳು ದೊರೆಯದ ಹಿನ್ನೆಲೆಯಲ್ಲಿ ದೆಹಲಿ ಪೊಲೀಸರು ಮೊದಲು ನಾಲ್ವರನ್ನು ಬಿಡುಗಡೆ ಮಾಡಿ ನಂತರ ಇತರೆ ಆರೋಪಿಗಳನ್ನು ಬಿಡುಗಡೆಗೊಳಿಸಿದ್ದಾರೆ.
ವಿಚಾರಣೆ ಬಳಿಕ ಉಳಿದ ಆರು ಆರೋಪಿಗಳನ್ನು ಬಿಡುಗಡೆ ಮಾಡಲಾಗಿದ್ದು, ಅಗತ್ಯವಿದ್ದಾಗ ವಿಚಾರಣೆಗೆ ಹಾಜರಾಗುವಂತೆ ಷರತ್ತು ವಿಧಿಸಲಾಗಿದೆ ಎಂದು ದೆಹಲಿ ವಿಶೇಷ ಪೊಲೀಸ್ ಘಟಕದ ಆಯುಕ್ತ ಅರವಿಂದ್ ದೀಪ್ ಅವರು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


