ಉತ್ತರಾಖಂಡ: 9 ಬಂಡಾಯ ಶಾಸಕರ ಅರ್ಜಿ ವಜಾಗೊಳಿಸಿದ ಹೈಕೋರ್ಟ್
ರಾಜಕೀಯ ಬಿಕ್ಕಟ್ಟಿನ ಸಂದರ್ಭದಲ್ಲಿ ತಮ್ಮನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸಿದ ವಿಧಾನಸಭೆ ಸ್ಪೀಕರ್ ಕ್ರಮ...

Published On :
ನೈನಿತಲ್: ರಾಜಕೀಯ ಬಿಕ್ಕಟ್ಟಿನ ಸಂದರ್ಭದಲ್ಲಿ ತಮ್ಮನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸಿದ ವಿಧಾನಸಭೆ ಸ್ಪೀಕರ್ ಕ್ರಮ ಪ್ರಶ್ನಿಸಿ ಕಾಂಗ್ರೆಸ್ ನ 9 ಬಂಡಾಯ ಶಾಸಕರು ಸಲ್ಲಿಸಲಾಗಿದ್ದ ಅರ್ಜಿಯನ್ನು ಉತ್ತರಾಖಂಡ ಹೈಕೋರ್ಟ್ ವಜಾಗೊಳಿಸಿದೆ.
ಶನಿವಾರ ಅರ್ಜಿ ಸಂಬಂಧ ಸುಮಾರು ಮೂರು ಗಂಟೆಗಳ ಕಾಲ ವಾದ ವಿವಾದಗಳನ್ನು ಆಲಿಸಿದ ಬಳಿಕ ನ್ಯಾ.ಯು.ಸಿ ಧ್ಯಾನಿ ಅವರು, ತೀರ್ಪನ್ನು ಸೋಮವಾರಕ್ಕೆ ಕಾಯ್ದಿರಿಸಿದ್ದರು. ಇಂದು ತೀರ್ಪನ್ನು ಪ್ರಕಟಿಸಿರುವ ನ್ಯಾಯಾಮೂರ್ತಿಗಳು ಅರ್ಜಿಯನ್ನು ವಜಾಗೊಳಿಸಿದ್ದು, ಸುಪ್ರೀಂಕೋರ್ಟ್ ಆದೇಶದಂತೆ ಅನರ್ಹಗೊಂಡಿರುವ ಬಂಡಾಯ ಶಾಸಕರು ವಿಶ್ವಾಸಮತ ಯಾಚನೆಯಲ್ಲಿ ಪಾಲ್ಗೊಂಡು ಮತಚಲಾಯಿಸುವಂತಿಲ್ಲ ಎಂದು ಹೇಳಿದೆ.
70 ಸದಸ್ಯ ಬಲದ ವಿಧಾನಸಭೆಯಲ್ಲಿ ಪ್ರಸ್ತುತ ಬಿಜೆಪಿ 28, ಕಾಂಗ್ರೆಸ್ 27 ಮತ್ತು ಬಿಎಸ್ ಪಿ ಇಬ್ಬರು ಶಾಸಕರನ್ನು ಹೊಂದಿದ್ದರೆ, ಮೂವರು ಪಕ್ಷೇತರರು ಮತ್ತು ಓರ್ವ ಉತ್ತರಾಖಂಡ ಕ್ರಾಂತಿದಳ ಶಾಸಕರಿದ್ದಾರೆ. ಇನ್ನು 9 ಬಂಡೋರ ಕಾಂಗ್ರೆಸ್ ಶಾಸಕರು ಅನರ್ಹಗೊಂಡಿದ್ದಾರೆ. ಬಿಜೆಪಿಯೂ ಓರ್ವ ಬಂಡಕೋರ ಶಾಸಕನನ್ನು ಹೊಂದಿದೆ.
ಇನ್ನು ಸುಪ್ರೀಂಕೋರ್ಟ್ ಆದೇಶದ ಅನುಸಾರ ಹರೀಶ್ ರಾವತ್ ಸರ್ಕಾರ ಮಂಗಳವಾರ ವಿಶ್ವಾಸಮತ ಯಾಚಿಸಲಿದ್ದು, ಇದರಲ್ಲಿ ಅನರ್ಹಗೊಂಡಿರುವ ಬಂಡಾಯ ಶಾಸಕರು ಪಾಲ್ಗೊಳ್ಳುವ ಹಾಗಿಲ್ಲ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


