ಹೃದಯಾಘಾತದಿಂದ ಕಾಂಗ್ರೆಸ್ ಸಂಸದ ಪ್ರವೀಣ್ ರಾಷ್ಟ್ರಪಾಲ್ ನಿಧನ
ಕಾಂಗ್ರೆಸ್ ಪಕ್ಷದ ರಾಜ್ಯಸಭಾ ಸದಸ್ಯ ಪ್ರವೀಣ್ ರಾಷ್ಟ್ರಪಾಲ್ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. ..

ನವದೆಹಲಿ: ಕಾಂಗ್ರೆಸ್ ಪಕ್ಷದ ರಾಜ್ಯಸಭಾ ಸದಸ್ಯ ಪ್ರವೀಣ್ ರಾಷ್ಟ್ರಪಾಲ್ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ.
76 ವರ್ಷದ ರಾಷ್ಟ್ರಪಾಲ್ ಅವರು ಮೂವರು ಪುತ್ರಿಯರು ಮತ್ತು ಒಬ್ಬ ಪುತ್ರನನ್ನು ಅಗಲಿದ್ದಾರೆ. ಅವರ ಪತ್ನಿ ಕೆಲ ವರ್ಷಗಳ ಹಿಂದೆ ನಿಧನರಾಗಿದ್ದರು.
ಎಐಸಿಸಿ ಕಾರ್ಯದರ್ಶಿಯಾಗಿದ್ದ ರಾಷ್ಟ್ರಪಾಲ್ ಅವರು ಉತ್ತರ ಪ್ರದೇಶದ ಉಸ್ತುವಾರಿ ನೋಡಿಕೊಳ್ಳುತ್ತಿದ್ದರು. ಆದಾಯ ತೆರಿಗೆ ನೌಕರರು ಮತ್ತು ಕೇಂದ್ರ ಸರ್ಕಾರಿ ನೌಕರರ ಸಂಘಗಳ ಚಳವಳಿಯಲ್ಲಿ ಸಕ್ರಿಯರಾಗಿದ್ದ ಅವರು ರಾಜಕೀಯಕ್ಕೆ ಧುಮುಕುವ ಮುನ್ನ ಆದಾಯ ತೆರಿಗೆ ಇಲಾಖೆಯಲ್ಲಿ ಅಸಿಸ್ಟೆಂಟ್ ಕಮೀಷನರ್ ಆಗಿ ಸೇವೆ ಸಲ್ಲಿಸಿದ್ದರು.
1999-2004ರ ಅವಧಿಯಲ್ಲಿ 13ನೇ ಲೋಕಸಭೆಗೆ ಆಯ್ಕೆಯಾಗಿದ್ದ ರಾಷ್ಟ್ರಪಾಲ್ 2006ರಿಂದ 2012ರವರೆಗೆ ಮೇಲ್ಮನೆ ಸದಸ್ಯರಾಗಿದ್ದರು. 2012ರಲ್ಲಿ ಅವರು ಮೇಲ್ಮನೆ ಸದಸ್ಯರಾಗಿ ಪುನರಾಯ್ಕೆಯಾಗಿದ್ದರು. ಹಿಂದಿನ ಲೋಕಸಭೆಯ 2ಜಿ ಹಗರಣಕ್ಕೆ ಸಂಬಂಧಿಸಿದ ಜಂಟಿ ಸಂಸದೀಯ ಸಮಿತಿ ಸದಸ್ಯರಾಗಿಯೂ ಅವರು ಸೇವೆ ಸಲ್ಲಿಸಿದ್ದರು. ಇನ್ನೂ ರಾಷ್ಟ್ರಪಾಲ್ ಅವರ ನಿಧನದಿಂದ ರಾಜ್ಯ ಸಭೆ ಕಲಾಪವನ್ನು ಮುಂದೂಡಲಾಯಿತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


