570 ಕೋಟಿ ಹಣ ಜಪ್ತಿ, ದಾಖಲೆ ಸಿಕ್ಕ ಬಳಿಕ ಬಿಡುಗಡೆ
ತಮಿಳುನಾಡು ವಿಧಾನಸಭಾ ಚುನಾವಣೆಯ ಮತದಾನ ಹತ್ತಿರವಾಗುತ್ತಿದ್ದಂತೆಯೇ ಚುನಾವಣಾ ಕಣ ರಂಗೇರಿದ್ದು, 3 ಕಂಟೇನರ್ ಗಳಲ್ಲಿ ಸಾಗಿಸುತ್ತಿದ್ದ ಬರೊಬ್ಬರಿ 570 ಕೋಟಿ ರು.ಹಣವನ್ನು ವಶಕ್ಕೆ ಪಡೆದಿದ್ದಾರೆ ಎನ್ನಲಾಗಿದೆ...

ಚೆನ್ನೈ: ತಮಿಳುನಾಡು ವಿಧಾನಸಭಾ ಚುನಾವಣೆಯ ಮತದಾನ ಹತ್ತಿರವಾಗುತ್ತಿದ್ದಂತೆಯೇ ಚುನಾವಣಾ ಕಣ ರಂಗೇರಿದ್ದು, 3 ಕಂಟೇನರ್ ಗಳಲ್ಲಿ ಸಾಗಿಸುತ್ತಿದ್ದ ಬರೊಬ್ಬರಿ 570 ಕೋಟಿ ರು.ಹಣವನ್ನು ವಶಕ್ಕೆ ಪಡೆದಿದ್ದಾರೆ ಎನ್ನಲಾಗಿದೆ.
ಇದೇ ಮೇ 16 ಸೋಮವಾರದಂದು ತಮಿಳುನಾಡಿನಲ್ಲಿ ವಿಧಾನಸಭೆಗೆ ಮತದಾನ ನಡೆಯಲಿದ್ದು, ರಾಜ್ಯಾದ್ಯಂತ ಮತದಾರನ್ನು ಸೆಳೆಯುವ ಅಂತಿಮ ಹಂತದ ಕಸರತ್ತು ಜೋರಾಗಿದೆ. ಈ ಹಿನ್ನಲೆಯಲ್ಲಿ ಮೈಯೆಲ್ಲಾ ಕಣ್ಣಾಗಿಸಿಕೊಂಡು ಕಾಯುತ್ತಿರುವ ಚುನಾವಣಾಧಿಕಾರಿಗಳು ಇಂದು 3 ಕಂಟೇನರ್ ಗಳಲ್ಲಿ ಹಣ ಸಾಗಿಸುತ್ತಿರುವ ಕುರಿತು ಮಾಹಿತಿ ಬಂದ ಕೂಡಲೇ ಕಂಟೇನರ್ ಸಾಗಿಸುತ್ತಿದ್ದ ಟ್ರಕ್ ಗಳ ಮೇಲೆ ದಾಳಿ ಮಾಡಿದ್ದಾರೆ. ಹಣವನ್ನು ತಿರುಪೂರ್ ಮಾರ್ಗವಾಗಿ ಕೊಯಮತ್ತೂರಿನಿಂದ ಆಂಧ್ರದ ವಿಶಾಖಪಟ್ಟಣಕ್ಕೆ ಹಣ ಸಾಗಿಸಲಾಗುತ್ತಿತ್ತು ಎಂದು ತಿಳಿದುಬಂದಿದೆ.
ಈ ವಿಚಾರ ತಿಳಿದು ಮಾರ್ಗ ಮಧ್ಯೆ ಅಧಿಕಾರಿಗಳು ಕಂಟೇನರ್ ಸಾಗಿಸುತ್ತಿದ್ದ ಟ್ರಕ್ ಗಳನ್ನು ತಡೆದು ಅದರಲ್ಲಿದ್ದ ಬರೊಬ್ಬರಿ 570 ಕೋಟಿ ರು.ಹಣವನ್ನು ಜಪ್ತಿ ಮಾಡಿದ್ದಾರೆ. ಆದರೆ ಕೆಲವೇ ಹೊತ್ತಿನ ಬಳಿಕ ಹಣದ ಬಗ್ಗೆ ಪರಿಶೀಲನೆ ನಡೆಸಿದ ಚುನಾವಣಾಧಿಕಾರಿಗಳು ಅದು ಮತದಾರರಿಗೆ ಹಂಚಲು ತಂದಿದ್ದ ಹಣವಲ್ಲ ಬದಲಿಗೆ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಬ್ಯಾಂಕ್ ಗೆ ಸೇರಿದ ಹಣ ಎಂಬ ವಿಚಾರ ತಿಳಿದು ಹಣವನ್ನು ಮತ್ತೆ ಬ್ಯಾಂಕ್ ಅಧಿಕಾರಿಗಳಿಗೆ ಒಪ್ಪಿಸಿದ್ದಾರೆ ಎಂದು ತಿಳಿದುಬಂದಿದೆ.
ತಮಿಳುನಾಡು ವಿಧಾನಸಭೆ ಚುನಾವಣೆ: ಇಂದು ಬಹಿರಂಗ ಪ್ರಚಾರಕ್ಕೆ ತೆರೆ
ಮತ್ತೊಂದೆಡೆ ಮೇ 16ರಂದು ನಡೆಯುವ ವಿಧಾನಸಭೆ ಚುನಾವಣೆ ನಿಮಿತ್ತ ಬಹಿರಂಗ ಪ್ರಚಾರಕ್ಕೆ ಇಂದು ತೆರೆ ಬೀಳುತ್ತಿದ್ದು, ಮತದಾರರನ್ನು ಸೆಳೆಯುವ ನಿಟ್ಟಿನಲ್ಲಿ ರಾಜಕೀಯ ಪಕ್ಷಗಳು ಅಂತಿಮ ಹಂತದ ಕಸರತ್ತು ನಡೆಸುತ್ತಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


