ದಿನದಿಂದ ದಿನಕ್ಕೆ ಕುಗ್ಗುತ್ತಿರುವ ಮೋದಿ ಪ್ರಭಾವ: ದೇವೇಗೌಡ
ಪ್ರಧಾನಿ ನರೇಂದ್ರ ಮೋದಿ ಅವರ ಪ್ರಭಾವ ದಿನದಿಂದ ದಿನಕ್ಕೆ ಕುಗುತ್ತಿದೆ ಎಂದು ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ...

Published On :
ಕೋಜಿಕೊಡೆ: ಪ್ರಧಾನಿ ನರೇಂದ್ರ ಮೋದಿ ಅವರ ಪ್ರಭಾವ ದಿನದಿಂದ ದಿನಕ್ಕೆ ಕುಗುತ್ತಿದೆ ಎಂದು ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಹೇಳಿದ್ದಾರೆ.
ಎನ್ ಡಿಎ ಅಧಿಕಾರಕ್ಕೆ ಬಂದ ಮೇಲೆ ದೆಹಲಿ ಮತ್ತು ಬಿಹಾರದಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಎನ್ ಡಿಎ ಸೋಲು ಕಂಡಿದ್ದು, ಹೆಚ್ಚು ದಿನ ಪ್ರಧಾನಿ ಮೋದಿ ಇದೇ ಅಧಿಕಾರದಲ್ಲಿ ಉಳಿಯುವುದಿಲ್ಲ ಎಂದು ದೇವೇಗೌಡ ಹೇಳಿದ್ದಾರೆ.
ಕೇರಳ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿರುವ ಎಲ್ ಡಿಎಫ್ ಅಭ್ಯರ್ಥಿಗಳಿಗೆ ಬೆಂಬಲಿಸಿ ಚುನಾವಣೆ ಪ್ರಚಾರದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಮೋದಿ ಹೆಚ್ಚು ಕಾಲ ಇದೇ ಅಧಿಕಾರದಲ್ಲಿರುವುದಿಲ್ಲ ಎಂದು ದೆಹಲಿ ತೋರಿಸಿಕೊಟ್ಟತು. ಹಾಗಾಗಿ, ಬಿಹಾರದಲ್ಲೂ ಸೋಲು ಕಂಡಿತು. ದಿನದಿಂದ ದಿನಕ್ಕೆ ಮೋದಿ ಪ್ರಭಾವ ಕುಗ್ಗುತ್ತಿದೆ ಎಂದಿದ್ದಾರೆ.
ಕಾಂಗ್ರೆಸ್ ಮತ್ತು ಎನ್ ಡಿಎ ಜಾತ್ಯಾತೀತ ಮತಗಳನ್ನು ವಿಭಜನೆ ಮಾಡುತ್ತಿದೆ. ಯುಡಿಎಫ್ ಅಧಿಕಾರವಧಿಯಲ್ಲಿ ಭ್ರಷ್ಟಾಚಾರ ತಾಂಡವವಾಡಿದೆ. ಎಲ್ ಡಿಎಫ್ ಅಧಿಕಾರಕ್ಕೆ ಬಂದರೆ ಮಾತ್ರ ಇದನ್ನು ತೊಲಗಿಸಲು ಸಾಧ್ಯ ಎಂದು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


