ಕೇಂದ್ರ ಸಚಿವೆ ನಿವಾಸದಲ್ಲಿ ಗುಂಡು ಹಾರಿಸಿಕೊಂಡು ಮುಖ್ಯಪೇದೆ ಆತ್ಮಹತ್ಯೆ
ಕೇಂದ್ರ ಸಚಿವೆ ಉಮಾ ಭಾರತಿ ಅವರ ನಿವಾಸಕ್ಕೆ ನಿಯೋಜಿಸಲಾಗಿದ್ದ ಮುಖ್ಯ ಪೇದೆ ಗುಂಡು ಹಾರಿಸಿಕೊಂಡು...

Published On :
ನವದೆಹಲಿ: ಕೇಂದ್ರ ಸಚಿವೆ ಉಮಾ ಭಾರತಿ ಅವರ ನಿವಾಸಕ್ಕೆ ನಿಯೋಜಿಸಲಾಗಿದ್ದ ಮುಖ್ಯ ಪೇದೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.
ದೆಹಲಿ ಪೊಲೀಸ್ ಹೆಡ್ ಕಾನ್ಸ್ ಟೇಬಲ್ ನಿನ್ನೆ ರಾತ್ರಿ ಸುಮಾರು 10.30ರ ವೇಳೆಗೆ ತಮ್ಮ ಬಳಿ ಇದ್ದ ಸೇವಾ ಪಿಸ್ತೂಲಿನಿಂದ ಗುಂಡು ಹಾರಿಸಿಕೊಂಡಿದ್ದಾರೆ. ಗಾಯಗೊಂಡ ಅವರನ್ನು ಆಸ್ಪತ್ರೆಗೆ ಸಾಗಿಸಬೇಕಾದರೆ ಮೃತಪಟ್ಟಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಘಟನಾ ಸ್ಥಳದಲ್ಲಿ ಬಿದ್ದಿದ್ದ ಪಿಸ್ತೂಲನ್ನು ವಶಪಡಿಸಿಕೊಳ್ಳಲಾಗಿದೆ. ಘಟನೆ ಬಗ್ಗೆ ಹೆಚ್ಚು ಮಾಹಿತಿ ತಿಳಿದು ಬಂದಿಲ್ಲ ಎಂದು ಮೂಲಗಳು ತಿಳಿಸಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


