ಉತ್ತರಾಖಂಡ ಚಾರ್ ಧಾಮ್ ತೀರ್ಥಯಾತ್ರೆ ಆರಂಭ
ಉತ್ತರಾಖಂಡ ರಾಜ್ಯದ ಐತಿಹಾಸಿಕ ಚಾರ್ ಧಾಮ್ ಯಾತ್ರೆಗೆ ಅಕ್ಷಯ ತೃತೀಯ ದಿನವಾದ ಸೋಮವಾರ ಚಾಲನೆ ನೀಡಲಾಗಿದೆ.

ಡೆಹ್ರಾಡೂನ್: ಉತ್ತರಾಖಂಡ ರಾಜ್ಯದ ಐತಿಹಾಸಿಕ ಚಾರ್ ಧಾಮ್ ಯಾತ್ರೆಗೆ ಅಕ್ಷಯ ತೃತೀಯ ದಿನವಾದ ಸೋಮವಾರ ಚಾಲನೆ ನೀಡಲಾಗಿದೆ.
ಕಳೆದ ಆರು ತಿಂಗಳ ಕಾಲ ಮುಚ್ಚಿದ್ದ ಗಂಗೋತ್ರಿ ಮತ್ತು ಯಮುನೋತ್ರಿ ದೇವಾಲಯಗಳನ್ನು ಭಕ್ತರ ದರ್ಶನಕ್ಕೆ ತೆರೆಯಲಾಗಿದ್ದು, ರುದ್ರಪ್ರಯಾಗದ ಕೇದಾರನಾಥ ದೇವಾಲಯ, ಉತ್ತರಕಾಶಿ ಜಿಲ್ಲೆಯ ಗಂಗೋತ್ರಿ ಮತ್ತು ಯಮುನೋತ್ರಿ ದೇವಾಲಯಗಳಲ್ಲಿ ಭಕ್ತರ ಆಗಮನಕ್ಕೆ ಸಿದ್ಧತೆ ಪೂರ್ಣಗೊಂಡಿದೆ. ಯಾತ್ರಾ ಮಾರ್ಗದಲ್ಲಿ ಬಿಗಿ ಭದ್ರತೆ ಕೈಗೊಳ್ಳಲಾಗಿದೆ ಎಂದು ಉತ್ತರಾಖಂಡ ಚಾರ್ ಧಾಮ್ ಯಾತ್ರಾ ಮಂಡಳಿ ಹೇಳಿದೆ.
ಸೋಮವಾರ ಬೆಳಗ್ಗೆ 7 ಗಂಟೆಗೆ ದೇವಾಲಯದ ಹಿರಿಯ ಅರ್ಚಕರು ಮಂತ್ರಘೋಷಗಳ ಮೂಲಕ ಕೇದಾರನಾಥ ದೇವಾಲಯ ಗರ್ಭಗುಡಿ ದ್ವಾರ ತೆರೆದರು. ಈ ವೇಳೆ ಸಾವಿರಾರು ಭಕ್ತರು ಆಗಮಿಸಿದ್ದರು. ಚಮೋಲಿಯಲ್ಲಿರುವ ಬದರಿನಾಥ ದೇವಾಲಯ ಮೇ 11ರಂದು ಅಂದರೆ ನಾಳೆ ದರ್ಶನಕ್ಕೆ ತೆರೆಯಲಾಗುತ್ತದೆ. ಬದರಿನಾಥ ದೇವಾಲಯ ಸಮುದ್ರ ಮಟ್ಟದಿಂದ 3,133 ಮೀ. ಹಾಗೂ ಕೇದಾರನಾಥ ದೇವಾಲಯ 3,581 ಮೀ. ಎತ್ತರದಲ್ಲಿದ್ದು, ಪ್ರತಿ ವರ್ಷ ನವೆಂಬರ್‌ನಿಂದ ಮೇವರೆಗೆ ದೇವಾಲಯದಲ್ಲಿ ದರ್ಶನ ಸ್ಥಗಿತಗೊಳಿಸಲಾಗುತ್ತದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


