ಪ್ರಧಾನಿ ಮೋದಿಯವರ ವಿದ್ಯಾರ್ಹತೆ ಸರ್ಟಿಫಿಕೇಟ್ ನಕಲಿ: ಆಮ್ ಆದ್ಮಿ ಪಕ್ಷ
ಬಿಜೆಪಿ ಅಧ್ಯಕ್ಷ ಅಮಿತ್ ಶಾ ಬಹಿರಂಗ ಪಡಿಸಿರುವ ಪ್ರಧಾನಿ ನರೇಂದ್ರ ಮೋದಿಯವರ ವಿದ್ಯಾರ್ಹತೆ ಸರ್ಟಿಫಿಕೇಟ್ ನಕಲಿ. ಈ ಮೂಲಕ ಬಿಜೆಪಿ...

Published On :
ನವದೆಹಲಿ: ಬಿಜೆಪಿ ಅಧ್ಯಕ್ಷ ಅಮಿತ್ ಶಾ ಬಹಿರಂಗ ಪಡಿಸಿರುವ ಪ್ರಧಾನಿ ನರೇಂದ್ರ ಮೋದಿಯವರ ವಿದ್ಯಾರ್ಹತೆ ಸರ್ಟಿಫಿಕೇಟ್ ನಕಲಿ. ಈ ಮೂಲಕ ಬಿಜೆಪಿ ದೇಶದ ಜನರನ್ನು ಮೋಸ ಮಾಡುತ್ತಿದೆ ಎಂದು ಆಮ್ ಆದ್ಮಿ ಪಕ್ಷ ಹೇಳಿದೆ.
ಸೋಮವಾರ ನವದೆಹಲಿಯಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಆಪ್ ನಾಯಕ ಅಶುತೋಷ್, ಮೋದಿಯವರ ಶೈಕ್ಷಣಿಕ ಸರ್ಟಿಫಿಕೇಟ್ ನಕಲಿ ಮತ್ತು ಅಲ್ಲಿ ನಮೂದಿಸಿರುವ ಹೆಸರು ಹೊಂದಿಕೆಯಾಗಿಲ್ಲ ಎಂದಿದ್ದಾರೆ.
ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ನರೇಂದ್ರ ಮೋದಿ ಅವರ ವಿದ್ಯಾರ್ಹತೆ ಏನು ಎಂಬುದನ್ನು ಸಾಬೀತು ಪಡಿಸಲಿ ಎಂದು ಹೇಳಿದ್ದಕ್ಕೆ, ಮೋದಿ ಅವರು ದೆಹಲಿ ವಿಶ್ವ ವಿದ್ಯಾಲಯದಿಂದ ಬಿಎ ಮತ್ತು ಗುಜರಾತ್ ವಿಶ್ವ ವಿದ್ಯಾಲಯದಿಂದ ಎಂಎ ಪದವಿ ಗಳಿಸಿದ್ದಾರೆ ಎಂಬುದನ್ನು ಸಾಬೀತುಪಡಿಸುವ ಸರ್ಟಿಫಿಕೇಟ್‌ಗಳನ್ನು ಅಮಿತ್ ಶಾ ಬಿಡುಗಡೆ ಮಾಡಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


