ಪ್ರಧಾನಿ ಮೋದಿ ಬಹುಶಃ ಸರ್ಕಾರ ಉರುಳಿಸುವ ಪ್ರಯತ್ನ ಅಂತ್ಯಗೊಳಿಸಬಹುದು: ಕೇಜ್ರಿವಾಲ್
ಉತ್ತರಾಖಂಡ ರಾಜಕೀಯ ಬಿಕ್ಕಟ್ಟಿಗೆ ಕಾರಣವಾಗಿದ್ದ ಪ್ರಧಾನಿ ನರೇಂದ್ರ ಮೋದಿ ಬಹುಶಃ ಈಗಲಾದರೂ ಬಿಜೆಪಿಯೇತರ ಸರ್ಕಾರ ಉರುಳಿಸುವ ಪ್ರಯತ್ನವನ್ನು ಕೈಬಿಡಬಹುದು ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ...

ನವದೆಹಲಿ: ಉತ್ತರಾಖಂಡ ರಾಜಕೀಯ ಬಿಕ್ಕಟ್ಟಿಗೆ ಕಾರಣವಾಗಿದ್ದ ಪ್ರಧಾನಿ ನರೇಂದ್ರ ಮೋದಿ ಬಹುಶಃ ಈಗಲಾದರೂ ಬಿಜೆಪಿಯೇತರ ಸರ್ಕಾರ ಉರುಳಿಸುವ ಪ್ರಯತ್ನವನ್ನು ಕೈಬಿಡಬಹುದು ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ.
ಉತ್ತರಾಖಂಡ ವಿಶ್ವಾಸಮತ ಯಾಚನೆ ಪ್ರಕ್ರಿಯೆ ಮುಕ್ತಾಯದ ಬಳಿಕ ಮಂಗಳವಾರ ಟ್ವೀಟ್ ಮಾಡಿರುವ ಕೇಜ್ರಿವಾಲ್, ಉತ್ತರಾಖಂಡ ರಾಜಕೀಯ ಬಿಕ್ಕಟ್ಟಿಗೆ ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿ ಪಕ್ಷವೇ ಕಾರಣ ಎಂದು ಆರೋಪಿಸಿದರು. "ಉತ್ತರಖಂಡ ರಾಜಕೀಯ ಬಿಕ್ಕಟ್ಟಿನಿಂದ ಲಾಭ ಪಡೆಯುವ ಮಹತ್ವಾಕಾಂಕ್ಷೆ ಹೊಂದಿದ್ದ ಬಿಜೆಪಿಗೆ ಪ್ರಸ್ತುತ ಫಲಿತಾಂಶ ಪ್ರಮುಖ ಹಿನ್ನಡೆಯಾಗಿದ್ದು, ಬಹುಶಃ ಈಗಲಾದರೂ ಬಿಜೆಪಿಯೇತರ ಸರ್ಕಾರಗಳನ್ನು ಉರುಳಿಸುವ ತಮ್ಮ ಪ್ರಯತ್ನವನ್ನು ಕೈಬಿಡಬಹುದು ಎಂದು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


