ದೇಶ

ಉತ್ತರ ಪ್ರದೇಶ ಚುನಾವಣೆ ಗೆಲ್ಲಲು ಪ್ರಿಯಾಂಕ ಗಾಂಧಿ ಅವರನ್ನು ಕರೆತನ್ನಿ: ಕಾಂಗ್ರೆಸ್ ಹೈ ಕಮಾಂಡ್ ಗೆ ಹೆಚ್ಚಿದ ಒತ್ತಡ

ಉತ್ತರ ಪ್ರದೇಶ ವಿಧಾನಸಭಾ ಚುನಾವಣೆ ಹತ್ತಿರವಾಗುತ್ತಿದ್ದಂತೆಯೇ ರಾಜ್ಯ ಕಾಂಗ್ರೆಸ್ ನಿಂದ ಪ್ರಿಯಾಂಕ ಗಾಂಧಿಯವರನ್ನು ಸಕ್ರಿಯ ರಾಜಕಾರಣಕ್ಕೆ ಕರೆತರುವುದಕ್ಕೆ ಒತ್ತಡ ಹೆಚ್ಚುತ್ತಿದೆ.

ಉತ್ತರ ಪ್ರದೇಶ ಚುನಾವಣೆ ಗೆಲ್ಲಲು ಪ್ರಿಯಾಂಕ ಗಾಂಧಿ ಅವರನ್ನು ಕರೆತನ್ನಿ: ಕಾಂಗ್ರೆಸ್ ಹೈ ಕಮಾಂಡ್ ಗೆ ಹೆಚ್ಚಿದ ಒತ್ತಡ
ಪ್ರಿಯಾಂಕ ಗಾಂಧಿ
Published On :

ಆಗ್ರಾ: ಉತ್ತರ ಪ್ರದೇಶ ವಿಧಾನಸಭಾ ಚುನಾವಣೆ ಹತ್ತಿರವಾಗುತ್ತಿದ್ದಂತೆಯೇ ರಾಜ್ಯ ಕಾಂಗ್ರೆಸ್ ನಿಂದ ಪ್ರಿಯಾಂಕ ಗಾಂಧಿಯವರನ್ನು ಸಕ್ರಿಯ ರಾಜಕಾರಣಕ್ಕೆ ಕರೆತರುವುದಕ್ಕೆ ಒತ್ತಡ ಹೆಚ್ಚುತ್ತಿದೆ.

2017 ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅದೃಷ್ಟವನ್ನು ಬದಲಿಸುವ ಸಾಮರ್ಥ್ಯ ಪ್ರಿಯಾಂಕ ಗಾಂಧಿ ಅವರಿಗೆ ಮಾತ್ರ ಇದ್ದು, ಶೀಘ್ರವೇ ಅವರನ್ನು ಸಕ್ರಿಯ ರಾಜಕಾರಣಕ್ಕೆ ಕರೆತರಬೇಕೆಂಬ ಅಭಿಪ್ರಾಯ ಉತ್ತರ ಪ್ರದೇಶ ಕಾಂಗ್ರೆಸ್ ನಿಂದ ವ್ಯಕ್ತವಾಗಿದೆ. ಚುನಾವಣಾ ತಂತ್ರಗಾರಿಕಾ ನಿಪುಣ ಪ್ರಶಾಂತ್ ಕಿಶೋರ್ ಅವರನ್ನು ಭೇಟಿ ಮಾಡುತ್ತಿರುವ ಕಾಂಗ್ರೆಸ್ ನ ಬ್ಲಾಕ್ ಅಧ್ಯಕ್ಷರು, ಪ್ರಿಯಾಂಕ ಗಾಂಧಿ ಉತ್ತರ ಪ್ರದೇಶದ ಚುನಾವಣೆಯಲ್ಲಿ ಪಕ್ಷಕ್ಕೆ ಮಾರ್ಗದರ್ಶನ ನೀಡಿದರೆ ಮಾತ್ರ ಕಾಂಗ್ರೆಸ್ ರಾಜ್ಯದಲ್ಲಿ ಗೆಲ್ಲುವ ಅವಕಾಶ ಹೊಂದಿದೆ ಎಂಬ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.  ಬ್ಲಾಕ್ ಅಧ್ಯಕ್ಷರ ಅಭಿಪ್ರಾಯ ಸಂಗ್ರಹಣೆ ಮಾಡಿರುವ ಪ್ರಶಾಂತ್ ಕಿಶೋರ್ ಈ ವರೆಗೂ ತಮ್ಮ ಅಭಿಪ್ರಾಯವನ್ನು ಸಾರ್ವಜನಿಕವಾಗಿ ಬಹಿರಂಗಪಡಿಸಿಲ್ಲವಾದರೂ, ಇತ್ತೀಚೆಗೆ ಪ್ರಕಟವಾಗಿದ್ದ ವರದಿ ಪ್ರಕಾರ ಉತ್ತರ ಪ್ರದೇಶದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಹೆಚ್ಚು ಸ್ಥಾನಗಳನ್ನು ಗೆಲ್ಲಬೇಕೆಂದರೆ ಪ್ರಿಯಾಂಕ ಗಾಂಧಿ, ರಾಹುಲ್ ಗಾಂಧಿ ಅಥವಾ ಬ್ರಾಹ್ಮಣ ಸಮುದಾಯದ ಜನಪ್ರಿಯ ನಾಯಕನನ್ನು ಮುಖ್ಯಮಂತ್ರಿ ಅಭ್ಯರ್ಥಿಯನ್ನಾಗಿ ಘೋಷಿಸಿದರೆ ಉತ್ತಮ ಎಂಬ ನಿಲುವು ಹೊಂದಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.