ದೇಶ

ಸಿಬಿಐ ಮುಂದೆ ಹಾಜರಾಗಲು ಸಮಯ ಕೋರಿದ ಹರೀಶ್ ರಾವತ್

ಕೇಂದ್ರ ಸರ್ಕಾರ ಉತ್ತರಾಖಾಂಡ್ ನಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರಿರುವುದರಿಂದ ಹೊರಹಾಕಲಾಗಿರುವ ಮಾಜಿ ಮುಖ್ಯಮಂತ್ರಿ ಹರೀಶ್ ರಾವತ್ ಅವರು ಬಂಡಾಯ ಎದ್ದ ಕಾಂಗ್ರೆಸ್ ಶಾಸಕರಿಗೆ ಲಂಚ ನೀಡಲು

ಸಿಬಿಐ ಮುಂದೆ ಹಾಜರಾಗಲು ಸಮಯ ಕೋರಿದ ಹರೀಶ್ ರಾವತ್
ಉತ್ತರಾಖಾಂಡ್ ಮಾಜಿ ಮುಖ್ಯಮಂತ್ರಿ ಹರೀಶ್ ರಾವತ್
Published On :

ಡೆಹ್ರಾಡೂನ್: ಕೇಂದ್ರ ಸರ್ಕಾರ ಉತ್ತರಾಖಾಂಡ್ ನಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರಿರುವುದರಿಂದ ಹೊರಹಾಕಲಾಗಿರುವ ಮಾಜಿ ಮುಖ್ಯಮಂತ್ರಿ ಹರೀಶ್ ರಾವತ್ ಅವರು ಬಂಡಾಯ ಎದ್ದ ಕಾಂಗ್ರೆಸ್ ಶಾಸಕರಿಗೆ ಲಂಚ ನೀಡಲು ಪ್ರಯತ್ನಿಸಿದ ಆರೋಪದ ಪ್ರಕರಣದಲ್ಲಿ, ಪ್ರಶ್ನೆಗಳಿಗೆ ಉತ್ತರಿಸಲು ಸಿಬಿಐ ಮುಂದೆ ಹಾಜರಾಗಲು ಸೋಮವಾರ ಹೆಚ್ಚಿನ ಸಮಯಾವಕಾಶವನ್ನು ಕೋರಿದ್ದಾರೆ.

"ನಮ್ಮ ತೊಂದರೆಗಳನ್ನು ಏಜೆನ್ಸಿ ಅರ್ಥ ಮಾಡಿಕೊಳ್ಳುತ್ತದೆ ಎಂದು ನಂಬಿದ್ದೇನೆ ಮತ್ತು ಹೆಚ್ಚಿನ ಸಮಯ ನೀಡುತ್ತದೆಂದು ಕೂಡ" ಎಂದು ಡೆಹ್ರಾಡೂನ್ ನಲ್ಲಿ ವರದಿಗಾರರಿಗೆ ತಿಳಿಸಿದ್ದಾರೆ.

"ಸಿಬಿಐ ಮುಂದೆ ಹಾಜರಾಗಿ ಅವರು ಕೇಳುವ ಎಲ್ಲ ಮಾಹಿತಿಯನ್ನೂ ನೀಡಲಿದ್ದೇನೆ ಎಂದು ಸ್ಪಷ್ಟವಾಗಿ ಹೇಳಿದ್ದೇನೆ" ಎಂದು ಕೂಡ ಅವರು ತಿಳಿಸಿದ್ದಾರೆ.

ನಾರ್ಕೋ ಅನಲಿಸಿಸ್ ಪರೀಕ್ಷೆಗೂ ತಾವು ಸಿದ್ದ ಎಂದು ಹರೀಶ್ ರಾವತ್ ಹೇಳಿದ್ದಾರೆ.

೭೦ ಸದಸ್ಯರ ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಲು ಬಂಡಾಯವೆದ್ದಿರುವ ಕಾಂಗ್ರೆಸ್ ಶಾಸಕರಿಗೆ ರಾವತ್ ಲಂಚ ನೀಡುತ್ತಿದ್ದಾರೆ ಎಂದು ಆರೋಪಿಸಿದ್ದ ವಿಡಿಯೋ ಪ್ರಕರಣದ ವಿಚಾರಣೆಯಲ್ಲಿ ರಾವತ್ ಅವರಿಗೆ ಸಿಬಿಐ ನೋಟಿಸ್ ನೀಡಿತ್ತು.

ಈ ವಿಡಿಯೋ ಚಿತ್ರೀಕರಣ ನಡೆಸಿದ್ದ ಉಮೇಶ್ ಕುಮಾರ್ ಅವರನ್ನು ಸಿಬಿಐ ಇದಕ್ಕೂ ಮುಂಚೆ ಪ್ರಶ್ನಿಸಿತ್ತು. ಈ ವಿಡಿಯೋ ಸಿಡಿ ನಿಜವಾದದ್ದು ಮತ್ತು ತಿರುಚಲಾಗಿಲ್ಲ ಎಂದು ವಿಧಿ ವಿಜ್ಞಾನ ಪರೀಕ್ಷೆ ಸ್ಪಷ್ಟಪಡಿಸಿದೆ ಎಂದು ಸಿಬಿಐ ಮೂಲಗಳು ತಿಳಿಸಿವೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.