ಸಂಸತ್ತಿನ ಸಂಕೀರ್ಣದಲ್ಲಿ ವ್ಯಕ್ತಿಯೊಬ್ಬ ಆತ್ಮಹತ್ಯೆಗೆ ಶರಣು
ಸಂಸತ್ ಸಂಕೀರ್ಣದಲ್ಲಿ ವ್ಯಕ್ತಿಯೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಗುರುವಾರ ಬೆಳಿಗ್ಗೆ...

Published On :
ನವದೆಹಲಿ: ಸಂಸತ್ತಿನ ಸಂಕೀರ್ಣದಲ್ಲಿ ವ್ಯಕ್ತಿಯೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಗುರುವಾರ ಬೆಳಿಗ್ಗೆ ನಡೆದಿದೆ.
ಮಧ್ಯಪ್ರದೇಶದ ಶಿವಪುರಿ ಜಿಲ್ಲೆಯವರಾದ ರಾಮ್ ದಯಾಲ್ ವರ್ಮಾ(39) ಆತ್ಮಹತ್ಯೆಗೆ ಶರಣಾದ ದುರ್ದೈವಿ.
ಸಂಸತ್ತಿನ ಸಂಕೀರ್ಣದಲ್ಲಿರುವ ರೈಲ್ ಭವನ ಮತ್ತು ಮೀಡಿಯಾ ಪಾರ್ಕಿಂಗ್ ಸೆಂಟರ್ ನಲ್ಲಿ ಇದ್ದ ಮರವೊಂದರಲ್ಲಿ ಇಂದು ಬೆಳಿಗ್ಗೆ 7.15ರ ವೇಳೆ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದೆ.
ಆತ್ಮಹತ್ಯೆಗೂ ಮುನ್ನ ವರ್ಮಾ ಡೆತ್ ನೋಟ್ ಬರೆದಿಟ್ಟಿದ್ದು, ಆತನ ಜೇಬಿನಲ್ಲಿ ಪತ್ತೆಯಾಗಿದೆ. ಮೃತನ ಸಂಬಂಧಿಕರಿಗೆ ಸುದ್ದಿ ಮುಟ್ಟಿಸುವ ಪ್ರಯತ್ನ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


