ದೇಶ

ಆಂಧ್ರದಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿದು 7 ಜನರ ದುರ್ಮರಣ

ನಿರ್ಮಾಣ ಹಂತದ ಕಟ್ಟಡ ಕುಸಿದ ಪರಿಣಾಮ 7 ಜನರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಆಂಧ್ರಪ್ರದೇಶದ...

ಆಂಧ್ರದಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿದು 7 ಜನರ ದುರ್ಮರಣ
ಗುಂಟೂರಿನಲ್ಲಿ ಕುಸಿದ ಬಹುಮಹಡಿ ಕಟ್ಟಡ
Published On :
ಗುಂಟೂರು: ನಿರ್ಮಾಣ ಹಂತದ ಕಟ್ಟಡ ಕುಸಿದ ಪರಿಣಾಮ 7 ಜನರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಆಂಧ್ರಪ್ರದೇಶದ ಗುಂಟೂರು ನಗರದ ಲಕ್ಷ್ಮೀಪುರಂನಲ್ಲಿ ನಡೆದಿದೆ. 
ನಿನ್ನೆ ರಾತ್ರಿ ನಿರ್ಮಾಣ ಹಂತದ ಬಹುಮಹಡಿ ಕಟ್ಟಡ ಕುಸಿದು ಬಿದ್ದಿದೆ. ಕಟ್ಟಡದ ಅವಶೇಷಗಡಿ ಸಿಲುಕಿ 7 ಜನರು ಸಾವನ್ನಪ್ಪಿದ್ದು, ಓರ್ವ ಗಾಯಗೊಂಡಿದ್ದಾರೆ. ಗಾಯಾಳುವನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಇನ್ನು ಮೃತಪಟ್ಟವರಲ್ಲಿ ನಾಲ್ವರು ವಿದ್ಯಾರ್ಥಿಗಳು ಎಂದು ತಿಳಿದು ಬಂದಿದೆ. 
ಮಾಲ್ ನಿರ್ಮಿಸಲು ಪೋಲ್ ಗಾಗಿ 30 ಅಡಿ ಆಳ ತೋಡಲಾಗಿತ್ತು. ಅಲ್ಲಿ ಕಾಂಕ್ರಿಟ್ ಹಾಕಲು ರಾತ್ರಿ ಒಳಗೆ ಇಳಿದಾಗ, ಮೇಲಿನಿಂದ ಕಟ್ಟಡ ಕುಸಿದಿರುವುದೇ ಈ ಅನಾಹುತಕ್ಕೆ ಕಾರಣ ಎಂದು ಹೇಳಲಾಗಿದೆ. ಇನ್ನು ಮೃತರ ಕುಟುಂಬಕ್ಕೆ ಆಂಧ್ರ ಸರ್ಕಾರ ತಲಾ ರು.5 ಲಕ್ಷ ಪರಿಹಾರ ಘೋಷಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.